ಬಾಲಿವುಡ್‌ಗೆ ನನ್ನನ್ನು ಕೊಳ್ಳಲು ಸಾಧ್ಯವಿಲ್ಲ ಎಂದಿದ್ದ ಮಹೇಶ್ ಬಾಬು ಸಂಭಾವನೆ ಕೇಳಿದ್ರೆ ಅಚ್ಚರಿ ಪಡುತ್ತೀರಿ

Published : May 11, 2022, 03:12 PM IST
ಬಾಲಿವುಡ್‌ಗೆ ನನ್ನನ್ನು ಕೊಳ್ಳಲು ಸಾಧ್ಯವಿಲ್ಲ ಎಂದಿದ್ದ ಮಹೇಶ್ ಬಾಬು ಸಂಭಾವನೆ ಕೇಳಿದ್ರೆ ಅಚ್ಚರಿ ಪಡುತ್ತೀರಿ

ಸಾರಾಂಶ

ಬಾಲಿವುಡ್ ಮಂದಿಗೆ ತನ್ನನ್ನು ನಿಭಾಯಿಸಲು ಸಾಧ್ಯವಿಲ್ಲ ಎಂದು ಹೇಳಿರುವ ಮಹೇಶ್ ಬಾಬು ಮಾತು ವೈರಲ್ ಆದ ಬೆನ್ನಲ್ಲೇ ಮಹೇಶ್ ಬಾಬು ಒಂದು ಸಿನಿಮಾಗೆ ಎಷ್ಟು ಸಂಭಾವನೆ ಪಡೆಯುತ್ತಾರೆ ಎನ್ನುವ ಚರ್ಚೆ ಜೋರಾಗಿದೆ.

ತೆಲುಗು ಸಿನಿಮಾರಂಗದ ಸ್ಟಾರ್ ನಟ ಮಹೇಶ್ ಬಾಬು ಸದ್ಯ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ಬಾಲಿವುಡ್‌ನಲ್ಲಿ ಸಿನಿಮಾ ಮಾಡುವ ಬಗ್ಗೆ ಮತ್ತು ಹಿಂದಿ ಸಿನಿಮಾಗಳ ಆಫರ್ ಬಗ್ಗೆ ಮಹೇಶ್ ಬಾಬು ಹೇಳಿದ ಮಾತು ಈಗ ಸಂಚಲನ ಸೃಷ್ಟಿ ಮಾಡಿದೆ. ಹಿಂದಿ ಸಿನಿಮಾರಂಗಕ್ಕೆ ನನ್ನನ್ನು ಕೊಳ್ಳುವ ಶಕ್ತಿ ಇಲ್ಲ ಎಂದಿರುವ ಮಹೇಶ್ ಹಿಂದಿ ಸಿನಿಮಾಗಳನ್ನು ಕಾಯುತ್ತ ನಾನು ಸಮಯ ವ್ಯರ್ಥ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಹಲವಾರು ಬಾಲಿವುಡ್ ಸಿನಿಮಾಗಳ ಆಫರ್ ಬಂದಿವೆ ಎಂದು ಬಹಿರಂಗ ಪಡಿಸಿರುವ ಮಹೇಶ್ ಬಾಬು ಯಾವಾಗಲು ತೆಲುಗು ಸಿನಿಮಾ ಬಯಸುತ್ತೇನೆ ಭಾರತದಾದ್ಯಂತ ಜನರು ವೀಕ್ಷಿಸಬೇಕು ಎಂದು ಹೇಳಿದರು. 'ನನಗೆ ಹಿಂದಿಯಲ್ಲಿ ಸಾಕಷ್ಟು ಆಫರ್ ಗಳು ಬಂದಿವೆ. ಆದರೆ ಅವರು ನನ್ನನ್ನು ಕೊಳ್ಳಲು ಸಾಧ್ಯವಿಲ್ಲ ಎಂದು ಭಾವಿಸುತ್ತೇನೆ. ನನ್ನ ಸಮಯ ವ್ಯರ್ಥ ಮಾಡುವುದಿಲ್ಲ. ತೆಲುಗು ಸಿನಿಮಾರಂಗದಲ್ಲಿ ನಗೆ ಇರುವ ಪ್ರೀತಿ ಮತ್ತು ಸ್ಟಾರ್ ಡಮ್ ಬಿಟ್ಟು ಬೇರೆ ಸಿನಿಮಾರಂಗಕ್ಕೆ ಹೋಗುವ ಬಗ್ಗೆ ಯಾವುದೇ ಯೋಚನೆ ಮಾಡಿಲ್ಲ. ನಾನು ಇಲ್ಲೇ ಸಿನಿಮಾ ಮಾಡುತ್ತೇನೆ ಅವುಗಳನ್ನು ಎಲ್ಲರೂ ನೋಡುತ್ತಾರೆ' ಎಂದು ಹೇಳಿದರು.

