ಸೂಪರ್ ಸ್ಟಾರ್ ರಜನಿಕಾಂತ್ ಅಣ್ಣನಿಗೆ ಹೃದಯಾಘಾತ; ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

Published : Nov 08, 2025, 10:22 AM IST
Rajinikanth Sathayanarayana Rao

ಸಾರಾಂಶ

ಸೂಪರ್ ಸ್ಟಾರ್ ರಜನಿಕಾಂತ್ ಅವರು ಅಣ್ಣನಿಗೆ ಹೃದಯಾಘಾತ ಆಗುತ್ತಿದ್ದಂತೆ, ಎಲೆಕ್ಟ್ರಾನಿಕ್ ಸಿಟಿಯ ನಾರಾಯಣ ಹೃದಯಾಲಯದಲ್ಲಿ ಅಡ್ಮಿಟ್ ಮಾಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಸತ್ಯನಾರಾಯಣ ರಾವ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೋ ಇಲ್ಲವೋ ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದೆ.

ರಜನಿಕಾಂತ್ ಅಣ್ಣನಿಗೆ ಹೃದಯಾಘಾತ; ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಭಾರತದ ಸೂಪರ್ ಸ್ಟಾರ್ ರಜಿನಿಕಾಂತ್ (Rajinikanth) ಅಣ್ಣನಿಗೆ ಹೃದಯಾಘಾತವಾಗಿದೆ. ಇದೀಗ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೊದಲೊಮ್ಮೆ ಕೂಡ ರಜನಿಕಾಂತ್ ಅಣ್ಣ ಸತ್ಯನಾರಾಯಣ ರಾವ್ ಗಾಯಕ್ವಾಡ್ (84) (Sathyanarayana Rao Gaikwad) ಅವರಿಗೆ ಹೃದಯಾಘಾತವಾಗಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ವತಃ ರಜನಿಕಾಂತ್ ಅವರೇ ತಮ್ಮ ಅಣ್ಣನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಸೂಪರ್ ಸ್ಟಾರ್ ರಜಿನಿಕಾಂತ್ ಅಣ್ಣನಿಗೆ ಹೃದಯಾಘಾತ

ಸೂಪರ್ ಸ್ಟಾರ್ ರಜನಿಕಾಂತ್ ಅವರು ಅಣ್ಣನಿಗೆ ಹೃದಯಾಘಾತ ಆಗುತ್ತಿದ್ದಂತೆ, ಎಲೆಕ್ಟ್ರಾನಿಕ್ ಸಿಟಿಯ ನಾರಾಯಣ ಹೃದಯಾಲಯದಲ್ಲಿ ಅಡ್ಮಿಟ್ ಮಾಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಸತ್ಯನಾರಾಯಣ ರಾವ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೋ ಇಲ್ಲವೋ ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದೆ. ಸದ್ಯ ಚಿಕಿತ್ಸೆ ಮುಂದುವರಿದಿದೆ. ಬೆಂಗಳೂರಿನ ಹೊಸಕೆರೆ ಹಳ್ಳಿಯ ನಂದಿ ಕಾರಿಡಾರ್ ನಿವಾಸಿಯಾಗಿರುವ ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರಿಗೆ 84 ವರ್ಷ ವಯಸ್ಸಾಗಿದೆ.

ಇಂದು ಬೆಳಿಗ್ಗೆ ಬೆಂಗಳೂರಿಗೆ ಬಂದು ಸ್ವತಃ ತಾವೇ ಅಣ್ಣ ಸತ್ಯನಾರಾಯಣ ಅವರನ್ನು ಆಸ್ಪತ್ರೆಗೆ ಅಡ್ಮಿಟ್ ಮಾಡಿದ್ದಾರೆ ನಟ ರಜನಿಕಾಂತ್. ಈ ಮೊದಲೊಮ್ಮೆ ಹೃದಯಾಘಾತಕ್ಕೆ ಒಳಗಾಗಿದ್ದ ರಜನಿಕಾಂತ್ ಅಣ್ಣ ಚಿಕಿತ್ಸೆ ಪಡೆದು ಮತ್ತೆ ನಾರ್ಮಲ್ ಆಗಿದ್ದರು ಎಂಬ ಮಾಹಿತಿ ಇದೆ. ಆದರೆ, ಈಗ ವಯೋಸಹಜ ಅನಾರೋಗ್ಯ ಕೂಡ ಅವರನ್ನು ಬಾಧಿಸುತ್ತಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ..

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಹೀರೋ ಆಗುವ ಮುನ್ನ ಶಾಕ್ ಕೊಟ್ಟ ಅಕೀರಾ ನಂದನ್: ರೇಣು ದೇಸಾಯಿ ಫೋನ್ ಮಾಡಿದಾಗ ಪವನ್ ನಕ್ಕಿದ್ದೇಕೆ?
'ನನಗೆ ಡೈವೋರ್ಸ್‌ ಸಿಗೋದು ಪಕ್ಕಾ..' ನ್ಯಾಷನಲ್‌ ಕ್ರಶ್‌ ಗಿರಿಜಾ ಓಕ್‌ ಫೋಟೋಗೆ ಫ್ಯಾನ್ಸ್ ರಿಯಾಕ್ಷನ್‌