
ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ವಿತರಕ ಕಮಲಾಕರ ರೆಡ್ಡಿ ಹಾಗೂ ಅವರ ತಂದೆ ನಂದಗೋಪಾಲ ರೆಡ್ಡಿ ಅವರಿಗೆ ಕೊರೋನಾ ಸೋಂಕು ಇರುವುದು ಧೃಡಪಟ್ಟಿದ್ದು ಇಬ್ಬರು ಖಾಸಗಿ ಆಂಬುಲೆನ್ಸ್‌ನಲ್ಲಿ ನೆಲ್ಲೂರಿನಿಂದ ಹೈದರಾಬಾದ್ ಅಪೋಲೋ ಆಸ್ಪತ್ರೆ ಕಡೆ ತೆರಳುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಅಪಘಾತ ಸಂಭವಿಸಿದ್ದು ಹೇಗೆ?
ಕಮಲಕಾರ ರೆಡ್ಡಿ ಪ್ರಯಾಣಿಸುತ್ತಿದ್ದ ಆಂಬ್ಯುಲೆನ್ಸ್ ಕೊಂಡಪ್ರೋಲು ಬಳಿ ಲಾರಿಯೊಂದಕ್ಕೆ ಗುದ್ದಿದೆ. ನಿರ್ಮಾಪಕ ಹಾಗೂ ಅವರ ತಂದೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಆದರೆ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಳಗ್ಗಿನ ಜಾವವಾಗಿದ್ದ ಕಾರಣ ಆಂಬ್ಯುಲೆನ್ಸ್ ಚಲಾಯಿಸುತ್ತಿದ್ದ ಚಾಲಕ ನಿದ್ದೆ ಜಾರಿ ಅವಘಡ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕಮಲಾಕರ ಹಾಗೂ ಅವರ ತಂದೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮಾಡಲು ಮಿರಿಯಾಲಗುಡ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
25ವರ್ಷಗಳಿಂದೆ ತೆಲುಗು ಚಿತ್ರರಂಗದಲ್ಲಿ ಸೇವೆ ಸಲ್ಲಿಸುತ್ತಿರುವ ಕಮಲಾಕರ ರೆಡ್ಡಿ ಹಿಂದಿಯ 'ಪದ್ಮಾವತ್' ಸಿನಿಮಾಗೂ ವಿತರಣೆ ಮಾಡಿದ್ದಾರೆ ಹಾಗೂ ವಿಜಯ್ ದೇವರಕೊಂಡ ಅಭಿನಯದ 'ಅರ್ಜುನ್ ರೆಡ್ಡಿ' ಸಿನಿಮಾದ ಸಹ ನಿರ್ಮಾಪಕರಾಗಿದ್ದರು. ಕುಟುಂಬಸ್ಥರು ಹಾಗೂ ಚಿತ್ರರಂಗದ ಆಪ್ತರನ್ನು ಅಗಲಿರುವ ಕಮಲಾಕರ ಹಾಗೂ ಅವರ ತಂದೆಯ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸೋಣ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.