ರಜನಿಕಾಂತ್ ಸಿನಿಮಾದಲ್ಲಿ ಶಿವಣ್ಣ; ಇದು 'ಬೀಸ್ಟ್' ನಿರ್ದೇಶಕರ ಹೊಸ ಸಾಹಸ

Published : May 05, 2022, 01:49 PM IST
ರಜನಿಕಾಂತ್ ಸಿನಿಮಾದಲ್ಲಿ ಶಿವಣ್ಣ; ಇದು 'ಬೀಸ್ಟ್' ನಿರ್ದೇಶಕರ ಹೊಸ ಸಾಹಸ

ಸಾರಾಂಶ

ಶಿವರಾಜ್ ಕುಮಾರ್ ಸೂಪರ್ ಸ್ಟಾರ್ ರಜನಿಕಾಂತ್(Rajinikanth) ಜೊತೆ ತೆರೆಹಂಚಿಕೊಳ್ಳುತ್ತಿದ್ದಾರೆ ಎನ್ನುವ ಮಾತು ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಂದಹಾಗೆ ಈ ಸ್ಟಾರ್ ನಟರು ನಟಿಸುತ್ತಿರುವ ಸಿನಿಮಾಗೆ ಬೀಸ್ಟ್ ಖ್ಯಾತಿಯ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಸುದ್ದಿ ಕೇಳಿ ಶಿವಣ್ಣ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್(Shivarajkumar) ಸ್ಯಾಂಡಲ್ ವುಡ್‌ನ ಹೆಚ್ಚು ಬ್ಯುಸಿ ಇರುವ ನಟರಲ್ಲಿ ಒಬ್ಬರು. ಸಾಲು ಸಾಲು ಸಿನಿಮಾಗಳನ್ನು ಹೊಂದಿರುವ ಶಿವಣ್ಣ 125ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಶಿವಣ್ಣ ಜೊತೆ ಕೆಲಸ ಮಾಡಲು ಪರಭಾಷೆಯ ನಿರ್ದೇಶಕರು ಸಹ ತುದಿಗಾಲಿನಲ್ಲಿ ನಿಂತಿದ್ದಾರೆ. ಇದೀಗ ಶಿವರಾಜ್ ಕುಮಾರ್ ಅವರ ಹೊಸ ಸಿನಿಮಾದ ಬಗ್ಗೆ ಗುಸು ಗುಸು ಕೇಳಿಬರುತ್ತಿದೆ. ಹೌದು, ಶಿವರಾಜ್ ಕುಮಾರ್ ಸೂಪರ್ ಸ್ಟಾರ್ ರಜನಿಕಾಂತ್(Rajinikanth) ಜೊತೆ ತೆರೆಹಂಚಿಕೊಳ್ಳುತ್ತಿದ್ದಾರೆ ಎನ್ನುವ ಮಾತು ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಂದಹಾಗೆ ಈ ಸ್ಟಾರ್ ನಟರು ನಟಿಸುತ್ತಿರುವ ಸಿನಿಮಾಗೆ ಬೀಸ್ಟ್ ಖ್ಯಾತಿಯ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಸುದ್ದಿ ಕೇಳಿ ಶಿವಣ್ಣ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ.

ಆದರೆ ಈ ಬಗ್ಗೆ ಶಿವಣ್ಣ ಕಡೆಯಿಂದ ಅಥವಾ ಸಿನಿಮಾತಂಡದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ. ಒಂದುವೇಳೆ ನಿಜವೇ ಆಗಿದ್ದರೆ ಶಿವಣ್ಣ ಮತ್ತು ರಜನಿಕಾಂತ್ ಇಬ್ಬರು ಮೊದಲ ಬಾರಿಗೆ ತೆರೆಹಂಚಿಕೊಂಡಂತೆ ಆಗುತ್ತದೆ. ಅಲ್ಲದೇ ಮೊದಲ ಬಾರಿಗೆ ತಮಿಳು ಸಿನಿಮಾದಲ್ಲಿ ಶಿವಣ್ಣ ನಟಿಸಿದಂತೆಯೂ ಆಗುತ್ತದೆ. ಇನ್ನು ಈ ಸಿನಿಮಾ ರಜನಿಕಾಂತ್ ನಟನೆಯ 169ನೇ ಸಿನಿಮಾವಾಗಿದೆ. ಈ ಸಿನಿಮಾದಲ್ಲಿ ತಲೈವ ನಾಯಕನಾಗಿ ಮಿಂಚಿದ್ರೆ ಶಿವರಾಜ್ ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ.

ಈಗಾಗಲೇ ನಿರ್ದೇಶಕ ದಿಲೀಪ್ ಕುಮಾರ್ ನಟ ಶಿವರಾಜ್ ಕುಮಾರ್ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆೆ. ಇನ್ನೊಂದು ಸುತ್ತಿನ ಮಾತುಕತೆ ನಡೆಯಲಿದ್ದು ಸದ್ಯದಲ್ಲೇ ದಿಲೀಪ್ ಕುಮಾರ್ ಬೆಂಗಳೂರಿಗೆ ಆಗಮಿಸಲಿದ್ದಾರಂತೆ. ಈ ಮಾತುಕತೆ ಬಳಿಕ ಸಿನಿಮಾ ಫೈನಲ್ ಆಗಲಿದೆ. ಶಿವಣ್ಣ ಗ್ರೀನ್ ಸಿಗ್ನಲ್ ನೀಡಿದ ನಂತರ ಆಗಸ್ಟ್ ನಿಂದ ಚಿತ್ರೀಕರಣ ಪ್ರಾರಂಭ ಮಾಡಲು ಸಿನಿಮಾತಂಡ ನಿರ್ಧರಿಸಿದೆ.

