ಲತಾ ಮಂಗೇಶ್ಕರ್ ಆರೋಗ್ಯದ ಬಗ್ಗೆ ವದಂತಿ: ಎಸ್ ಪಿ ಬಿ ಅಸಮಾಧಾನ!

Published : Nov 17, 2019, 11:29 AM IST
ಲತಾ ಮಂಗೇಶ್ಕರ್ ಆರೋಗ್ಯದ ಬಗ್ಗೆ ವದಂತಿ: ಎಸ್ ಪಿ ಬಿ ಅಸಮಾಧಾನ!

ಸಾರಾಂಶ

  ಸಂಗೀತ ಲೋಕದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಆರೋಗ್ಯದ ಬಗ್ಗೆ ತಪ್ಪು ವದಂತಿ ಹರಿದಾಡುತ್ತಿದ್ದು ಎಸ್ ಪಿ ಬಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭಾರತದ ಶ್ರೇಷ್ಠ ಗಾಯಕಿ ಲತಾ ಮಂಗೇಶ್ಕರ್ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಕಾರಣ ಮುಂಬೈ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸದ್ಯಕ್ಕೆ ಗಂಭೀರ ಸ್ಥಿತಿಯಿಂದ ಹೊರ ಬಂದಿದ್ದಾರೆ. ಆರೋಗ್ಯದಲ್ಲಿ ತುಸು ಚೇತರಿಕೆ ಕಂಡು ಬಂದಿದೆ ಎನ್ನಲಾಗಿದೆ. ಆದರೂ ಅವರ ಆರೋಗ್ಯದ ಬಗ್ಗೆ ಆಗಾಗ ವದಂತಿಗಳು ಕೇಳಿ ಬರುತ್ತಿವೆ. ಅವರ ವಿಧಿವಶರಾಗಿದ್ದಾರೆ ಎಂಬ ಸಂದೇಶಗಳು ಓಡಾಡುತ್ತಿವೆ. ಇದಕ್ಕೆ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಬೇಸರ ವ್ಯಕ್ತಪಡಿಸಿದ್ದಾರೆ.

ಗಾನಕೋಗಿಲೆ ಲತಾ ಮಂಗೇಶ್ಕರ್ ಗೆ 90 ರ ಸಂಭ್ರಮ

'ತಪ್ಪು ವದಂತಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು ತಪ್ಪು. ಎರಡು ದಿನಗಳಿಂದ ಲತಾ ಜೀ ಅವರ ಆರೊಗ್ಯದ ಬಗ್ಗೆ ಹರಿದಾಡುತ್ತಿರುವ ವದಂತಿ ತಪ್ಪು. ನಾನು ಅವರನ್ನು ಸಂಪರ್ಕಿಸಿ ಆರೋಗ್ಯದ ಬಗ್ಗೆ ವಿಚಾರಿಸಿದ್ದೇನೆ ಅವರು ಸುದಾರಿಸಿಕೊಳ್ಳುತ್ತಿದ್ದಾರೆ. ಈಗ ಆರೋಗ್ಯವಾಗಿದ್ದಾರೆ. ಕೋಟ್ಯಂತರ ಜನರ ಆಶೀರ್ವಾದ ಅವರ ಮೇಲಿದೆ. ದಯವಿಟ್ಟು ತಪ್ಪು ಸುದ್ದಿಯನ್ನು ಎಲ್ಲೆಡೆ ಶೇರ್ ಮಾಡಿಕೊಳ್ಳಬೇಡಿ' ಎಂದು ವಿಡಿಯೋ ಮೂಲಕ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

 

ಸೆ.28 ರಂದು, 1929ರಲ್ಲಿ ಜನಿಸಿದ ಲತಾ ಮಂಗೇಶ್ಕರ್ ಹಿಂದಿ ಸೇರಿದಂತೆ 36 ಭಾಷೆಗಳಲ್ಲಿ ಹಿನ್ನೆಲೆ ಗಾಯಕಿಯಾಗಿ ಭಾರತದ ಗಾನ ಕೋಗಿಲೆ ಎನಿಸಿಕೊಂಡಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ
ನಾನೇನು ಸಾಧುವಲ್ಲ.. ಹೀಗೆ ಮಾತಾಡೋಕೆ ನನಗೂ ಬರುತ್ತೆ: ಪುಷ್ಪ ನಟಿ ಹೇಳಿದ್ದೇನು?