ಸಂಚಾರಿ ನಿಯಮ ಉಲ್ಲಂಘಿಸಿದ ನಟ ದಳಪತಿ ವಿಜಯ್‌ಗೆ ಬಿತ್ತು ದಂಡ

Published : Jul 12, 2023, 12:44 PM IST
ಸಂಚಾರಿ ನಿಯಮ ಉಲ್ಲಂಘಿಸಿದ ನಟ ದಳಪತಿ ವಿಜಯ್‌ಗೆ ಬಿತ್ತು ದಂಡ

ಸಾರಾಂಶ

 ದಳಪತಿ ವಿಜಯ್ ತಮ್ಮ ಪಕ್ಷದ ಸದಸ್ಯರನ್ನು ಭೇಟಿ ಮಾಡಿ ಮನೆಗೆ  ಹಿಂದಿರುಗುವಾಗ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಟ್ರಾಫಿಕ್ ಪೊಲೀಸರು ವಿಜಯ್‌ಗೆ ದಂಡ ವಿಧಿಸಿದ್ದಾರೆ ಎಂದು ವರದಿಯಾಗಿದೆ.

ಕಾಲಿವುಡ್ ಸ್ಟಾರ್ ದಳಪತಿ ವಿಜಯ್ ಸದ್ಯ ಲಿಯೋ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಲೋಕೇಶ್ ಕನಗರಾಜ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಲಿಯೋ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಿಗಿದೆ. ಈಗಾಗಲೇ ಶೂಟಿಂಗ್ ಮುಗಿಸಿರುವ ವಿಜಯ್ ರಾಜಕೀಯ ಎಂಟ್ರಿ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೆ ದಳಪತಿ ವಿಜಯ್ ತಮ್ಮ ಪಕ್ಷದ ಸದಸ್ಯರನ್ನು ಭೇಟಿ ಮಾಡಿ ಮನೆಗೆ   ಹಿಂದಿರುಗುವಾಗ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಟ್ರಾಫಿಕ್ ಪೊಲೀಸರು ವಿಜಯ್‌ಗೆ ದಂಡ ವಿಧಿಸಿದ್ದಾರೆ ಎಂದು ವರದಿಯಾಗಿದೆ. ಎರಡು ಹೆಚ್ಚು ಸಿಗ್ನಲ್ ಜಂಪ್ ಮಾಡಿರುವ ವಿಜಯ್ ಅವರಿಗೆ ಪೊಲೀಸರು ದಂಡ ಹಾಕಿದ್ದಾರೆ. 

ವಿಜಯ್ ಕಾರು ಮತ್ತು ಚಲನ್‌ನ ಕೆಲವು ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಅಂದಹಾಗೆ ವಿಜಯ್ ಸಿಗ್ನಲ್ ಜಂಪ್ ಮಾಡಿ ಮುಂದೆ ಸಾಗಲು ಕೂಡ ಕಾರಣವಿದೆ. ತನ್ನ ಕಾರನ್ನು ಹಿಂಬಾಲಿಸುತ್ತಿದ್ದ ಅಭಿಮಾನಿಗಳಿಂದ ತಪ್ಪಿಕೊಳ್ಳಲು ರೆಡ್ ಸಿಗ್ನಲ್ ಜಂಪ್ ಮಾಡಿದ್ದಾರೆ. ಅಭಿಮಾನಿಗಳನ್ನು ವಿಜಯ್ ಕಾರನ್ನು ಹಿಂಬಾಲಿಸಿಕೊಂಡು ಬರುತ್ತಿದ್ದರು. ಅದನ್ನು ಗಮನಿಸಿದ ವಿಜಯ್ ಟ್ರಾಫಿಕ್ ನಿಯಮ ಬ್ರೇಕ್ ಮಾಡಿದ್ದಾರೆ. 

ವಿಜಯ್ ಸದ್ಯ ರಾಜಕೀಯ ಎಂಟ್ರಿ ಬಗ್ಗೆ ಸಿಕ್ಕಾಪಟ್ಟೆ ಸುದ್ದಿಯಾಗಿದ್ದಾರೆ. ವಿಜಯ್ ಸದ್ಯದಲ್ಲೇ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ, ಸಿನಿಮಾರಂಗ ತೊರೆಯುತ್ತಾರೆ ಎನ್ನಲಾಗಿದೆ. ಲಿಯೋ ಸಿನಿಮಾ ಬಳಿಕ ವಿಜಯ್ ರಾಜಕೀಯದ ಕಡೆ ಹೆಚ್ಚು ಗಮನ ಕೊಡುತ್ತಾರೆ. ಹಾಗಾಗಿ ಸಿನಿಮಾ ಮಾಡುವುದು ಅನುಮಾನ ಎನ್ನಲಾಗಿದೆ. 

