ಚಿತ್ರೀಕರಣ ವೇಳೆ ಗಾಯಕೊಂಡ 'ಬಾಹುಬಲಿ' ನಟ ನಾಸರ್; ಆಸ್ಪತ್ರೆಯಲ್ಲಿ ಚಿಕಿತ್ಸೆ

Published : Aug 18, 2022, 04:52 PM IST
 ಚಿತ್ರೀಕರಣ ವೇಳೆ ಗಾಯಕೊಂಡ 'ಬಾಹುಬಲಿ' ನಟ ನಾಸರ್; ಆಸ್ಪತ್ರೆಯಲ್ಲಿ ಚಿಕಿತ್ಸೆ

ಸಾರಾಂಶ

ಬಹುಭಾಷ ನಟ ನಾಸರ್ ಶೂಟಿಂಗ್ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೆಲಂಗಾಣದಲ್ಲಿ ತಮಿಳು ಸಿನಿಮಾವೊಂದರ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ನಾಸರ್ ಮೆಟ್ಟಿಲುಗಳಿಂದ ಜಾರಿಬಿದ್ದು ಪೆಟ್ಟು ಕೊಂಡಿದ್ದಾರೆ ಎನ್ನಲಾಗಿದೆ.

ಬಹುಭಾಷ ನಟ ನಾಸರ್ ಶೂಟಿಂಗ್ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೆಲಂಗಾಣದಲ್ಲಿ ತಮಿಳು ಸಿನಿಮಾವೊಂದರ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ನಾಸರ್ ಮೆಟ್ಟಿಲುಗಳಿಂದ ಜಾರಿಬಿದ್ದು ಪೆಟ್ಟು ಕೊಂಡಿದ್ದಾರೆ ಎನ್ನಲಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ವೈದ್ಯರು ಶಸ್ತ್ರ ಚಿಕಿತ್ಸೆ ನೆರವೇರಿಸಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಟ ನಾಸರ್​ ಅವರು ಬಹುಭಾಷೆಯಲ್ಲಿ ನಟಿಸಿ ಫೇಮಸ್​ ಆಗಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಹಾಗೂ ಇಂಗ್ಲಿಷ್​ ಸಿನಿಮಾಗಳಲ್ಲಿಯೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. ದಕ್ಷಿಣ ಭಾರತದಲ್ಲಿ ಅವರಿಗೆ ಭಾರಿ ಬೇಡಿಕೆ ಇದೆ. ಮೂಲತಃ  ತಮಿಳುನಾಡಿನ ಚೆನ್ನೈನವರಾದ ನಾಸರ್ ದೇಶಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ. 

ನಾಸನ್ ತೆಲಂಗಾಣ ಪೊಲೀಸ್ ಅಕಾಡೆಮಿಯಲ್ಲಿ ಸಿನಿಮಾ ಶೂಟಿಂಗ್​ ಮಾಡುತ್ತಿದ್ದರು. ಅವರ ಜೊತೆ ಸುಹಾಸಿನಿ ಮಣಿರತ್ನಂ, ಮೆಹ್ರೀನ್​ ಪೀರ್ಜಾದಾ, ಸಯ್ಯಾಜಿ ಶಿಂಧೆ ಮುಂತಾದ ಕಲಾವಿದರು ಭಾಗಿ ಆಗಿದ್ದರು.  ನಾಸರ್​ ಅವರು ಮೆಟ್ಟಿಲುಗಳ ಮೇಲಿಂದ ಬಿದ್ದು ಅವರ ಕಣ್ಣಿನ ಭಾಗಕ್ಕೆ ಪೆಟ್ಟಾಗಿದೆ ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಶಸ್ತ್ರ ಚಿಕಿತ್ಸೆ ಮಾಡಿಸಲಾಗಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ನಾಸರ್ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸಲಾಗುತ್ತಿದೆ.

