ಎಂ ಎಸ್ ಧೋನಿ ಮೊದಲ ಸಿನಿಮಾದಲ್ಲಿ ದಳಪತಿ ವಿಜಯ್ ಹೀರೋ

Published : Jun 21, 2022, 05:34 PM IST
ಎಂ ಎಸ್ ಧೋನಿ ಮೊದಲ ಸಿನಿಮಾದಲ್ಲಿ ದಳಪತಿ ವಿಜಯ್ ಹೀರೋ

ಸಾರಾಂಶ

ಟೀಂ ಇಂಡಿಯಾದ ಮಾಜಿ ನಾಯಕ, ಕ್ಯಾಪ್ಟನ್ ಕೂಲ್ ಎಂದೇ ಖ್ಯಾತಿಗಳಿಸಿದ್ದ ಎಂ ಎಸ್ ಧೋನಿ (MS Dhoni) ಸಿನಿಮಾರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ ಎನ್ನುವ ಸುದ್ದಿ ಕಳೆದ ಕೆಲವು ದಿನಗಳಿಂದ ವೈರಲ್ ಆಗಿದೆ. ಅಂದಹಾಗೆ ಧೋನಿ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾದಲ್ಲಿ ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ (Thalapathy Vijay) ಕಾಣಿಕೊಳ್ಳುತ್ತಿದ್ದಾರೆ ಎನ್ನುವ ಮಾತು ಕೇಳಿಬಂದಿದೆ.   

ಟೀಂ ಇಂಡಿಯಾದ ಮಾಜಿ ನಾಯಕ, ಕ್ಯಾಪ್ಟನ್ ಕೂಲ್ ಎಂದೇ ಖ್ಯಾತಿಗಳಿಸಿದ್ದ ಎಂ ಎಸ್ ಧೋನಿ (MS Dhoni) ಸಿನಿಮಾರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ ಎನ್ನುವ ಸುದ್ದಿ ಕಳೆದ ಕೆಲವು ದಿನಗಳಿಂದ ವೈರಲ್ ಆಗಿದೆ. ಕ್ರಿಕೆಟ್‌ಗೆ (Cricket) ನಿವೃತ್ತಿ ಘೋಷಿಸಿರುವ ಎಂ ಎಸ್ ಧೋನಿ ಇದೀಗ ಸಿನಿಮಾರಂಗದಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಅಂದಹಾಗೆ ಧೋನಿ ಕಾಲಿವುಡ್ ಸಿನಿಮಾರಂಗದಿಂದ ಬಣ್ಣದ ಲೋಕಕ್ಕೆ ಎಂಟ್ರಿ ಕೊಡುತ್ತಾರೆ ಎನ್ನುವ ಮಾತು ಕೇಳಿಬರುತ್ತಿದೆ. ಧೋನಿ ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿಲ್ಲ. ನಿರ್ಮಾಪಕನಾಗಿ ಸಿನಿಮಾರಂಗಕ್ಕೆ ಕಾಲಿಡುತ್ತಿದ್ದಾರೆ. ಅಂದಹಾಗೆ ಧೋನಿ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾದಲ್ಲಿ ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ (Thalapathy Vijay) ಕಾಣಿಕೊಳ್ಳುತ್ತಿದ್ದಾರೆ ಎನ್ನುವ ಮಾತು ಕೇಳಿಬಂದಿದೆ. 

ಅಂದಹಾಗೆ ಧೋನಿ ಮತ್ತು ವಿಜಯ್ ನಡುವೆ ಉತ್ತಮ ಬಾಂಧವ್ಯವಿದೆ. ಆಗಾಗ ಇಬ್ಬರೂ ಭೇಟಿಯಾಗುತ್ತಿರುತ್ತಾರೆ. ಇತ್ತೀಚಿಗಷ್ಟೆ ಧೋನಿ, ವಿಜಯ್ ಚಿತ್ರೀಕರಣ ಸೆಟ್‌ಗೆ ಭೇಟಿ ನೀಡಿದ್ದರು. ಇಬ್ಬರ ಭೋಟಿಯ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಈ ಎಲ್ಲಾ ಬೆಳವಣಿಗೆ ಬಳಿಕ ಇದೀಗ ವಿಜಯ್ ಜೊತೆ ಧೋನಿ ಸಿನಿಮಾ ಮಾಡುತ್ತಿದ್ದಾರೆ ಎನ್ನುವ ಮಾತು ಕೇಳಿಬಂದಿದೆ. 