ದಳಪತಿ ವಿಜಯ್ ಬಗ್ಗೆ ಹೀಗೊಂದು ಸುದ್ದಿ ವೈರಲ್: ಸಿನಿಮಾದಿಂದ ಬ್ರೇಕ್ ಪಡಿತಾರಂತೆ ಸ್ಟಾರ್ ನಟ

ಅಂದಹಾಗೆ ವಿಜಯ್ ಸೋಮವಾರ (ಜುಲೈ 10) ಲಿಯೋ ಚಿತ್ರೀಕರಣವನ್ನು ಮುಗಿಸಿದ ನಂತರ,  ಮಕ್ಕಳ್ ಇಯಕ್ಕಮ್ (ವಿಎಂಐ) ಸದಸ್ಯರನ್ನು ಭೇಟಿಯಾದರು. ಅವರು ಪಕ್ಷದ ಸದಸ್ಯರೊಂದಿಗೆ ಚರ್ಚೆ ನಡೆಸಿದರು. ವಿಜಯ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಬಿರುಗಾಳಿ ಎಬ್ಬಿಸಿವೆ. ರಾಜಕೀಯ ಪ್ರವೇಶದ ನಂತರ ವಿಜಯ್ ತಮ್ಮ ನಟನಾ ವೃತ್ತಿಯನ್ನು ಮುಂದುವರಿಸುವುದಿಲ್ಲ ಎಂದು ವರದಿಯಾಗಿದೆ.

ರಾತ್ರೋರಾತ್ರಿ ದಳಪತಿ ವಿಜಯ್​ ರಹಸ್ಯ ಮೀಟಿಂಗ್​: ರಾಜಕೀಯ ಎಂಟ್ರಿ ಫಿಕ್ಸ್? ನಟನೆಗೆ ಬ್ರೇಕ್​​?

ವಿಜಯ್ ಸದ್ಯ ಲಿಯೋ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಈ ಬಗ್ಗೆ ನಿರ್ದೇಶಕ ಲೋಕೇಶ್ ಕನಗರಾಜ್ ಬಹಿರಂಗ ಪಡಿಸಿದ್ದಾರೆ. ಈ ಸಿನಿಮಾದಲ್ಲಿ ವಿಜಯ್ ಗ್ಯಾಂಗ್‌ಸ್ಟರ್ ಪಾತ್ರ ಮಾಡಿದ್ದಾರೆ ಎನ್ನಲಾಗಿದೆ. ವಿಜಯ್ ಜೊತೆ ಈ ಸಿನಿಮಾದಲ್ಲಿ ನಾಯಕಿಯಾಗಿ ತ್ರಿಷಾ ನಟಿಸಿದ್ದಾರೆ. ಅನೇಕ ವರ್ಷಗಳ ಬಳಿಕ ತ್ರಿಷಾ ಮತ್ತು ವಿಜಯ್ ಇಬ್ಬರೂ ಒಟ್ಟಿಗೆ ನಟಿಸಿದ್ದಾರೆ. ಗೌತಮ್ ವಾಸುದೇವ್ ಮೆನನ್, ಅರ್ಜುನ್ ಸರ್ಜಾ, ಮಿಸ್ಕಿನ್, ಮನ್ಸೂರ್ ಅಲಿ ಖಾನ್, ಪ್ರಿಯಾ ಆನಂದ್, ಅರ್ಜುನ್ ದಾಸ್, ಮ್ಯಾಥ್ಯೂ ಥಾಮಸ್ ಸೇರಿದಂತೆ ಅನೇಕರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಧನುಷ್, ಕಮಲ್ ಹಾಸನ್ ಮತ್ತು ರಾಮ್ ಚರಣ್ ಅವರಂತಹ ನಟರು ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ರಶ್ಮಿಕಾ- ಸ್ಮೃತಿ ಇಬ್ಬರ ಎಂಗೇಜ್​ಮೆಂಟೂ ಮುರಿದುಬಿತ್ತು: ಮಂದಣ್ಣ- ಮಂಧಾನ ಹೆಸರಲ್ಲಿ ಏನಿದೆ ಗ್ರಹಚಾರ?
ಕೊನೆಗೂ ಅದಿತಿ ರಾವ್ ಹೈದರಿ ಗುಟ್ಟು ರಟ್ಟಾಯ್ತು.. ಎಷ್ಟು ದಿನ ಅಂತ ಮುಚ್ಚಿಡೋಕಾಗುತ್ತೆ ಹೇಳಿ..!?