ಆಕ್ಟಿವಿಸ್ಟ್ ಗೌತಮ್ ನವ್ಲಾಖಾ ಅವರಿಗೆ ಜಾಮೀನು ನೀಡಿದ್ದ ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಮತ್ತು ಒರಿಸ್ಸಾ ಹೈಕೋರ್ಟ್‌ನ ಪ್ರಸ್ತುತ ಮುಖ್ಯ ನ್ಯಾಯಮೂರ್ತಿ ಎಸ್ ಮುರಳೀಧರ್ ವಿರುದ್ಧ ಪಕ್ಷಪಾತ ಧೋರಣೆ ತೋರಿದ್ದಾರೆ ಎಂದು ಆರೋಪಿಸಿದ್ದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮಂಗಳವಾರ ದೆಹಲಿ ಹೈಕೋರ್ಟ್‌ನಲ್ಲಿ ಬೇಷರತ್ ಕ್ಷಮೆಯಾಚಿಸಿದ್ದಾರೆ.
ಆಕ್ಟಿವಿಸ್ಟ್ ಗೌತಮ್ ನವ್ಲಾಖಾ ಅವರಿಗೆ ಜಾಮೀನು ನೀಡಿದ್ದ ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಮತ್ತು ಒರಿಸ್ಸಾ ಹೈಕೋರ್ಟ್‌ನ ಪ್ರಸ್ತುತ ಮುಖ್ಯ ನ್ಯಾಯಮೂರ್ತಿ ಎಸ್ ಮುರಳೀಧರ್ ವಿರುದ್ಧ ಪಕ್ಷಪಾತ ಧೋರಣೆ ತೋರಿದ್ದಾರೆ ಎಂದು ಆರೋಪಿಸಿದ್ದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮಂಗಳವಾರ (ಡಿಸೆಂಬರ್ 6) ದೆಹಲಿ ಹೈಕೋರ್ಟ್‌ನಲ್ಲಿ ಬೇಷರತ್ ಕ್ಷಮೆಯಾಚಿಸಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ನ್ಯಾಯಾಧೀಶರ ವಿರುದ್ಧದ ಹೇಳಿಕೆಯನ್ನು ಹಿಂಪಡೆದು ಕ್ಷಮೆಯಾಚಿಸಿ ಅಫಿಡವಿಟ್ ಸಲ್ಲಿಸಿದ್ದಾರೆ. ಆದರೆ ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ಮೃದುಲ್ ಮತ್ತು ತಲ್ವಂತ್ ಸಿಂಗ್ ಅವರ ಪೀಠವು ಅಗ್ನಿಹೋತ್ರಿ ವಿಚಾರಣೆಗೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಬೇಕೆಂದು ಆದೇಶಿಸಿದೆ.
ಕ್ಷಮೆಯಾಚಿಸಲು 2023ರ ಮಾರ್ಚ್ 16 ಮುಂದಿನ ವಿಚಾರಣೆಗೆ ನಿರ್ದೇಶಕ ಅಗ್ನಿ ಹೋತ್ರಿ ವೈಯಕ್ತಿಕವಾಗಿ ಹಾಜರಾಗಬೇಕು ಎಂದು ಸೂಚಿಸಿ ಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.
ಸುಳ್ಳು ಎಂದು ಸಾಬೀತಾದ್ರೆ ಸಿನಿಮಾ ಮಾಡೋದನ್ನೇ ಬಿಡ್ತೀನಿ; 'ಕಾಶ್ಮೀರ್ ಫೈಲ್ಸ್' ನಿರ್ದೇಶಕ ಅಗ್ನಿಹೋತ್ರಿ ಸವಾಲ್
ನಾವು ಅವರನ್ನು ಕೋರ್ಟ್ ನಲ್ಲಿ ಹಾಜರಾಗುವಂತೆ ಕೇಳುತ್ತೇನೆ ಯಾಕೆಂದರೆ ಅವರ ಹೇಳಿಕೆ ಖಂಡನೀಯ. ಖುದ್ದಾಗಿ ಬಂದು ಕ್ಷಮೆ ಕೇಳಲು ಅವರಿಗೆ ಏನಾದರೂ ಸಮಸ್ಯೆ ಇದೆಯಾ? ಕ್ಷಮೆಯನ್ನು ಯಾವಾಗಲೂ ಅಫಿಡವಿಟ್ ಮೂಲಕ ವ್ಯಕ್ತಪಡಿಸಲಾಗುವುದಿಲ್ಲ' ಎಂದು ನ್ಯಾಯಾಲಯ ಅಗ್ನಿಹೋತ್ರಿ ವಿರುದ್ಧ ಆಕ್ರೋಶ ಹೊರಹಾಕಿದೆ.
ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಆಕ್ಟಿವಿಸ್ಟ್ ಗೌತಮ್ ನವ್ಲಾಖಾ ಅವರಿಗೆ ರಿಲೀಫ್ ನೀಡಿದ ನ್ಯಾಯಮೂರ್ತಿ ಎಸ್ ಮುರಳೀಧರ್ ಆದೇಶದ ವಿರುದ್ಧ ನಿರ್ದೇಶಕ ಅಗ್ನಿಹೋತ್ರಿ ಪಕ್ಷಪಾತ ಎಂದು ಆರೋಪಿಸಿ ಟ್ವೀಟ್ ಮಾಡಿದ್ದರು. ಬಳಿಕ ಅಗ್ನಿಹೋತ್ರಿ ನ್ಯಾಯಾಂಗ ನಿಂಧನೆ ಆರೋಪ ಎದುರಿಸಿದರು.
ನಂತರ ಅಗ್ನಿಹೋತ್ರಿ ಅವರು ತಮ್ಮ ಬೇಷರತ್ ಕ್ಷಮೆಯನ್ನು ವ್ಯಕ್ತಪಡಿಸಿ ಅಫಿಡವಿಟ್ ಸಲ್ಲಿಸಿದರು. ಅಫಿಡೆವಿಟ್ ನಲ್ಲಿ ನ್ಯಾಯಾಧೀಶರ ವಿರುದ್ಧ ಮಾಡಿರುವ ಟ್ವೀಟ್ ಡಿಲೀಟ್ ಮಾಡಿರುವುದಾಗಿ ಉಲ್ಲೇಖಿಸಿದ್ದಾರೆ.
Kashmir Files Controversy; ಅಶ್ಲೀಲ ಚಿತ್ರವೆಂದ ಇಸ್ರೇಲಿ ನಿರ್ದೇಶಕನಿಗೆ ಸ್ವರಾ ಭಾಸ್ಕರ್, ಪ್ರಕಾಶ್ ರಾಜ್ ಬೆಂಬಲ
ಖುದ್ದಾಗಿ ಅಗ್ನಿಹೋತ್ರಿ ಅವರೇ ಹಾಜರಾಗಬೇಕೆಂದು ನ್ಯಾಯಾಲಯ ಸೂಚಿಸಿದೆ. ಅಗ್ನಿಹೋತ್ರಿ ಅವರ ಪರ ವಕೀಲರು ಮುಂದಿನ ವಿಚಾರಣೆಗೆ ಖುದ್ದಾಗಿ ಹಾಜರಾಗುತ್ತಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ ನಂತರ ನ್ಯಾಯಾಲಯವು ಅಂತಿಮವಾಗಿ ವಿಚಾರಣೆಯನ್ನು ಮುಂದೂಡಿತು.