ಕರುನಾಡ ಹಂಪಿ ವಿರೂಪಾಕ್ಷನೆದುರು ತೆಲುಗು ಟೀಮ್, ಏನ್ ಮಾಡ್ತಿದಾರೆ ಸ್ಟಾರ್ ನಟ ರಾಮ್‌ ಚರಣ್?

By Shriram Bhat  |  First Published Jul 3, 2024, 1:17 PM IST

ಆರ್‌ಆರ್‌ಆರ್‌ ಚಿತ್ರದ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಮೆಗಾ ಪವರ್ ಸ್ಟಾರ್ ರಾಮ್ ಚರಣ್ , ಇತ್ತೀಚೆಗೆ ವಿ ಮೆಗಾ ಪಿಕ್ಚರ್ಸ್ ಹೆಸರಿನ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ..


ಎಸ್‌ಎಸ್‌ ರಾಜಮೌಳಿ (SS Rajamouli) ನಿರ್ದೇಶನದ 'ಆರ್‌ಆರ್‌ಆರ್‌' ಸಿನಿಮಾ (RRR) ಜಗತ್ತಿನ ಗಮನವನ್ನೇ ಸೆಳೆದಿದ್ದು ಇತಿಹಾಸದ ಪುಟದಲ್ಲಿ ಸೇರಿದೆ. ಭಾರತದ ಸಿನಿಮಾಗಳಲ್ಲಿ ಹೆಚ್ಚಿನ ಗಳಿಕೆ ಕಂಡಿರುವ ಸಿನಿಮಾಗಳಲ್ಲಿಯೇ ನಾಲ್ಕನೆಯ ಸ್ಥಾನದಲ್ಲಿರುವ ಆರ್‌ಆರ್‌ಆರ್‌ ಸಿನಿಮಾದ ಇಬ್ಬರು ಹೀರೋಗಳಲ್ಲಿ ನಟ ರಾಮ್ ಚರಣ್ ಕೂಡ ಒಬ್ಬರು. ಇನ್ನೊಬ್ಬರು ಜೂನಿಯರ್ ಎನ್‌ಟಿಆರ್ ಎಂದು ಬಹುತೇಕ ಎಲ್ಲರಿಗೂ ಗೊತ್ತಿದೆ. ಇದೀಗ ಹೊಸ ಚಿತ್ರದ ಮೂಲಕ ನ್ಯೂ ಇನ್ನಿಂಗ್ಸ್ ಆರಂಭಿಸಿದ್ದಾರೆ ರಾಮ್ ಚರಣ್. 

ಆರ್‌ಆರ್‌ಆರ್‌ ಚಿತ್ರದ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan), ಇತ್ತೀಚೆಗೆ ವಿ ಮೆಗಾ ಪಿಕ್ಚರ್ಸ್ ಹೆಸರಿನ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ತಮ್ಮ ಮೊದಲ ಸಿನಿಮಾ ಆಗಿ ಸಾರ್ವಕರ್ ಜೀವನ ಕತೆಯನ್ನು ತೆರೆಗೆ ತರಲು ಸಜ್ಜಾಗಿದ್ದಾರೆ. ದಿ ಇಂಡಿಯಾ ಹೌಸ್ ಹೆಸರಿನಡಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ತೆಲುಗಿನ ನಿಖಿಲ್ ಸಿದ್ಧಾರ್ಥ್ ನಾಯಕನಾಗಿ ನಟಿಸಲಿದ್ದಾರೆ. ಇಂದು ಹಂಪಿಯ ವಿರೂಪಾಕ್ಷ ಸನ್ನಿಧಿಯಲ್ಲಿ ದಿ ಇಂಡಿಯಾ ಹೌಸ್ ಸಿನಿಮಾದ ಮುಹೂರ್ತ ನೆರವೇರಿದೆ. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು.

Tap to resize

Latest Videos

ಬಾತ್‌ರೂಮ್ ಕ್ಲೀನ್ ಮಾಡ್ತಾರಂತೆ ಗೋಲ್ಡನ್ ಸ್ಟಾರ್; ಮೂರ್ಛೆ ಹೋಗ್ತಾರೋ ಏನೋ ಗಣೇಶ್ ಫ್ಯಾನ್ಸ್!