ಅಂದಹಾಗೆ ಮಹೇಶ್ ಬಾಬು ಬಾಲಿವುಡ್ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಸಹ ಮಹೇಶ್ ಬಾಬು ತಾನು ಎಂದಿಗೂ ಬಾಲಿವುಡ್ ಸಿನಿಮಾದಲ್ಲಿ ನಟಿಸುವುದಿಲ್ಲ ಎಂದು ಹೇಳಿದ್ದರು. ಬಾಲಿವುಡ್ ಮಂದಿಗೆ ತನ್ನನ್ನು ನಿಭಾಯಿಸಲು ಸಾಧ್ಯವಿಲ್ಲ ಎಂದು ಹೇಳಿರುವ ಮಹೇಶ್ ಬಾಬು ಮಾತು ವೈರಲ್ ಆದ ಬೆನ್ನಲ್ಲೇ ಮಹೇಶ್ ಬಾಬು ಒಂದು ಸಿನಿಮಾಗೆ ಎಷ್ಟು ಸಂಭಾವನೆ ಪಡೆಯುತ್ತಾರೆ ಎನ್ನುವ ಚರ್ಚೆ ಜೋರಾಗಿದೆ.

ಬಾಲಿವುಡ್‌ ನನಗೆ ಹಣ ನೀಡಲು ಸಾಧ್ಯವಿಲ್ಲ, ಸಮಯ ವ್ಯರ್ಥ ಮಾಡಲು ಇಷ್ಟವಿಲ್ಲ: ಮಹೇಶ್ ಬಾಬು

ಅನೇಕ ಮಾಧ್ಯಮಗಳು ವರದಿ ಮಾಡಿದ ಪ್ರಕಾರ ನಟ, ನಿರ್ಮಾಪಕ ಮಹೇಶ್ ಬಾಬು ಸಿನಿಮಾವೊಂದಕ್ಕೆ ಬರೋಬ್ಬರಿ 60 ಕೋಟಿ ರೂಪಾಯಿ ಸಂಭಾವನೆ ಪಡೆಯತ್ತಿದ್ದರು. ಇದೀಗ ಮತ್ತೆ ಸಂಭಾವನೆ ಏರಿಸಿಕೊಂಡಿದ್ದು ಒಂದು ಚಿತ್ರಕ್ಕೆ ಮಹೇಶ್ ಬಾಬು 80 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಬಾಲಿವುಡ್ ನಲ್ಲಿ 80 ಕೋಟಿ ರೂಪಾಯಿ ಸಂಭಾವನೆ ಪಡೆಯುವ ನಟರೆಂದರೆ ಅಕ್ಷಯ್ ಕುಮಾರ್, ಆಮೀರ್ ಖಾನ್, ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್. ಕಲಾವಿದರು ತಾವು ನಟಿಸಿದ ಚಿತ್ರಗಳಲ್ಲಿ ಲಾಭಾಂಶ ಹೊಂದಿರುತ್ತಾರೆ.

Sarkaru Vaari Paata: ಶೂಟಿಂಗ್ ಸೆಟ್‌ನಲ್ಲಿ ಮಹೇಶ್‌ ಬಾಬು ಕೆನ್ನೆಗೆ ಹೊಡೆದ ನಟಿ?

ಮಹೇಶ್ ಬಾಬು ಸದ್ಯ ಸರ್ಕಾರು ವಾರಿ ಪಾಟ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದ್ದು ಬಿಡುಗಡೆಗೆ ತಯಾರಿ ನಡೆಸುತ್ತಿದ್ದಾರೆ. ಈ ಸಿನಿಮಾದಲ್ಲಿ ಮಹೇಶ್ ಬಾಬು ಜೊತೆ ಕೀರ್ತಿ ಸುರೇಶ್ ನಟಿಸುತ್ತಿದ್ದಾರೆ. ಮೊದಲ ಬಾರಿಗೆ ಕೀರ್ತಿ ಮತ್ತು ಮಹೇಶ್ ಬಾಬು ತೆರೆ ಹಂಚಿಕೊಂಡಿದ್ದಾರೆ. ಈ ಸಿನಿಮಾ ಬಳಿಕ ಮಹೇಶ್ ಬಾಬು ಖ್ಯಾತ ನಿರ್ದೇಶಕ ರಾಜಮೌಳಿ ಸಿನಿಮಾದಲ್ಲಿ ನಟಿಸಲಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ನಾನೇನು ಸಾಧುವಲ್ಲ.. ಹೀಗೆ ಮಾತಾಡೋಕೆ ನನಗೂ ಬರುತ್ತೆ: ಪುಷ್ಪ ನಟಿ ಹೇಳಿದ್ದೇನು?
ವೃತ್ತಿಜೀವನದಲ್ಲಿ 2 ಬಾರಿ ದೊಡ್ಡ ತಪ್ಪು ಮಾಡಿದ ರಾಮ್ ಚರಣ್.. ಚಿರಂಜೀವಿಯೂ ಏನೂ ಮಾಡಲಾಗಲಿಲ್ಲವೇ?