ಪಠಾಣ್ ಹಾಡು ಬಿಡುಗಡೆಗೂ ಮೊದಲು ಶಾರುಖ್ ಖಾನ್ 'ವೈಷ್ಣೋ ದೇವಿ' ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾದ ಬಹುನಿರೀಕ್ಷೆಯ ಹಾಡು ರಿಲೀಸ್ ಆಗಿದೆ. ಅನೇಕ ವರ್ಷಗಳ ಬಳಿಕ ಶಾರುಖ್ ಮತ್ತೆ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಸತತ ಸೋಲಿನಿಂದ ಕಂಗೆಟ್ಟಿದ್ದ ಶಾರುಖ್ ಸಿನಿಮಾ ಮಾಡುವುದನ್ನೆ ಬಿಟ್ಟಿದ್ದರು. ಇದೀಗ ನಾಲ್ಕೈದು ವರ್ಷಗಳ ಬಳಿಕ ಕಿಂಗ್ ಖಾನ್ ‘ಪಠಾಣ್’ ಸಿನಿಮಾ ಮೂಲಕ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುವ ಸೂಚನೆ ನೀಡಿದ್ದಾರೆ. ಪಠಾಣ್ ಸಿನಿಮಾದ ‘ಬೇಷರಂ ರಂಗ್...' ಹಾಡು ಬಿಡುಗಡೆಯಾಗಿದ್ದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಶಾರುಖ್ ಮತ್ತು ದೀಪಿಕಾ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಹಾಡು ಬಿಡುಗಡೆಗೂ ಮೊದಲು ಶಾರುಖ್ ಖಾನ್ 'ವೈಷ್ಣೋ ದೇವಿ' ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ತ್ರಿಕೂಟ ಬೆಟ್ಟದ ಮೇಲಿರುವ ವೈಷ್ಣೋದೇವಿ ಮುಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಶಾರುಖ್ ಖಾನ್ ಭಾನುವಾರ ತಡರಾತ್ರಿ ದೇಗುಲಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿದರು ಎನ್ನಲಾಗಿದೆ. ರಾತ್ರಿ ಸುಮಾರು 11.30ಕ್ಕೆ ದೇವಸ್ಥಾನಕ್ಕೆ ಆಗಮಿಸಿದ ಶಾರುಖ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶಾರುಖ್ ವೈಯಕ್ತಿಕ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರ ಜೊತೆ ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈಷ್ಣೋ ದೇವಿ ದರ್ಶನ ಪಡೆದು ಮುಂಬೈಗೆ ಬಂದ ಶಾರುಖ್ ಸಂಪೂರ್ಣ ಮುಖ ಮುಚ್ಚಿಕೊಂಡು ಬಂದಿದ್ದಾರೆ. ಮುಂಬೈ ಏರ್ಪೋರ್ಟ್ ನಲ್ಲಿ ಮುಖ ಮುಚ್ಚಿಕೊಂಡು ಹೊರಬರುತ್ತಿರುವ ವಿಡಿಯೋ ವೈರಲ್ ಆಗಿದೆ.
ಶಾರುಖ್ ಖಾನ್ ಮುಖ ಮುಚ್ಚಿಕೊಂಡು ಬರುತ್ತಿರುವ ವಿಡಿಯೋಗೆ ನೆಟ್ಟಿಗರು ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ. ರಾಜ್ ಕುಂದ್ರ ಹಾಗೆ ನೀವು ಮುಖ ಮುಚ್ಚಿಕೊಂಡು ಓಡಾಡುತ್ತಿದ್ದೀರಾ ಎಂದು ಕೇಳುತ್ತಿದ್ದಾರೆ. ಮತ್ತೋರ್ವ ಕಾಮೆಂಟ್ ಮಾಡಿ ಹಿಂದೂ ದೇವಸ್ಥಾನಕ್ಕೆ ಹೋಗಿ ಮುಖ ಮುಚ್ಚಿಕೊಂಡು ಬರ್ತಿದ್ದಾರಾ ಎಂದು ಕೇಳುತ್ತಿದ್ದಾರೆ. ಶಾರುಖ್ ಮುಖ ಮುಚ್ಚಿಕೊಂಡಿದ್ದೇಕೆ ಎಂದು ಇನ್ನೂ ರಿವೀಲ್ ಆಗಿಲ್ಲ.
