Pushpa Press Meet: ಸಿನಿಮಾ ಚೆನ್ನಾಗಿ ಮಾಡಿದ್ದೇವೆ, ಶ್ರೀವಲ್ಲಿ ಪಾತ್ರ ನಂಗೆ ಸ್ಪೆಷಲ್ ಎಂದ ಕಿರಿಕ್ ಚೆಲುವೆ

By Suvarna News  |  First Published Dec 15, 2021, 1:50 PM IST
  • ಬೆಂಗಳೂರಿಗೆ ಬಂದ ಕಿರಿಕ್ ಚೆಲುವೆ
  • ಅಪ್ ಕಮಿಂಗ್ ಸಿನಿಮಾ ಪುಷ್ಪ ಪ್ರೆಸ್‌ಮೀಟ್‌ನಲ್ಲಿ ರಶ್ಮಿಕಾ ಮಂದಣ್ಣ
  • ನಮ್ಮೂರಿಗೆ ಬಂದು ಖುಷಿ ಆಯ್ತು ಎಂದ ಕೊಡಗಿನ ಚೆಲುವೆ ಮನಸಿನ ಮಾತುಗಳಿವು

ನಮ್ಮೂರಿಗೆ ಬಂದು ತುಂಬಾ ಖುಷಿಯಾಗುತ್ತಿದೆ. 17 ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಸಿನಿಮಾ ತುಂಬಾ ಚನ್ನಾಗಿ ಮಾಡಿದ್ದೇವೆ. 
ಶ್ರೀವಲ್ಲಿ ಪಾತ್ರ ನನಗೆ ತುಂಬಾ ಸ್ಪೆಷಲ್. ಪುಷ್ಪ ಸಿನಿಮಾ ನಾರ್ಮಲ್ ಸ್ಟೋರಿ ಅಲ್ಲ ಎಂದು ಕಿರಿಕ್ ಚೆಲುವೆ ರಶ್ಮಿಕಾ ಮಂದಣ್ಣ(Rashmika Mandanna) ಹೇಳಿದ್ದಾರೆ.

ಬೆಂಗಳೂರಿನಲ್ಲಿ(Bengaluru) ಸಿನಿಮಾ ಪ್ರೆಸ್‌ಮೀಟ್‌ನಲ್ಲಿ(Press Meet) ಮಾತನಾಡಿದ ರಶ್ಮಿಕಾ, ನಾನು ಅಲ್ಲು ಅರ್ಜುನ್(Allu Arjun) ಸರ್ ಜೊತೆ ನಟಿಸಿದ್ದು ತುಂಬಾ ಖುಷಿ ಕೊಟ್ಟಿದೆ. ಅಲ್ಲು ಅರ್ಜುನ್ ಸರ್ ಗೆ ಇರೋ ಹೆಸರಿಗೆ ನಾನು ಫುಲ್ ಫಿಲ್ ಮಾಡುವಷ್ಡು ಕೆಲಸ ಮಾಡಿದ್ದೇನೆ. ಡಾಲಿ ಧನಂಜಯ್ ಜೊತೆ ಕೂಡ ನಟಿಸಿದ್ದೇನೆ. ಸೆಟ್ ನಲ್ಲಿ ಕನ್ನಡದಲ್ಲಿ ಮಾತನಾಡುತ್ತಿದ್ದೆ ಎಂದಿದ್ದಾರೆ ರಶ್ಮಿಕಾ. ಟಾಲಿವುಡ್‌ನ ಬಹುನಿರೀಕ್ಷಿತ ಸಿನಿಮಾ ಪುಷ್ಪ(Pushpa) ಚಿತ್ರದ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ ಬಂದಿದೆ. ಪುಷ್ಪ  ಸುಕುಮಾರ್ ನಿರ್ದೇಶನದ ಅಲ್ಲು ಅರ್ಜುನ್ ಅಭಿನಯದ ಬಹುನಿರೀಕ್ಷಿತ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಅಲ್ಲು ಅರ್ಜನ್ ,ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್ ಭಾಗಿಯಾಗಿದ್ದಾರೆ.

Tap to resize

Latest Videos

ಸ್ಟೈಲಿಷ್ ಸ್ಟಾರ್‌ಗೆ ಲವ್ಲೀ ಗಿಫ್ಟ್ ಕೊಟ್ಟ ರಶ್ಮಿಕಾ, ಉಡುಗೊರೆ ಹಿಂದಿನ ಕಾರಣವಿದು

ಪುಷ್ಪ ಡಿ.17 ಕ್ಕೆ ವಿಶ್ವದಾದ್ಯಂತ ಅದ್ದೂರಿಯಾಗಿ ರಿಲೀಸ್ ಆಗಲಿದೆ. ಹೀಗಾಗಿ ಬೆಂಗಳೂರಿನ ಖಾಸಗಿ ಹೊಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದು ಪುಷ್ಪ ಚಿತ್ರ ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದೆ. ಇದೇ ವಾರ ಮೊದಲನೆ ಭಾಗ ರಿಲೀಸ್ ಆಗಲಿದೆ. ಹೀಗಾಗಿ ಬೆಂಗಳೂರಿನಲ್ಕಿ ಪುಷ್ಪ ಸಿನಿಮಾ ಪ್ರಚಾರ ಭರದಿಂದ ಸಾಗಿದೆ.

