
ಮುಂಬೈ(ಜೂ. 16) ಬಾಲಿವುಡ್ ನಟ ಸುಶಾಂತ್ ಸಿಂಗ್ ಚಿತ್ರರಂಗ ಅಗಲಿ ತಿಂಗಳೂ ಕಳೆದಿದೆ. ಸುಶಾಂತ್ ಸಿಂಗ್ ಸಾವು ಆತ್ಮಹತ್ಯೆ ಅಲ್ಲ, ಇದೊಂದು ಕೊಲೆ ಎಂದು ಅಭಿಮಾನಿಗಳು ಮತ್ತು ಸುಶಾಂತ್ ಕುಟುಂಬದವರು ಹೇಳಿಕೊಂಡೆ ಬಂದಿದ್ದರು. ಸುಶಾಂತ್ ಸಾವಿನ ತನಿಖೆ ಸಿಬಿಐನಿಂದ ಆಗಬೇಕು ಎಂಬ ಒತ್ತಾಯ ಕೇಳಿಬಂದಿತ್ತು.
ಈ ಕಾರಣಕ್ಕೆ ಹಿರಿಯ ವಕೀಲ ಸುಬ್ರಮಣಿಯನ್ ಸ್ವಾಮಿ ಅವರಿಗೆ ಈ ಸಾವಿನ ತನಿಖೆ ಸಿಬಿಐಗೆ ನೀಡಬೇಕೆ ಅಥವಾ ಬೇಡವೇ ಎಂದು ತಿಳಿಸಲು ಹೇಳಲಾಗಿತ್ತು. ಇದೀಗ ಸ್ವಾಮಿ ತಮ್ಮ ಅಭಿಪ್ರಾಯ ಸಲ್ಲಿಸಿದ್ದಾರೆ. ಸುಶಾಂತ್ ಸಿಂಗ್ ಸಾವು ಸಿಬಿಐ ತನಿಖೆಯಾಗಲಿ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಸುಶಾಂತ್ ಸಾವು; ಸಲ್ಮಾನ್, ಕರಣ್ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾ
ಜನರಿಂದ ಸಿಬಿಐ ತನಿಖೆ ಒತ್ತಾಯ ಕೇಳಿಬಂದಿತ್ತು. ಸುಶಾಂತ್ ಸಾವಿಗೆ ಸಿಬಿಐ ತನಿಖೆ ಅಗತ್ಯವಿದೆಯೇ ಎಂಬ ವಿಚಾರಕ್ಕೆ ಸಂಬಂಧಿಸಿ ತನಿಖೆ ಮುಂದುವರಿಸಲು ಸುಬ್ರಮಣಿಯನ್ ಸ್ವಾಮಿ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿತ್ತು.
ಮುಂಬೈನ ತಮ್ಮ ನಿವಾಸದಲ್ಲಿ ಸುಶಾಂತ್ ಸಿಂಗ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಪೊಲೀಸರು ಇದನ್ನು ಆತ್ಮಹತ್ಯೆ ಎಂದು ತಿಳಿಸಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.