
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್(Sudeep)ಅಭಿನಯದ ಬಹುನಿರೀಕ್ಷೆಯ ವಿಕ್ರಾಂತ್ ರೋಣ(Vikrant Rona) ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಏಪ್ರಿಲ್ 2 ಯುಗಾದಿ ಹಬ್ಬದ ದಿನ ಸಿನಿಮಾ ಟೀಸರ್ ಬಿಡುಗಡೆ ಮಾಡುವುದಾಗಿ ಸಿನಿಮಾತಂಡ ಈಗಾಗಲೇ ಅನೌನ್ಸ್ ಮಾಡಿತ್ತು. ಆದರಂತೆ ಇದೀಗ ವಿಕ್ರಾಂತ್ ರೋಣ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.
ಮಕ್ಕಳ ಗುಮ್ಮದ ಕಥೆಯಿಂದ ಪ್ರಾರಂಭವಾಗುವ ಟೀಸರ್ ಚಿತ್ರದ ಮೇಲಿನ ಕುತೂಹಲ ಹೆಚ್ಚಿಸಿದೆ. ಅಂದಹಾಗೆ ಟೀಸರ್ ನಲ್ಲಿ ಸುದೀಪ್ ಲುಕ್ ಬಿಟ್ಟಿರೆ ಬೇರೆ ಯಾರ ದರ್ಶನವೂ ಆಗಿಲ್ಲ. ಈಗಾಗಲೇ ಬಿಡುಗಡೆಯಾಗಿರುವ ಸುದೀಪ್ ಲುಕ್ ಈ ಟೀಸರ್ ನಲ್ಲಿ ರಿವೀಲ್ ಆಗಿದೆ. ಅಂದಹಾಗೆ ವಿಕ್ರಾಂತ್ ರೋಣ ಸಿನಿಮಾದ ಟೀಸರ್ ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ರಿಲೀಸ್ ಆಗಿದೆ. ತಮಿಳಿನಲ್ಲಿ ನಟ ಸಿಂಬು ಬಿಡುಗಡೆ ಮಾಡಿದ್ರೆ, ತೆಲುಗಿನಲ್ಲಿ ಮೆಗಾಸ್ಟಾರ್ ಚಿರಂಜೀವಿ ಬಿಡುಗಡೆ ಮಾಡಿದ್ದಾರೆ. ಇನ್ನು ಮಲಯಾಳಂನಲ್ಲಿ ಮೋಹನ್ ಲಾಲ್ ರಿಲೀಸ್ ಮಾಡಿದ್ರೆ ಹಿಂದಿಯಲ್ಲಿ ಸಲ್ಮಾನ್ ಖಾನ್ ಬಿಡುಗಡೆ ಮಾಡಿ ವಿಕ್ರಾಂತ್ ರೋಣ ತಂಡಕ್ಕೆ ಶುಭ ಹಾರೈಸಿದ್ದಾರೆ.
ಇನ್ನು ವಿಶೇಷ ಎಂದರೆ ಟೀಸರ್ ಬಿಡುಗಡೆ ಜೊತೆಗೆ ಸಿನಿಮಾ ರಿಲೀಸ್ ಡೇಟ್ ಕೂಡ ಬಹಿರಂಗ ವಾಗಿದೆ. ಅಂದಹಾಗೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ವಿಕ್ರಾಂತ್ ರೋಣ ಸಿನಿಮಾ ಜುಲೈ 28ರಂದು ತೆರೆಗೆ ಬರುತ್ತಿದೆ. ಟೀಸರ್ ಕೊನೆಯಲ್ಲಿ ಸಿನಿಮಾದ ಬಿಡುಗಡೆ ದಿನಾಂಕ ಬಹಿರಂಗ ಮಾಡುವ ಅಭಿಮಾನಿಗಳ ಸಂತಸ ಡಬಲ್ ಮಾಡಿದ್ದಾರೆ. ಯುಗಾದಿ ಹಬ್ಬಕ್ಕೆ ಕಿಚ್ಚನ ಕಡೆಯಿಂದ ಅಭಿಮಾನಿಗಳಿಗೆ ಭರ್ಜರಿ ಟ್ರೀಟ್ ಸಿಕ್ಕಿದ್ದು ಫುಲ್ ಖುಷ್ ಆಗಿದ್ದಾರೆ.
Vikrant Rona; ಕಿಚ್ಚನಿಗೆ ಸಾಥ್ ನೀಡಿದ ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್
ಇನ್ನು ಸಿನಿಮಾದ ಬಗ್ಗೆ ಹೇಳುವುದಾದರೆ ಚಿತ್ರದಲ್ಲಿ ಕಿಚ್ಚ ಸುದೀಪ್ ನಾಯಕನಾಗಿ ಮಿಂಚಿದ್ರೆ, ನಿರೂಪ್ ಭಂಡಾರಿ, ನೀತಾ ಅಶೋಕ್ ಸೇರಿದಂತೆ ಅನೇಕರು ನಟಿಸಿದ್ದಾರೆ. ರಂಗಿತರಂಗ ಖ್ಯಾತಿಯ ನಿರ್ದೇಶಕ ಅನೂಪ್ ಭಂಡಾರಿ ಸಾರಥ್ಯದಲ್ಲಿ ಸಿನಿಮಾ ಮೂಡಿಬಂದಿದೆ.
ದಕ್ಷಿಣ ಭಾರತದ ಸೂಪರ್‌ಸ್ಟಾರ್‌ಗಳಿಂದ ವಿಕ್ರಾಂತ್ ರೋಣ ಟೀಸರ್ ರಿಲೀಸ್!
ಇನ್ನು ಸಿನಿಮಾದ ಮತ್ತೊಂದು ವಿಶೇಷ ಎಂದರೆ ಬಾಲಿವುಡ್ ಸ್ಟಾರ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರದ ಐಟಂ ಹಾಡಿಗೆ ಹೆಜ್ಜೆ ಹಾಕಿರುವ ಜಾಕ್ವೆಲಿನ್ ಲುಕ್ ಈಗಾಗಲೇ ವೈರಲ್ ಆಗಿದೆ. ಕಿಚ್ಚ ಮತ್ತು ಜಾಕ್ವೆಲಿನ್ ಕಾಂಬಿನೇಷನ್ ಹಾಡು ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಇಂದು ಬಿಡುಗಡೆಯಾಗುವ ಟೀಸರ್ ನಲ್ಲಿ ಜಾಕ್ವೆಲಿನ್ ಕಾಣಿಸಿಕೊಳ್ಳುತ್ತಾರಾ ಎಂದು ಕಾಯುತ್ತಿದ್ದರು. ಆದರೆ ಜಾಕ್ವೆಲಿನ್ ಕಾಣಿಸಿಕೊಂಡಿಲ್ಲ. ಇನ್ನು ಚಿತ್ರಕ್ಕೆ ಜಾಕ್ ಮಂಜು ನಿರ್ಮಾಣ ಮಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಿನಿಮಾ ಯಾವಾಗ ಬಿಡುಗಡೆಯಾಗಲಿದೆ ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.