ಇತ್ತೀಚೆಗೆಷ್ಟೇ ಮುಸ್ಲಿಂ ಯುವಕನನ್ನು ಮದುವೆಯಾಗಿರುವ ನಟಿ ಸ್ವರಾ ಭಾಸ್ಕರ್ ಇದೀಗ ತಮ್ಮ ಮೊದಲ ರಾತ್ರಿಯ ಬೆಡ್ರೂಂ ಫೋಟೋ ಶೇರ್ ಮಾಡಿದ್ದಾರೆ. ಏನು ಹೇಳಿದ್ದಾರೆ ಅವರು?
ಬಾಲಿವುಡ್ ನಟಿ ಸ್ವರಾ ಭಾಸ್ಕರ್ (Swara Bhaskar) ಕೆಲ ದಿನಗಳ ಹಿಂದೆ ದಿಢೀರನೆ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡು ತಾವು ಮದುವೆಯಾಗಿದ್ದುದ್ದನ್ನು ಘೋಷಣೆ ಮಾಡಿದ್ದರು. ಈ ಮೂಲಕ ಎಲ್ಲರಿಗೂ ಏಕಾಏಕಿ ಶಾಕ್ ಕೊಟ್ಟಿದ್ದರು. ಸಮಾಜವಾದಿ ಪಕ್ಷದ ನಾಯಕ ಫಹಾದ್ ಝಿರಾರ್ ಅಹ್ಮದ್ (Fahad Zirar Ahmad) ಅವರೊಂದಿಗೆ ಇವರು ಮದುವೆಯಾಗಿದ್ದಾರೆ. ಪ್ರತಿಭಟನೆಯೊಂದರಲ್ಲಿ ತಾವು ಭೇಟಿಯಾಗಿರುವ ವಿಷಯ ಹಂಚಿಕೊಂಡಿದ್ದರು. ಜನವರಿ 6, 2023 ರಂದು ವಿಶೇಷ ವಿವಾಹ ಕಾಯ್ದೆಯಡಿಯಲ್ಲಿ ತಮ್ಮ ವಿವಾಹವನ್ನು (Special Marriage Act) ನ್ಯಾಯಾಲಯದಲ್ಲಿ ನೋಂದಾಯಿಸಿಕೊಂಡಿರುವುದಾಗಿ (Registered) ತಿಳಿಸಿದ್ದರು. ಸ್ವರಾ ತಮ್ಮ ಪೋಷಕರೊಂದಿಗೆ ಹಾಜರಾಗಿ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆ ನೋಂದಾಯಿಸಿದ್ದ ಫೋಟೋ ಶೇರ್ ಮಾಡಿದ್ದರು. ಕೆಲವೊಮ್ಮೆ ಹತ್ತಿರವೇ ಇರುವವರನ್ನು ದೂರೆಲ್ಲೋ ಹುಡುಕುತ್ತೇವೆ. ಆದರೆ ಫಹಾದ್ ಅವರು ಹತ್ತಿರದಲ್ಲಿಯೇ ಇದ್ದಾಗ ಅವರೇ ನನ್ನ ಪ್ರೀತಿ ಎನ್ನುವುದು ತಿಳಿಯಲು ಹೆಚ್ಚುಹೊತ್ತು ಬೇಕಾಗಲಿಲ್ಲ ಎಂದು ಸ್ವರಾ ಹೇಳಿದ್ದರು.
ಇದಾದ ಮೇಲೆ ಮುಸ್ಲಿಂ ಯುವಕನ ಜೊತೆ ಮದುವೆಯಾಗಿರುವುದಕ್ಕೆ ಸ್ವರಾ ವಿರುದ್ಧ ಅಪಸ್ವರಗಳು ಅಲ್ಲಲ್ಲಿ ಕೇಳಿಬರುತ್ತಲೇ ಇದ್ದು, ಇದಕ್ಕೆ ಸ್ವರಾ ದಿಟ್ಟ ಉತ್ತರವನ್ನೂ ನೀಡುತ್ತಿದ್ದಾರೆ. ಇದೀಗ ನಟಿ ಸ್ವರಾ ಭಾಸ್ಕರ್ ತಮ್ಮ ಮಲಗುವ ಕೋಣೆಯ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ಅವರ ಮಧುಚಂದ್ರದ ಹಾಸಿಗೆಯನ್ನು ಅಲಂಕರಿಸುವುದನ್ನು ನೋಡಬಹುದು. ಅವರ ಹಾಸಿಗೆಯನ್ನು ಗುಲಾಬಿಗಳು ಮತ್ತು ವಿವಿಧ ರೀತಿಯ ಹೂವುಗಳಿಂದ ಅಲಂಕರಿಸಲಾಗಿದೆ. ಇದಕ್ಕೆ ಸ್ವರಾ ಅವರು ತಮ್ಮ ತಾಯಿಗೆ ಧನ್ಯವಾದ ತಿಳಿಸಿದ್ದಾರೆ. ಈ ಮೂಲಕ ತಮ್ಮ ಮೊದಲ ರಾತ್ರಿಯ ಬೆಡ್ರೂಮ್ ಚಿತ್ರವನ್ನು ಅವರು ಜನರ ಮುಂದೆ ತೆರೆದಿಟ್ಟಿದ್ದಾರೆ.