Besharam Rang; ಶಾರುಖ್ ಖಾನ್ 'ಪಠಾಣ್' ಸಾಂಗ್ ರಿಲೀಸ್, ದೀಪಿಕಾ ಸಖತ್ ಹಾಟ್ ಎಂದ ಫ್ಯಾನ್ಸ್
ಪಠಾಣ್ ಸಿನಿಮಾದ ಬಗ್ಗೆ
ಶಾರುಖ್ ಖಾನ್ ಪಠಾಣ್ ಚಿತ್ರಕ್ಕೆ ಸಿದ್ದಾರ್ಥ್ ಆನಂದ್ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಪಠಾಣ್ ರಿಲೀಸ್ ಡೇಟ್ ಕೂಡ ಬಹಿರಂಗವಾಗಿದೆ. ಶಾರುಖ್ ಖಾನ್ ಸಿನಿಮಾ 2023ರ ಜನವರಿ 25ಕ್ಕೆ ರಿಲೀಸ್ ಆಗಲಿದೆ. ಅಂದಹಾಗೆ ಸಾಂಗ್ ರಿಲೀಸ್‌ಗೂ ಮೊದಲು ಸಿನಿಮಾತಂಡ ಟೀಸರ್ ರಿಲೀಸ್ ಮಾಡಿತ್ತು. ಆಗಲೆ ಅಭಿಮಾನಿಗಳು ಮೆಚ್ಚಿಕೊಂಡಿದ್ದರು. ಈಗ ಹಾಡಿನ ಮೂಲಕ ‘ಪಠಾಣ್’ ತಂಡ ಸದ್ದು ಮಾಡುತ್ತಿದೆ. ವಿಶಾಲ್-ಶೇಖರ್ ಸಂಗೀತ ನಿರ್ದೇಶನ ಮಾಡಿರುವ ‘ಬೇಷರಂ ರಂಗ್..’ ಹಾಡನ್ನು ತುಂಬಾ ಗ್ಲಾಮರಸ್ ಆಗಿ ಚಿತ್ರೀಕರಿಸಲಾಗಿದೆ. ಈ ಹಾಡಿನಲ್ಲಿ ನಟಿ ದೀಪಿಕಾ ಸ್ವಿಮ್ ಸೂಟ್‌ನಲ್ಲೇ ಕಾಣಿಸಿಕೊಂಡಿದ್ದಾರೆ. ದೀಪಿಕಾ ಬೋಲ್ಡ್ ಅವತಾರ ಕಂಡು ನೆಟ್ಟಿಗರು ಸಖತ್ ಹಾಟ್ ಎನ್ನುತ್ತಿದ್ದಾರೆ.
ಶಾರುಖ್ ಖಾನ್ ಸಿನಿಮಾಗಾಗಿ ಹಾಟ್ ಆದ ದೀಪಿಕಾ; ಸ್ವಿಮ್‌ಸೂಟ್ ಫೋಟೋ ವೈರಲ್
ಅಂದಹಾಗೆ ಪಠಾಣ್ ಹಿಂದಿ ಜೊತೆಗೆ ತೆಲುಗು ಹಾಗೂ ತಮಿಳಿನಲ್ಲೂ ಬಿಡುಗಡೆ ಆಗಲಿದೆ. ಈ ಸಿನಿಮಾದ ಮೇಲೆ ಅಭಿಮಾನಿಗಳ ಹೆೇಗೆ ನಿರೀಕ್ಷೆ ಇಟ್ಟುಕೊಂಡಿದ್ದಾರೋ ಹಾಗೆ ಶಾರುಖ್ ಕೂಡ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಗ್ಯಾಪ್‌ನ ಬಳಿಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಅಲ್ಲದೆ ದೊಡ್ಡ ಗೆಲುವು ಪಡೆಯಲೇಬೇಕಾದ ಅನಿವಾರ್ಯತೆ ಶಾರುಖ್ ಖಾನ್ ಅವರಿಗಿದೆ. ಹಾಗಾಗಿ ಈ ಚಿತ್ರಕ್ಕಾಗಿ ಅವರು ತುಂಬ ಶ್ರಮಪಟ್ಟಿದ್ದಾರೆ. ದೇಹ ಹುರಿಗೊಳಿಸಿ 6 ಪ್ಯಾಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಾಡಿನಲ್ಲಿ ಶಾರುಖ್ ಅವರ 6 ಪ್ಯಾಕ್ ದರ್ಶನ ಆಗಿದೆ. ಈ ವಯಸ್ಸಿನಲ್ಲೂ ಶಾರುಖ್ ಫಿಟ್ನೆಸ್ ನೋಡಿ ಅಭಿಮಾನಿಗಳು ಅಚ್ಚರಿ ಪಟ್ಟಿದ್ದಾರೆ. ಸಾಂಗ್ ಮೂಲಕ ಮತ್ತಷ್ಟು ಕುತೂಹಲ ಹೆಚ್ಚಿಸಿರುವ ಪಠಾಣ್ ಸಿನಿಮಾ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.