
ಚೆನ್ನೈ: ಖ್ಯಾತ ತಮಿಳು ನಟ ವಿಕ್ರಂಗೆ ಹೃದಯಾಘಾತವಾಗಿದ್ದು ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಮಿಳು ಸೂಪರ್‌ಸ್ಟಾರ್‌ಗೆ 56 ವರ್ಷ ವಯಸ್ಸಾಗಿದ್ದು, ಉತ್ತಮ ಆರೋಗ್ಯ ಹೊಂದಿದ್ದರು. ಇಂದು ಮುಂಜಾನೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕುಟುಂಬ ಮೂಲದ ಮಾಹಿತಿ ಪ್ರಕಾರ ವಿಕ್ರಂಗೆ ಲಘು ಹೃದಯಾಘಾತವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೈದ್ಯಾಧಿಕಾರಿಗಳು ವಿಕ್ರಂಗೆ ಚಿಕಿತ್ಸೆ ನೀಡುತ್ತಿದ್ದು, ಸಂಜೆಯೇ ಡಿಸ್ಚಾರ್ಜ್ ಆಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಚಿಯಾನ್ ವಿಕ್ರಮ್ ಇಂದು (ಜುಲೈ 8) ಮಣಿರತ್ನಂ ನಿರ್ದೇಶನದ ಪೊನ್ನಿಯಿನ್ ಸೆಲ್ವನ್ ಸಿನಿಮಾದ ಟೀಸರ್ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿತ್ತು. 6 ಗಂಟೆಗೆ ಕಾರ್ಯಕ್ರಮದಲ್ಲಿ ಹಾಜರಾಗಬೇಕಿತ್ತು. ಆದರೆ ಎದೆ ನೋವು ಕಾಣಿಸಿಕೊಂಡ ಕಾರಣ ತಕ್ಷಣ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಖಲಿಸಲಾಗಿದೆ.
ವಿಕ್ರಮ್ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ನೆಚ್ಚಿನ ನಟ ವಿಕ್ರಮ್‌ಗೆ ಏನಾಗಿದೆ, ಆರೋಗ್ಯ ಸ್ಥಿತಿ ಹೇಗಿದೆ ಎಂದು ಅಭಿಮಾನಿಗಳು ಆತಂಕದಲ್ಲಿದ್ದಾರೆ. ಆದರೆ ವಿಕ್ರಮ್ ಸದ್ಯ ಸುಧಾರಿಸಿಕೊಂಡಿದ್ದು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.ಈಗಾಗಲೇ ಜನರಲ್ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದ್ದು ಇಂದು ಸಂಜೆ ಡಿಶ್ಚಾರ್ಚ್ ಆಗುವ ಸಾಧ್ಯತೆ ಇದೆ. ಸಾಮಾಜಿಕ ಜಾಲತಾಣದಲ್ಲಿ ವಿಕ್ರಮ್ ಅಭಿಮಾನಿಗಳು ಬೇಗ ಗುಣಮುಖರಾಲಿ ಎಂದು ಪ್ರಾರ್ಥಿಸುತ್ತಿದ್ದಾರೆ.
ವಿಕ್ರಮ್ ಸಿನಿಮಾ ವಿಚಾರಕ್ಕೆ ಬರುವುದಾದರೆ ಮಹಾನ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿತ್ತು. ಈ ಸಿನಿಮಾದಲ್ಲಿ ವಿಕ್ರಮ್ ಪುತ್ರ ಧ್ರುವ್ ವಿಕ್ರಮ್ ಕೂಡ ನಟಿಸಿದ್ದರು. ಸದ್ಯ ವಿಕ್ರಮ್ ಕೋಬ್ರಾ ಸಿನಿಮಾದಲ್ಲಿ ಬ್ಯುಸಿಯಾಗಿದ್ದರು. ಈ ಸಿನಿಮಾದ ಚಿತ್ರೀಕರಣ ಮುಗಿಸಿದ್ದು ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ಇನ್ನು ಬಹುನಿರೀಕ್ಷೆಯ ಪೊನ್ನಿಯನ್ ಸೆಲ್ವನ್ ಸಿನಿಮಾದಲ್ಲಿ ವಿಕ್ರಮ್ ನಟಿಸಿದ್ದು ಈ ಸಿನಿಮಾ ಎರಡು ಭಾಗಗಳಲ್ಲಿ ತೆರೆಗೆ ಬರುತ್ತಿದೆ. ಈಗಾಗಲೇ ಪೋಸ್ಟರ್ ರಿಲೀಸ್ ಆಗಿದ್ದು ಅಭಿಮಾನಿಗಳ ಗಮನ ಸೆಳೆಯುತ್ತಿದೆ.
ವಿಕ್ರಮ್ ಆರೋಗ್ಯವಾಗಿದ್ದಾರೆ, ಶೀಘ್ರದಲ್ಲೇ ಆಸ್ಪತ್ರೆಯಿಂದ
ಶೀಘ್ರದಲ್ಲೇ ಖ್ಯಾತ ನಟ ವಿಕ್ರಮ್ ಡಿಸ್‌ಚಾರ್ಜ್, ಪುತ್ರನ ಕಳಕಳಿಯ ಮನವಿ!
ನಟ ವಿಕ್ರಮ ಆರೋಗ್ಯ ಚೇತರಿಸಿಕೊಂಡಿದೆ. ಎದೆಯಲ್ಲಿ ಕೊಂಚ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯಾಘಾತ, ಹೃದಯಸ್ತಂಭನವಾಗಿಲ್ಲ. ಕೆಲ ಮಾಧ್ಯಮಗಳಲ್ಲಿ ತಪ್ಪು ವರದಿಗಳು ಬರುತ್ತಿದೆ. ಹೀಗಾಗಿ ಕಳಕಳಿಯ ಮನವಿ ಮಾಡುತ್ತೇನೆ. ಯಾರೂ ಸುಳ್ಳು ಸುದ್ದಿ ಹರಡಬೇಡಿ. ಸಾಮಾಜಿಕ ಜಾಲತಾಣದಲ್ಲಿ, ಮಾಧ್ಯಮಗಳಲ್ಲಿ ಬರುತ್ತಿರವ ವರದಿ ನಮಗೆ ಬೇಸರತರಿಸಿದೆ. ದಯವಿಟ್ಟು ಕುಟುಂಬದ ಖಾಸಗಿ ಸಮಯವನ್ನು ಗೌರವಿಸಿ. ಶೀಘ್ರದಲ್ಲೇ ವಿಕ್ರಮ್ ಆಸ್ಪತ್ರೆಯಿಂದ ಬಿಬಿಡುಗಡೆಯಾಗಲಿದ್ದಾರೆ ಎಂದು ವಿಕ್ರಮ್ ಪುತ್ರ ಧ್ರುವ್ ವಿಕ್ರಮ್ ಮನವಿ ಮಾಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.