ಕೀರ್ತಿ ಸುರೇಶ್‌ಗೆ ಸಾಥ್ ನೀಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

Published : Jan 30, 2023, 03:39 PM ISTUpdated : Jan 30, 2023, 03:54 PM IST
ಕೀರ್ತಿ ಸುರೇಶ್‌ಗೆ ಸಾಥ್ ನೀಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

ಸಾರಾಂಶ

ದಕ್ಷಿಣ ಭಾರತೀಯ ಸಿನಿಮಾರಂಗದ ಖ್ಯಾತ ನಟಿ ಕೀರ್ತಿ ಸುರೇಶ್ ಮತ್ತು ನಾನಿ ನಟನೆಯ ಸಿನಿಮಾಗೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸಾಥ್ ನೀಡಿದ್ದಾರೆ. 

ಇದೀಗ ಪ್ಯಾನ್ ಇಂಡಿಯಾ ಸಿನಿಮಾಗಳ ಸಂಖ್ಯೆ ಹೆಚ್ಚಾಗಿವೆ. ಒಂದು ಭಾಷೆಯ ಸಿನಿಮಾ ಅನೇಕ ರಾಜ್ಯಗಳಲ್ಲಿ ಆಯಾಯ ಭಾಷೆಗೆ ಡಬ್ ಆಗಿ ರಿಲೀಸ್ ಆಗುತ್ತಿವೆ. ದಕ್ಷಿಣ ಭಾರತೀಯ ಸಿನಿಮಾರಂಗದಲ್ಲಿ ಪ್ಯಾನ್ ಇಂಡಿಯಾ ಚಿತ್ರಗಳು ಹೆಚ್ಚಾಗಿ ಬರುತ್ತಿವೆ. ಇದೀಗ ಟಾಲಿವುಡ್‌ನಲ್ಲಿ ಮತ್ತೊಂದು ನಿರೀಕ್ಷೆಯ ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಅದು ಮತ್ಯಾವುದು ಅಲ್ಲ ನಾನಿ ಮತ್ತು ಕೀರ್ತಿ ಸುರೇಶ್ ನಟನೆಯ ದಸರ. ಹೌದು ದಸರಾ ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ. ಸಿನಿಮಾ ರಿಲೀಸ್‌ಗೂ ಮೊದಲು ದಸರಾ ಟೀಸರ್ ಮೂಲಕ ಅಭಿಮಾನಿಗಳ ಮುಂದೆ ಬರ್ತಿದೆ. ತೆಲುಗು ಜೊತೆಗೆ ದಸರಾ ಕನ್ನಡ, ಹಿಂದಿ, ತಮಿಳು, ಮಲಯಾಳಂ ಭಾಷೆಯಲ್ಲಿ ರಿಲೀಸ್ ಆಗುತ್ತಿದ್ದು ಸ್ಟಾರ್  ನಟರು ಟೀಸರ್ ಬಿಡುಗಡೆ ಮಾಡುತ್ತಿದ್ದಾರೆ. 

ದಸರಾ ಕನ್ನಡ ವರ್ಷನ್ ಟೀಸರ್ ಅನ್ನು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ರಿಲೀಸ್ ಮಾಡುತ್ತಿದ್ದಾರೆ. ಈ ಬಗ್ಗೆ ಸಿನಿಮಾತಂಡ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದೆ. ಈಗಾಗಲೇ ದಸರಾ ಲುಕ್ ರಿಲೀಸ್ ಆಗಿದ್ದು ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದೀಗ ಟೀಸರ್ ಮೂಲಕ ಅಭಿಮಾನಿಗಳ ಮುಂದೆ ಬರ್ತಿದೆ. ದಸರಾ ಕನ್ನಡ ಟೀಸರ್ ರಕ್ಷಿತ್ ಶೆಟ್ಟಿ ರಿಲೀಸ್ ಮಾಡಿದ್ರೆ, ಬೇರೆ ಬೇರೆ ಭಾಷೆಯ ಟೀಸರ್ ಅನ್ನು ಆಯಾಯ ಭಾಷೆಯ ಸ್ಟಾರ್ ಬಿಡುಗಡೆ ಮಾಡುತ್ತಿದ್ದಾರೆ. ಬಾಲಿವುಡ್ ನಟ ಶಾಹಿದ್ ಕಪೂರ್, ಧನುಷ್, ದುಲ್ಕರ್ ಸಲ್ಮಾನ್ ಚಿತ್ರದ  ಟೀಸರ್ ಬಿಡುಗಡೆ ಮಾಡುತ್ತಿದ್ದಾರೆ. 