ಸಿನಿಮಾಗೆ ಬರುವ ಮೊದಲು ಹೋಟೆಲ್‌ನಲ್ಲಿ ಮಾಣಿ ಆಗಿದ್ದ ಬಾಹುಬಲಿ ಬಿಜ್ಜಳದೇವ ನಟ ನಾಸರ್‌!

ಅಭಿಮಾನಿಗಳು ಆತಂಕಕ್ಕೆ ಒಳಗಾಗಬೇಕಾದ ಅವಶ್ಯಕತೆ ಇಲ್ಲ. ಶೀಘ್ರದಲ್ಲೇ ಹೆಲ್ತ್​ ಅಪ್​ಡೇಟ್​ ನೀಡಲಾಗುವುದು ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಪ್ರಸ್ತುತ ಅನೇಕ ಸಿನಿಮಾಗಳಲ್ಲಿ ನಾಸರ್​ ಬ್ಯುಸಿ ಆಗಿದ್ದಾರೆ. ಪೋಷಕ ಪಾತ್ರಗಳನ್ನು ನಿಭಾಯಿಸುವ ಮೂಲಕ ಅವರು ಸಖತ್​ ಜನಪ್ರಿಯತೆ ಪಡೆದುಕೊಂಡಿದ್ದಾರೆ.

‘ಬಾಹುಬಲಿ’ ಸಿನಿಮಾದಲ್ಲಿ ನಾಸರ್​ ಮಾಡಿದ ಬಿಜ್ಜಳದೇವನ ಪಾತ್ರ ತುಂಬ ಜನಪ್ರಿಯವಾಗಿತ್ತು. ಶಿವಗಾಮಿಯ ಪತಿಯಾಗಿ, ಬಲ್ಲಾಳದೇವನ ತಂದೆಯಾಗಿ ನಟಿಸಿ ಗಮನ ಸೆಳೆದಿದ್ದರು. ನಾಸರ್​ ಅವರ ನಟನೆಗೆ ಅನೇಕ ಪ್ರಶಸ್ತಿಗಳು ಬಂದಿವೆ. ತಮಿಳುನಾಡು ಸರ್ಕಾರ ನೀಡುವ ರಾಜ್ಯ ಚಲನಚಿತ್ರ ಪ್ರಶಸ್ತಿಗೆ 6 ಬಾರಿ ಪಡೆದಿದ್ದಾರೆ. ವಿಲನ್​ ಪಾತ್ರಕ್ಕೆ ‘ನಂದಿ ಪ್ರಶಸ್ತಿ’ ಪಡೆದಿದ್ದಾರೆ. ನಿರ್ದೇಶಕನಾಗಿಯೂ ಅವರು ಕೆಲಸ ಮಾಡಿದ್ದಾರೆ. 

Ramesh Aravind: ಶಿವಾಜಿ ಸುರತ್ಕಲ್‌ 2 ಚಿತ್ರಕ್ಕೆ ಖ್ಯಾತ ನಟ ನಾಸರ್‌ ಎಂಟ್ರಿ

ಕನ್ನಡದಲ್ಲಿ ನಾಸನ್ ಧಮ್, ಅಜಯ್, ಬಿಂದಾನ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಬಿಂದಾಸ್ ಸಿನಿಮಾ ಬಳಿಕ ನಾಸಿರ್ ಕನ್ನಡದಲ್ಲಿ ನಟಿಸಿಲ್ಲ. ಸದ್ಯ ತಮಿಳಿನ ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ನಾನೇನು ಸಾಧುವಲ್ಲ.. ಹೀಗೆ ಮಾತಾಡೋಕೆ ನನಗೂ ಬರುತ್ತೆ: ಪುಷ್ಪ ನಟಿ ಹೇಳಿದ್ದೇನು?
ವೃತ್ತಿಜೀವನದಲ್ಲಿ 2 ಬಾರಿ ದೊಡ್ಡ ತಪ್ಪು ಮಾಡಿದ ರಾಮ್ ಚರಣ್.. ಚಿರಂಜೀವಿಯೂ ಏನೂ ಮಾಡಲಾಗಲಿಲ್ಲವೇ?