
ಕಮಲ್ ಹಾಸನ್ (Kamal Haasan) ನಟನೆಯ ಬಹುನಿರೀಕ್ಷಿತ ಸಿನಿಮಾ 'ಇಂಡಿಯನ್ 2 (Indian 2)' ಜೂನ್ ನಲ್ಲಿ ಬಿಡುಗಡೆಯಾಗಲಿದೆ. ಹೀಗಾಗಿ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿದೆ. ಸದ್ಯ ಇಂಡಿಯನ್ 2 ಶೂಟಿಂಗ್ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಾರಂಭವಾಗಿವೆ.
ಇಂಡಿಯನ್ ಸೀಕ್ವೆಲ್ ಗೆ ಎಸ್ ಶಂಕರ್ (Shankar) ಆಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರವು 1996 ರ ‘ಇಂಡಿಯನ್’ಚಿತ್ರದ ಮುಂದುವರಿದ ಭಾಗವಾಗಿದೆ. ಚಿತ್ರವನ್ನು ಥಿಯೇಟರ್ಗಳಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜೊತೆಗೆ ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್ (Rakul Preet Singh), ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೋವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.
ಎಸ್. ಶಂಕರ್ ನಿರ್ದೇಶನದಲ್ಲಿ ಇಂಡಿಯಾ 2 ಸಿನಿಮಾ ಮೂಡಿ ಬರುತ್ತಿದ್ದು, ಸುಬಾಸ್ಕರನ್ ಅವರ ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.
ಅಂದಹಾಗೆ, ನಟ ಕಮಲ್ ಹಾಸನ್ ಹಾಗೂ ನಿರ್ದೇಶಕ ಶಂಕರ್ ಜೋಡಿಯ ಚಿತ್ರವು ತೆರೆಗೆ ಬರಲಿದೆ ಎಂದರೆ ಸಹಜವಾಗಿಯೇ ಭಾರೀ ನಿರೀಕ್ಷೆ ಮೂಡುತ್ತದೆ. ಕಾರಣ, ಈ ಮೊದಲು ತೆರೆಗೆ ಬಂದಿದ್ದ ಕಮಲ್-ಶಂಕರ್ ಜೋಡಿಯ ಚಿತ್ರವು ಭಾರೀ ಕಮಾಲ್ ಮಾಡಿತ್ತು. ಸೂಪರ್ ಹಿಟ್ ದಾಖಲಿಸಿದ್ದ ಇಂಡಿಯನ್ ಚಿತ್ರವು ಅಂದು ಮನೆಮಾತಾಗಿತ್ತು. ಈಗ ಅದೇ ಚಿತ್ರದ ಸೀಕ್ವೆಲ್ ಬರಲಿದ್ದು, ಇದು ಸಹಜವಾಗಿಯೇ ನಿರೀಕ್ಷೆಯನ್ನು ದುಪ್ಪಟ್ಟು ಗೊಳಿಸಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.