ವೆಬ್ ಸೀರಿಸ್ ಲೋಕಕ್ಕೆ ಎಂಟ್ರಿ ಕೊಟ್ಟ ಶಿವಣ್ಣನಿಗೆ ಮಗಳು ನಿವೇದಿತಾ ಸಾಥ್

ಸೂಪರ್ ಸ್ಟಾರ್ ರಜನಿಕಾಂತ್ ಕನ್ನಡದ ಸಿನಿಮಾಗಳಲ್ಲೂ ನಟಿಸಿದ್ದಾರೆ. ಅಲ್ಲದೆ ಕನ್ನಡ ಸಿನಿಮಾರಂಗದ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅದರಲ್ಲೂ ಡಾ.ರಾಜ್ ಕುಟುಂಬದ ಜೊತೆ ಆಪ್ತರಾಗಿದ್ದಾರೆ. ಹಾಗಾಗಿ ಶಿವಣ್ಣ ಮತ್ತು ರಜನಿಕಾಂತ್ ಒಟ್ಟಿಗೆ ನಟಿಸುತ್ತಿರುವುದು ಅಭಿಮಾನಿಗಳಲ್ಲೂ ಸಂತಸ ಮೂಡಿಸಿದ್ದು ಕುತೂಹಲ ಹೆಚ್ಚಾಗಿದೆ.

ಶಿವರಾಜ್ ಕುಮಾರ್ ಸಿನಿಮಾ ವಿಚಾರಕ್ಕೆ ಬರುವುದಾದರೆ ಶಿವಣ್ಣ ಸದ್ಯ ಭೈರಾಗಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ವೇದ ಸಿನಿಮಾ ಕೂಡ ಶಿವಣ್ಣ ಕೈಯಲ್ಲಿದೆ. ನಿರ್ದೇಶಕ ಯೋಗರಾಜ್ ಭಟ್ ಜೊತೆ ಮತ್ತೊಂದು ಸಿನಿಮಾ ಶಿವಣ್ಣ ಬಳಿ ಇದೆ. ಇದೀಗ ದಿಲೀಪ್ ಕುಮಾರ್ ಸಿನಿಮಾ ಕೂಡ ಸದ್ದು ಮಾಡುತ್ತಿದೆ. ಶಿವಣ್ಣ ಕೊನೆಯದಾಗಿ ಭಜರಂಗಿ-2 ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು.

ಮಂಗಳೂರು ಕಮಿಷನರ್ ಹಾಡಿಗೆ ಪೊಲೀಸರ ಜೊತೆ ನಟ ಶಿವಣ್ಣ ಮಸ್ತ್ ಡ್ಯಾನ್ಸ್

ಇನ್ನು ನಿರ್ದೇಶಕ ದಿಲೀಪ್ ಕುಮಾರ್ ದಳಪತಿ ವಿಜಯ್ ನಟನೆಯ ಬೀಸ್ಟ್ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದರು. ಈ ಸಿನಿಮಾ ಕೆಜಿಎಫ್-2 ಬಿಡುಗಡೆಗೂ ಒಂದು ದಿನ ಮೊದಲು ರಿಲೀಸ್ ಆಗಿತ್ತು. ಆದರೆ ಕೆಜಿಎಫ್ 2 ಮುಂದೆ ಬೀಸ್ಟ್ ಸಿನಿಮಾ ಮಂಕಾಗಿದ್ದು ಪ್ರೇಕ್ಷಕರನ್ನು ಸೆಳೆಯುವಲ್ಲಿ ವಿಫಲವಾಗಿದೆ. ಇದೀಗ ಶಿವಣ್ಣ ಮತ್ತು ರಜನಿಕಾಂತ್ ಇಬ್ಬರನ್ನೂ ಒಟ್ಟಿಗೆ ತೆರೆಮೇಲೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ಇಬ್ಬರನ್ನು ಒಂದೇ ಸಿನಿಮಾದಲ್ಲಿ ಕರೆತರುವ ಮೂಲಕ ಯಾವ ರೀತಿಯ ಸಿನಿಮಾ ಮಾಡಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಕೊನೆಗೂ ಅದಿತಿ ರಾವ್ ಹೈದರಿ ಗುಟ್ಟು ರಟ್ಟಾಯ್ತು.. ಎಷ್ಟು ದಿನ ಅಂತ ಮುಚ್ಚಿಡೋಕಾಗುತ್ತೆ ಹೇಳಿ..!?
ಸಾವಿರ ಕೋಟಿ ಕುಬೇರ 'ಮಹಾಪುರುಷ'ನಿಗೆ ಡಿವೋರ್ಸ್ ಕೊಡ್ತಾರಾ ಈ ನಟಿ? ಇದೆಂಥ ಶಾಕಿಂಗ್ ಮ್ಯಾಟರ್!