ಈಗಾಗಲೇ ಧೋನಿ, ದಳಪತಿ ವಿಜಯ್ ಜೊತೆ ಮಾತುಕತೆ ನಡೆಸಿದ್ದ ಸಿನಿಮಾದಲ್ಲಿ ನಟಿಸುವಂತೆ ಕೇಳಿಕೊಂಡಿದ್ದಾರಂತೆ. ಧೋನಿ ಮಾತಿಗೆ ಗ್ರೀನ್ ಸಿಗ್ನಲ್ ನೀಡಿರುವ ವಿಜಯ್ ನಟಿಸಲು ಒಪ್ಪಿಕೊಂಡಿದ್ದಾರೆ. ಇನ್ನು ವಿಶೇಷ ಎಂದರೆ ಧೋನಿ ಮತ್ತು ವಿಜಯ್ ಸಿನಿಮಾದ ಅಧಿಕೃತ ಗೋಷಣೆ ವಿಜಯ್ ಹುಟ್ಟುಹಬ್ಬದಂದು ಹೊರಬೀಳಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.  ಅಂದಹಾಗೆ ವಿಜಯ್ ಜೂನ್ 22ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ದಳಪತಿ ಹುಟ್ಟುಹಬ್ಬಕ್ಕೆ ಇನ್ನೊಂದೆ ದಿನ ಬಾಕಿ ಇದೆ. ಹಾಗಾಗಿ ಅಭಿಮಾನಿಗಳು ಸಹ ಕಾತರದಿಂದ ಕಾಯುತ್ತಿದ್ದಾರೆ. 

ವಿಜಯ್ ಸದ್ಯ 67ನೇ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಬಳಿಕ ಧೋನಿ ಸಿನಿಮಾದಲ್ಲಿ ನಟಿಸುವ ಸಾಧ್ಯತೆ ಇದೆ. ಅಂದಹಾಗೆ ವಿಜಯ್ ಜೊತೆ ಧೋನಿ ಕೂಡ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಇನ್ನು ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ. ಈ ಸುದ್ದಿ ಕೇಳಿಯೇ ವಿಜಯ್ ಮತ್ತು ಧೋನಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. 

KGF 2 ಬಳಿಕ ಮತ್ತೊಂದು ಸೌತ್ ಸ್ಟಾರ್ ಸಿನಿಮಾದಲ್ಲಿ ಅಧೀರ; ದಕ್ಷಿಣದಲ್ಲಿ ಹೆಚ್ಚಿದ ಸಂಜಯ್ ದತ್ ಬೇಡಿಕೆ

 ಧೋನಿಯನ್ನು ಅಭಿಮಾನಿಗಳು ಪ್ರೀತಿಯಿಂದ ತಲಾ ಎಂದು ಕರೆಯುತ್ತಾರೆ. ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬಳಿಕ ಧೋನಿ ಅನೇಕ ಉದ್ಯಮಗಳಲ್ಲಿ ತೊಡಗಿಕೊಂಡಿದ್ದರು. ಕೃಷಿ,  ಬಟ್ಟೆ ಸೇರಿದಂತೆ ಅನೇಕ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇದೀಗ ನಿರ್ಮಾಪಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಧೋನಿ ಎಂಟಟೈನ್ ಮೆಂಟ್ ಬ್ಯಾನರ್ ನಲ್ಲಿ ವಿಜಯ್ ಸಿನಿಮಾ ಮೂಡಿಬರಲಿದೆ. 

ಅಂದು ಶಾರುಖ್ ಇಂದು ವಿಜಯ್; KGF 2 ಮುಂದೆ ಹೀನಾಯ ಸೋತ 'ಬೀಸ್ಟ್'

ಇತ್ತೀಚಿಷ್ಟೆ ಧೋನಿ ಸಿನಿಮಾದಲ್ಲಿ ನಾಯಕಿಯಾಗಿ ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್ ನಯನತಾರಾ ಕಾಣಿಸಿಕೊಳ್ಳಲಿದ್ದಾರೆ ಎಂದು ಸುದ್ದಿಯಾಗಿತ್ತು. ಧೋನಿಯೇ ತನ್ನ ಸಿನಿಮಾದಲ್ಲಿ ನಯನತಾರಾ ಇರಬೇಕೆಂದು ಆಯ್ಕೆ ಮಾಡಿದ್ದರು ಎನ್ನುವ ಸುದ್ದಿ ವೈರಲ್ ಆಗಿತ್ತು. ಇದೀಗ ವಿಜಯ್ ಆಯ್ಕೆಯಾಗಿದ್ದಾರೆ. ವಿಜಯ್ ಮತ್ತು ನಯನತಾರಾ ಜೊತೆ ಧೋನಿ ಸಿನಿಮಾ ಮಾಡುತ್ತಿರುವುದು ಸಿನಿರಂಗದಲ್ಲಿ ದೊಟ್ಟ ಮಟ್ಟದ ಸಂಚಲ ಮೂಡಿಸಿದೆ.   

ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿರುವ ಧೋನಿ, ಸದ್ಯ ಐಪಿಎಲ್‌ನಲ್ಲಿ (IPL) ಆಡುತ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಪರ ಧೋನಿ ಆಡುತ್ತಿದ್ದಾರೆ.  

     

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ನಾನೇನು ಸಾಧುವಲ್ಲ.. ಹೀಗೆ ಮಾತಾಡೋಕೆ ನನಗೂ ಬರುತ್ತೆ: ಪುಷ್ಪ ನಟಿ ಹೇಳಿದ್ದೇನು?
ವೃತ್ತಿಜೀವನದಲ್ಲಿ 2 ಬಾರಿ ದೊಡ್ಡ ತಪ್ಪು ಮಾಡಿದ ರಾಮ್ ಚರಣ್.. ಚಿರಂಜೀವಿಯೂ ಏನೂ ಮಾಡಲಾಗಲಿಲ್ಲವೇ?