
ತಮಿಳು ಸೂಪರ್ ಸ್ಟಾರ್ ತಲೈವಾ ರಜನಿಕಾಂತ್ ಹಕ್ಕುಗಳ ಉಲ್ಲಂಘನೆಯ ಕುರಿತು ಸಾರ್ವಜನಿಕ ನೋಟಿಸ್ ಜಾರಿ ಮಾಡಿದ್ದಾರೆ. ತಮ್ಮ ಹೆಸರು, ಧ್ವನಿ ಮತ್ತು ಭಾವಚಿತ್ರಗಳನ್ನು ತಮ್ಮ ಒಪ್ಪಿಗೆ ಇಲ್ಲದೆ ವಾಣಿಜ್ಯಿಕವಾಗಿ ಬಳಸಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ವಿಕೀಲರಾದ ಎಸ್ ಇಲಂಭಾರತಿ ಎಚ್ಚರಿಕೆ ನೀಡಿದ್ದಾರೆ. ಅವರ ವ್ಯಕ್ತಿತ್ವದ ಹಕ್ಕುಗಳನ್ನು ಅಲ್ಲಂಘಿಸುವವರ ವಿರುದ್ಧ ಸಿವಿಲ್ ಮತ್ತು ಕ್ರಿಮಿನಲ್ ಕ್ರಮ ಕೈಗೊಳ್ಳುವುದಾಗಿ ಸೂಚನೆಯಲ್ಲಿ ತಿಳಿಸಲಾಗಿದೆ.
ಹಲವು ಉತ್ಪನ್ನಗಳ ಮಾರಾಟ ಉತ್ತೇಜನಕ್ಕಾಗಿ ರಜನಿಕಾಂತ್ ಹೆಸರು, ಧ್ವನಿ, ಚಿತ್ರ ಮತ್ತು ವ್ಯಂಗ್ಯ ಚಿತ್ರಗಳನ್ನು ಬಳಸಲಾಗುತ್ತಿದೆ. ಅವರ ಅನುಮತಿ ಇಲ್ಲದೆ ಚಿತ್ರ ಬಳಕೆ ವಂಚನೆ ಎಂದು ಪರಿಗಣಿಸಲಾಗುತ್ತಿದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ. ತಮ್ಮ ವ್ಯಕ್ತಿತ್ವ, ಹೆಸರು, ಧ್ವನಿ, ಚಿತ್ರ ಮತ್ತು ವಿಶ್ಟಿಷ್ಟ ಅಂಶಗಳಿಗೆ ಬಳಸಿಕೊಳ್ಳುವ ಹಕ್ಕು ರಜನಿಕಾಂತ್ ಅವರಿಗೆ ಮಾತ್ರವಿದೆ. ಬೇರೆ ಯಾರು ಸಹ ಅವುಗಳನ್ನು ರಜನಿಕಾಂತ್ ಅನುಮತಿ ಇಲ್ಲದೆ ವಾಣಿಜ್ಯ ಉದ್ದೇಶಗಳಿಕೆ ಬಳಕೆ ಮಾಡುವಂತಿಲ್ಲ ಎಚ್ಚರಿ ನೀಡಲಾಗಿದೆ.
'ನಟನಾಗಿ ಮತ್ತು ವ್ಯಕ್ತಿಯಾಗಿ ಅವರ ವರ್ಚಸ್ಸು ಮತ್ತು ಸ್ವಭಾವ ಅವರಿಗೆ ಪ್ರಪಂಚದಾದ್ಯಂತದ ಲಕ್ಷಾಂತರ ಅಭಿಮಾನ ಮತ್ತು ಸೂಪರ್ ಸ್ಟಾರ್ ಎಂಬ ಬಿರುದನ್ನು ತಂದುಕೊಟ್ಟಿದೆ. ಅವರ ಆಪಾರ ಅಭಿಮಾನಿ ಬಳಗ ಮತ್ತು ಅವರ ಸಾಟಿಯಿಲ್ಲದ ಗೌರವ. ಅವರ ಖ್ಯಾತಿ ಅಥವಾ ವೈಯಕ್ತಿಕ ಜೀವನಕ್ಕೆ ಯಾವುದೇ ಹಾನಿಯು ನಮ್ಮ ಕ್ಲೈಂಟ್‌ಗೆ ದೊಡ್ಡ ನಷ್ಟವನ್ನು ಉಂಟುಮಾಡುತ್ತದೆ' ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.
ನನ್ನ ಸಿಗರೇಟ್, ಮದ್ಯ, ಮಾಂಸಾಹಾರದ ಚಟ ಪ್ರೀತಿಯಿಂದ ಬದಲಾಯಿಸಿದವಳು ನನ್ನ ಹೆಂಡತಿ: ರಜನಿಕಾಂತ್
ಜೈಲರ್ ಸಿನಿಮಾದಲ್ಲಿ ರಜನಿಕಾಂತ್
ಸೂಪರ್ ಸ್ಟಾರ್ ಸದ್ಯ ಜೈಲರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಈ ಸಿನಿಮಾದ ಲುಕ್ ರಿಲೀಸ್ ಆಗಿದ್ದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಸಿನಿಮಾದಲ್ಲಿ ರಜನಿಕಾಂತ್ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ವಿಶೇಷ ಎಂದರೆ ಈ ಸಿನಿಮಾದಲ್ಲಿ ಕನ್ನಡ ಸ್ಟಾರ್ ಶಿವರಾಜ್ ಕುಮಾರ್ ಕೂಡ ನಟಿಸಿದ್ದಾರೆ. ಇದು ಶಿವಣ್ಣ ನಟನೆಯ ಮೊದಲ ತಮಿಳು ಸಿನಿಮಾವಾಗಿದೆ. ಹಾಗೂ ಮೊದಲ ಬಾರಿಗೆ ಸೂಪರ್ ಸ್ಟಾರ್ ಜೊತೆ ನಟಿಸುತ್ತಿದ್ದಾರೆ.
ರಜನೀಕಾಂತ್ ಅಭಿಮಾನಿಗಳಿಗೆ ಬಿಗ್ ಶಾಕ್! 'ಸೂಪರ್ಸ್ಟಾರ್' ಪಟ್ಟ ಕಿತ್ತುಕೊಂಡ ರಾಜಕಾರಣಿ
ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಶಿವಣ್ಣ ಸಿನಿಮಾಗೆ ನೆಲ್ಸನ್ ದಿಲೀಪ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸನ್ ಪಿಕ್ಚರ್ ಬಂಡವಾಳ ಹೂಡಿದೆ. ಸದ್ಯ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಎಲ್ಲವೂ ಅಂದುಕೊಂಡತೆ ಈ ವರ್ಷ ಬೇಸಿಗೆ ಸಮಯಕ್ಕೆ ಸಿನಿಮಾ ಅಭಿಮಾನಿಗಳ ಮುಂದೆ ಬರುವ ಸಾಧ್ಯತೆ ಇದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.