Swara Bhaskar ಮದುವೆ ಅಸಿಂಧು ಎಂದ ಧರ್ಮಗುರು: ರಕ್ಷಣೆಗೆ ಬಂದ ಆರ್ಜೆ ಸಯೇಮಾ
ಸಿನಿಮಾ ಸ್ಟೈಲ್ನಲ್ಲಿಯೇ ಬೆಡ್ರೂಂ (Bedroom) ಶೃಂಗಾರ ಮಾಡಲಾಗಿದೆ. ಇದನ್ನು ಮಾಡಲು ಅಮ್ಮ ತುಂಬಾ ಕಷ್ಟಪಟ್ಟಿದ್ದಾರೆ. ಇದು ತುಂಬಾ ಸುಂದರವಾಗಿದೆ. ಸಿನಿಮಾ ಮಾದರಿಯಲ್ಲಿ ಮೊದಲ ರಾತ್ರಿಯ ಸೀನ್ ಇರುವ ರೀತಿಯಲ್ಲಿ ಇದನ್ನು ಶೃಂಗಾರ ಮಾಡಲಾಗಿದೆ ಎಂದು ಸ್ವರಾ ಹೇಳಿಕೊಂಡಿದ್ದಾರೆ. ಈಗ ಸಾಮಾಜಿಕ ಜಾಲತಾಣದಲ್ಲಿ ಇದು ವೈರಲ್ ಆಗುತ್ತಿದ್ದು, ಹೀಗೆ ಮೊದಲ ರಾತ್ರಿಯ ಬೆಡ್ರೂಂ ಚಿತ್ರವನ್ನು ಶೇರ್ ಮಾಡಿಕೊಂಡಿರುವುದಕ್ಕೆ ಪರ ವಿರೋಧ ನಿಲುವು ವ್ಯಕ್ತವಾಗುತ್ತಿದೆ. ಹಲವರು ಟ್ರೋಲ್ ಕೂಡ ಮಾಡುತ್ತಿದ್ದಾರೆ.
ಅಂದಹಾಗೆ ಸ್ವರಾ ಮದುವೆಯ ಸಂಬಂಧ ಟ್ರೋಲ್ (Troll) ಆಗುತ್ತಿರುವುದು ಇದೇ ಮೊದಲಲ್ಲ. ಅವರು ತಮ್ಮ ಪತಿಗೆ ಈ ಮೊದಲು ಅಣ್ಣ (ಭಾಯ್) ಎಂದು ಕರೆದಿದ್ದರು. ಅದರ ಹಳೆಯ ವಿಡಿಯೋ ವೈರಲ್ ಮಾಡಿ ಟ್ರೋಲ್ ಮಾಡಲಾಗಿತ್ತು. ಮದುವೆಗೂ 10 ದಿನಗಳ ಹಿಂದೆ ಸ್ವರಾ ಭಾಸ್ಕರ್ ಟ್ವೀಟ್ ಮಾಡಿ, ಅಹ್ಮದ್‌ಗೆ ಹುಟ್ಟುಹಬ್ಬದ ವಿಶ್ ಮಾಡಿದ್ದರು. 'ಹುಟ್ಟುಹಬ್ಬದ ಶುಭಾಶಯಗಳು ಫಹಾದ್ ಮಿಯಾನ್. ಸಹೋದರನ ವಿಶ್ವಾಸವು ಹಾಗೇ ಉಳಿಯಲಿ' ಎಂದು ಹೇಳಿದ್ದರು. ಇದಾಗಿ ಎರಡೇ ವಾರಗಳಲ್ಲಿ ಮದುವೆಯ ಸುದ್ದಿಯನ್ನೂ ಕೊಟ್ಟು ಶಾಕ್ ಕೊಟ್ಟಿದ್ದರು. ಇದು ಟ್ರೋಲ್ ಆಗುತ್ತಲೇ ಸಂಘಿಗಳ ಮನವೊಲಿಸಲು ತಮ್ಮನ್ನು ಟ್ರೋಲ್ ಮಾಡಲಾಗುತ್ತಿದೆ ಎಂದು ಸ್ವರಾ ಹೇಳಿಕೆ ಕೊಟ್ಟು ಮತ್ತಷ್ಟು ಟ್ರೋಲ್ಗೆ ಒಳಗಾಗಿದ್ದರು.
