
ಚೆನ್ನೈ(ಆ. 14) ಕೊರೋನಾ ಸೋಂಕಿಗೆ ಗುರಿಯಾಗಿರುವ ಹಿರಿಯ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಚೇತರಿಸಿಕೊಳ್ಳುತ್ತಿದ್ದಾರೆ. ಆಸ್ಪತ್ರೆಯಿಂದಲೇ ಅಭಿಮಾನಿಗಳಿಗೆ ಸಂದೇಶ ಕಳಿಸಿದ್ದಾರೆ.
ಕೊರೋನಾ ಸೋಂಕಿಗೆ ಗುರಿಯಾಗಿರುವ ಹಿರಿಯ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಶುಕ್ರವಾರ ಮಧ್ಯಾಹ್ನ ವರದಿಯಾಗಿತ್ತು. ಈ ಬಗ್ಗೆ ಚೆನ್ನೈ ಎಂಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ತಿಳಿಸಿತ್ತು.
ಕೊರೋನಾ ಗೆದ್ದು ಬಂದ ಅಮಿತಾಭ್ ಬಚ್ಚನ್
ಹಿರಿಯ ಗಾಯಕರ ಆರೋಗ್ಯ ಸ್ಥಿರವಾಗಿದೆ. ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಎಸ್‌ಪಿಬಿ ಆಪ್ತ ಶ್ರೀನಿವಾಸ್ ತಿಳಿಸಿದ್ದಾರೆ.
ಎರಡು ಮೂರು ದಿನಗಳಿಂದ ಸ್ವಲ್ಪ ಆರೋಗ್ಯದಲ್ಲಿ ಸಮಸ್ಯೆ ಇತ್ತು. ಜ್ವರ ಹಾಗೂ ಶೀತ ಇತ್ತು. ಹಾಗಾಗಿ ಆಸ್ಪತ್ರೆಗೆ ಬಂದು ಚೆಕ್ ಮಾಡಿಸಿದೆ. ಪರೀಕ್ಷೆ ಮಾಡಿಸಿದಾಗ ಕೊರೋನಾ ಸೋಂಕು ಇರುವುದು ಗೊತ್ತಾಗಿದೆ ಹಾಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆನೆ ಎಂದು ಎಸ್‌ಪಿಬಿ ವಿಡಿಯೋ ಮೂಲಕ ತಮಗೆ ಕೊರೋನಾ ಸೋಂಕು ದೃಢಪಟ್ಟಿರುವುದನ್ನು ತಿಳಿಸಿದ್ದರು.
74 ವರ್ಷದ ಗಾಯಕ ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಭಾರತದ ಬಹುತೇಕ ಎಲ್ಲ ಭಾಷೆಗಳ ಸಿನಿಮಾ ರಂಗದಲ್ಲಿಯೂ ಪರಿಚಯ. ಕನ್ನಡದಲ್ಲಿಯೇ ಸಾವಿರಾರು ಹಾಡುಗಳನ್ನು ಹಾಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.