ಪ್ರೆಸ್‌ಮೀಟ್‌ನಲ್ಲಿ ಮಾತನಾಡಿದ ಧನಂಜಯ್, ಅಲ್ಲು ಅರ್ಜುನ್ ಜೊತೆ ಕೆಲಸ ಮಾಡಿದ್ದು ತುಂಬಾ ಖುಷಿ‌ ಆಯ್ತು. ಆರ್ಯ ಸಿನಿಮಾದಿಂದ ಅಲ್ಲು ಅರ್ಜುನ್ ಹಾಗು ಸುಕುಮಾರ್ ರನ್ನ ಫಾಲೋ ಮಾಡಿಕೊಂಡು ಬಂದಿದ್ದೇನೆ. ಪುಷ್ಪ ಆಗಿ ಅಲ್ಲು ಅರ್ಜುನ್ ಹಾಗು ಶ್ರೀವಲ್ಲಿಯಾಗಿ ರಶ್ಮಿಕಾರನ್ನ ನಾನು ಸೆಟ್ಟಲ್ಲಿ ನೋಡುತ್ತಿದ್ದೆ. ಇಬ್ಬರ 100% ಎಫರ್ಟ್ ನೋಡುತ್ತಿದ್ದೆ. ಸಿನಿಮಾ ಮಾಡಿದ್ದು ತುಂಬಾ ಎಂಜಾಯ್ ಮಾಡಿದ್ದೇವೆ. ಅಲ್ಲು ಅರ್ಜುನ್ ಗೆ ಐಕಾನ್ ಸ್ಟಾರ್ ಅಂತ ಹೆಸರು ಇಟ್ಡಿದ್ದು ಕರೆಕ್ಟ್ ಆಗಿದೆ ಎಂದಿದ್ದಾರೆ.

ರಶ್ಮಿಕಾರನ್ನು ಹೊಗಳಿದ ಅಲ್ಲು:

ಪ್ರೆಸ್‌ಮೀಟ್‌ನಲ್ಲಿ ಮಾತನಾಡಿದ ಅಲ್ಲು ಅರ್ಜುನ್, 18 ವರ್ಷ ಇದ್ದಾಗ ನಾನು ಬೆಂಗಳೂರಿಗೆ ಬಂದಿದ್ದೆ. ಆಗ ನನ್ನ ಸಿನಿಮಾ ರಿಲೀಸ್ ಆಗುತ್ತೆ ಅಂತ ನಾನು ಅನ್ಕೊಂಡಿರಲಿಲ್ಲ. ಈಗ ಕರ್ನಾಟಕದಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ಧನಂಜಯ್ ಸಿನಿಮಾದಲ್ಲಿ ನಟಿಸಿದ್ದಾರೆ. ರಶ್ಮಿಕಾ ಮಂದಣ್ಣ ನ್ಯಾಷನಲ್ ಕ್ರಶ್. ಕನ್ನಡದಿಂದ ಚಿತ್ರರಂಗಕ್ಕೆ ಬಂದ ರಶ್ಮಿಕಾ ಇವತ್ತು ದೇಶಾದ್ಯಂತ ಹೆಸರು ಮಾಡಿದ್ದಾರೆ. ಇದು ಕನ್ನಡಿಗರಿಗೆ ಹೆಮ್ಮೆ ವಿಚಾರ ಎಂದಿದ್ದಾರೆ. ಈ‌ ಸಿನಿಮಾಗೆ ಡಬ್ಬಿಂಗ್ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದ. ದೇವಿ ಶ್ರೀ ಪ್ರಸಾದ್ ಅದ್ಭುತವಾದ ಮ್ಯೂಸಿಕ್ ಕೊಟ್ಟಿದ್ದಾರೆ. ಕರ್ನಾಟಕದಲ್ಲಿರೋ ನನ್ನ ಅಭಿಮಾನಿಗಳಿಗೆ ಧನ್ಯವಾದಗಳು ಎಂದಿದ್ದಾರೆ.

ಅಪ್ಪು ಮನೆಗೆ ಭೇಟಿ:

ಪುನೀತ್ ರಾಜ್ ಕುಮಾರ್ ಬಗ್ಗೆ ಮುಖ್ಯವಾಗಿ ಮಾತನಾಡಲೇ ಬೇಕು. ಪುಷ್ಪ ರಿಲೀಸ್ ಟೈಂ ನಲ್ಲಿ ನಾನು ಪುನೀತ್ ಮನೆಗೆ ಹೋಗೋದು ಸರಿ ಅಲ್ಲ. ನಾನು ಪುಷ್ಪ ಸಿನಿಮಾ ರಿಲೀಸ್ ಆದ ನಂತರ ಮತ್ತೆ ಬೆಂಗಳೂರಿಗೆ ಬಂದು ಅಪ್ಪು ಸರ್ ಮನೆಗೆ ಹೋಗುತ್ತೇನೆ ಎಂದಿದ್ದಾರೆ. ಅವರ ಕುಟುಂಬ ಕ್ಕೆ ದೇವರು ಶಕ್ತಿ ನೀಡಬೇಕು. ನಾನು ಕನ್ನಡದಲ್ಲಿ ಡಬ್ಬಿಂಗ್ ಮಾಡಬೇಕು ಅಂದುಕೊಂಡಿದ್ದೆ ಆದರೆ ಟೈಂ ಸಿಗಲಿಲ್ಲ.. ಹೀಗಾಗಿ ಬೇರೆಯವರು ಡಬ್ಬಿಂಗ್ ಮಾಡಿದ್ದಾರೆ. ಪಾರ್ಟ್ 2 ಗೆ ನಾನೆ ಕನ್ನಡಸಲ್ಲಿ ದಬ್ಬಿಂಗ್ ಮಾಡುತ್ತೇನೆ ಎಂದಿದ್ದಾರೆ.

click me!