ದಳಪತಿ ವಿಜಯ್​ ಜೊತೆ ಭಾರಿ ಸುದ್ದಿಯಾಗಿದ್ದ ನಟಿ ಕೀರ್ತಿ ಸುರೇಶ್​ ಮದುವೆ?

ನಾನಿ ಹಾಗೂ ಕೀರ್ತಿ ಸುರೇಶ್ ನಟನೆಯ ದಸರಾ ಚಿತ್ರಕ್ಕೆ ಶ್ರೀಕಾಂತ್ ಒಡೆಲಾ ಆಕ್ಷನ್ ಕಟ್ ಹೇಳಿದ್ದಾರೆ. ಮಾರ್ಚ್ 30ರಂದು ಸಿನಿಮಾ ಗ್ರ್ಯಾಂಡ್ ರಿಲೀಸ್ ಆಗುತ್ತಿದೆ. ಈಗಾಗಲೇ ಹಾಡುಗಳ ಮೂಲಕ ಕ್ರೇಜ್ ಸೃಷ್ಟಿಸಿರುವ ಚಿತ್ರತಂಡ ಟೀಸರ್ ಝಲಕ್ ಈಗ ಟೀಸರ್ ಮೂಲಕ ಪ್ರೇಕ್ಷಕರ ಮನ ಗೆಲ್ಲಲು ಬರ್ತಿದೆ. 

ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಗಾಳಿ ಎಬ್ಬಿಸಿದ್ರಾ 'ಮಹಾನಟಿ'? #JusticeForSangeetha ಟ್ರೆಂಡ್

ಬಹು ದೊಡ್ಡ ತಾರಾಗಣ ಒಳಗೊಂಡ ಈ ಚಿತ್ರದಲ್ಲಿ ಕನ್ನಡದ ನಟ ದೀಕ್ಷಿತ್ ಶೆಟ್ಟಿ, ಸಮುದ್ರಕನಿ, ಸಾಯಿಕುಮಾರ್, ಜರೀನಾ ವಹಾಬ್ ಸೇರಿದಂತೆ ಅನೇಕ ಕಲಾವಿದರರು ನಟಿಸಿದ್ದಾರೆ. ಸಂತೋಷ್ ನಾರಾಯಣನ್ ಸಂಗೀತ ಚಿತ್ರಕ್ಕಿದೆ. ಸದ್ಯ ಟೀಸರ್ ಮೂಲಕ ಅಭಿಮಾನಿಗಳ ಮುಂದೆ ಬರ್ತಿರುವ ದಸರಾ ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳ ಹೆಚ್ಚಾಗಿದೆ. ನಟಿ ಕೀರ್ತಿ ಸುರೇಶ್ ಸಾಲು ಸಾಲು ಸಿನಿಮಾಗಳ ಸೋಲಿನ ಸುಳಿಯಲ್ಲಿ ಸಿಲುಕಿದ್ದಾರೆ. ದಸರಾ ಮೂಲಕ ಗೆಲುವಿನ ನಗು ಬೀರ್ತಾರಾ ಎಂದು ಕಾದುನೋಡಬೇಕು.  

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಜ್ಯೋತಿಷಿ ವೇಣು ಸ್ವಾಮಿ ಭವಿಷ್ಯ: ಸಮಂತಾ ಬಾಳಲ್ಲಿ ನಿಜವಾಯ್ತು, ಆದ್ರೆ ರಶ್ಮಿಕಾ ಲೈಫಲ್ಲಿ ಸುಳ್ಳಾಗಲಿ ಅಂತಿರೋ ಫ್ಯಾನ್ಸ್!
ಕೊಳಕು ಪ್ಯಾಂಟ್‌ ಬಗ್ಗೆ ಮಾತನಾಡಿದ್ರು, ಮೊಮ್ಮಗನ ಸಿನಿಮಾಕ್ಕೆ ಸಮಸ್ಯೆ ತಂದ್ರು: Jaya Bachchan ಬಾಯ್ಕಾಟ್‌ ಆಗ್ತಾರಾ?