ದಿ ಕಾಶ್ಮೀರಿ ಫೈಲ್ಸ್, ಕಾರ್ತಿಕೇಯ-2 ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಅಭಿಷೇಕ್ ಅಗರ್ವಾಲ್ ತಮ್ಮದೇ ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಬ್ಯಾನರ್ ಹಾಗೂ ರಾಮ್ ಚರಣ್ ಒಡೆತನದ ವಿ ಮೆಗಾ ಪಿಕ್ಚರ್ಸ್ ಜಂಟಿಯಾಗಿ ಈ ಚಿತ್ರ ನಿರ್ಮಿಸುತ್ತಿದೆ. ಭಾರತದ ಸ್ವಾತಂತ್ರ್ಯ ಪೂರ್ವದಲ್ಲಿ ನಡೆದ ಘಟನೆಗಳನ್ನು ಆಧರಿಸಿ 'ದಿ ಇಂಡಿಯಾ ಹೌಸ್' ವನ್ನು ಕಟ್ಟಿಕೊಡಲಾಗುತ್ತಿದೆ. ಸಿನಿಮಾದಲ್ಲಿ ನಾಯಕ ನಿಖಿಲ್ ಶಿವನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಮ್ ವಂಶಿ ಕೃಷ್ಣ ನಿರ್ದೇಶನದ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ಅನುಪಮ್ ಖೇರ್ ನಟಿಸುತ್ತಿದ್ದಾರೆ. ಅನುಪಮ್ ಅವರು ಶ್ಯಾಮ್‌ಜಿ ಕೃಷ್ಣ ವರ್ಮಾ ಅವರ ಪಾತ್ರ ನಿರ್ವಹಿಸಲಿದ್ದಾರೆ. ನಿಖಿಲ್ ಸಿದ್ದಾರ್ಥ್ ಗೆ ಜೋಡಿಯಾಗಿ ಸಾಯಿ ಮಂಜ್ರೇಕರ್ ಬಣ್ಣ ಹಚ್ಚಲಿದ್ದಾರೆ.

ಮೂರನೇ ಸ್ಥಾನಕ್ಕೆ ಜಿಗಿದ ರಾಕಿಂಗ್ ಸ್ಟಾರ್ ಕೆಜಿಎಫ್ 2, ನಟ ಯಶ್ ಕೆಳಕ್ಕೆ ತಳ್ಳಿದ್ದು ಯಾರನ್ನ ನೋಡ್ರಿ!

ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಮೂಡಿ ಬರುತ್ತಿರು  ದಿ ಇಂಡಿಯನ್ ಹೌಸ್ ಸಿನಿಮಾಗೆ ಕ್ಯಾಮೆರಾನ್ ಬ್ರೈಸನ್ ಕ್ಯಾಮೆರಾ ಹಿಡಿಯಲಿದ್ದಾರೆ. ಕಾರ್ತಿಕೇಯ 2 ನಂತರ ನಿಖಿಲ್, ಅನುಪಮ್ ಖೇರ್, ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಜೊತೆ ದಿ ಇಂಡಿಯಾ ಹೌಸ್ ಸಿನಿಮಾಗಾಗಿ ಮತ್ತೊಮ್ಮೆ ಒಂದಾಗಿದ್ದಾರೆ. ಈ ಚಿತ್ರದ ರೆಗ್ಯುಲರ್ ಶೂಟಿಂಗ್ ನಾಳೆಯಿಂದ ಶುರುವಾಗಲಿದೆ.

ಗರ್ಭಿಣಿ ಹೆಂಡ್ತಿ, ತಂದೆ-ತಾಯಿ ಬಗ್ಗೆ ಯೋಚಿಸ್ಬೇಕಿತ್ತು, ಅಶ್ಲೀಲ ಮೆಸೇಜ್ ಕಳ್ಸಿದ್ದು ದೊಡ್ಡ ತಪ್ಪು,: ಅಗ್ನಿ ಶ್ರೀಧರ್

click me!