ಶ್ರದ್ಧಾಳಂತೆ ಇವಳು ಸಾಯಬಹುದು, ಫಹಾದ್ ಮದ್ವೆಯಾದ ಸ್ವರಾ ವಿರುದ್ಧ ಸಾಧ್ವಿ ವಾಗ್ದಾಳಿ
ಮದುವೆಯಾದ ಮೇಲೂ ಇವರ ಮದುವೆಯ ಬಗ್ಗೆ ಅಪಸ್ವರ ಕೇಳಿಬಂದಿತ್ತು. ಖುದ್ದು ಇಸ್ಲಾಮಿಕ್ ಧರ್ಮಗುರು (Islamic cleric) ಈ ಮದುವೆಯನ್ನು ವಿರೋಧಿಸಿದ್ದರು. ಚಿಕಾಗೋ ಮೂಲದ ನಿಯತಕಾಲಿಕದ ಸಂಪಾದಕ ಮತ್ತು ವಿದ್ವಾಂಸರಾಗಿರುವ ಡಾ, ಯಾಸಿರ್ ನದೀಮ್ ಅಲ್ ವಾಜಿದಿ (Dr.Yasir Nadeem Al Wajidi) ಅವರು ಈ ಮದುವೆ ಅಮಾನ್ಯವಾಗಿದೆ. ಇಬ್ಬರೂ ಬೇರೆ ಧರ್ಮೀಯರಾಗಿದ್ದು, ವಿಭಿನ್ನ ನಂಬಿಕೆಗಳಿಂದ ಬಂದ ಕಾರಣ ಮದುವೆ ಅಸಿಂಧು ಎಂದು ಘೋಷಿಸಿದ್ದಾರೆ. ಅಂತರ್ಧರ್ಮೀಯ ವಿವಾಹ ಸರಿಯಲ್ಲ ಎಂಬುದಾಗಿ ಕಮೆಂಟ್ ಮಾಡಿದ್ದಾರೆ. ಮದುವೆಯ ಸಲುವಾಗಿಯಷ್ಟೇ ಇಸ್ಲಾಂ ಧರ್ಮವನ್ನು ಒಪ್ಪಿಕೊಂಡಿದ್ದರೆ ಮಹಿಳೆಯ ಜೊತೆಗಿನ ಮದುವೆ ಸಿಂಧುವಾಗುವುದಿಲ್ಲ ಎಂದಿದ್ದಾರೆ. ಇದಕ್ಕೂ ಪರ ವಿರೋಧಗಳ ಚರ್ಚೆ ಶುರುವಾಗಿತ್ತು. ಸ್ವರಾ ಭಾಸ್ಕರ್ ದಂಪತಿ (couple) ಪರವಾಗಿ ಪ್ರಸಿದ್ಧ ರೇಡಿಯೊ ನಿರೂಪಕ ಮತ್ತು ಕಾರ್ಯಕರ್ತ RJ ಸಯೆಮಾ ನಿಂತುಕೊಂಡಿದ್ದರು. ಧಾರ್ಮಿಕ ವಿದ್ವಾಂಸರು ಜನರ ವೈಯಕ್ತಿಕ ವಿಷಯಗಳ ಬಗ್ಗೆ ತೀರ್ಪು ನೀಡಬಾರದು. ಭಾರತದಂತಹ ದೇಶದಲ್ಲಿ, ಅಂತರ್‌ಧರ್ಮೀಯ (Inter Religion) ವಿವಾಹಗಳು ಇನ್ನೂ ಅನುಮಾನ ಮತ್ತು ಹಗೆತನವನ್ನು ಎದುರಿಸುತ್ತಿವೆ. ಇಂಥ ಸಂದರ್ಭದಲ್ಲಿ ಇವರ ಮದುವೆಯನ್ನು ದೂಷಿಸುವುದು ಸರಿಯಲ್ಲ ಎಂದಿದ್ದರು.