
ಜನ ಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ ವೈದ್ಯರ ಸಲಹೆ ಪಡೆದು, ಸ್ವಯಂ ಪ್ರೇರಿತರಾಗಿ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಇದಕ್ಕೆ ಕಾರಣ ತಮ್ಮ ಪಕ್ಷದ ಅನೇಕ ಸದಸ್ಯರಿಗೆ ಕೊರೋನಾ ಸೋಂಕು ತಗುಲಿದೆ. ಪವನ್‌ಗೆ ಯಾವುದೇ ರೋಗಲಕ್ಷಣಗಳು ಕಂಡು ಬಂದಿಲ್ಲ. ಆದರೆ ಮುನ್ನೆಚ್ಚರಿಕೆ ಬೇಕಿದೆ ಎಂದು ಈ ನಿರ್ಧಾರ ಕೈ ಕೊಂಡಿದ್ದಾರೆ.
ಕ್ವಾರಂಟೈನ್‌ನಲ್ಲಿರುವ ಕಾರಣ ಕೆಲವು ದಿನಗಳ ಕಾಲ ವಿಡಿಯೋ ಕಾನ್ಫರೆನ್ಸ್ ಮೂಲಕ ಪಕ್ಷದ ಮುಖಂಡರು ಹಾಗೂ ಸಿನಿಮಾ ತಂಡದ ಜೊತೆ ಸಂಪರ್ಕದಲ್ಲಿರುತ್ತಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಇನ್ನೂ ಖುಷ್ಬೂ ಪತಿ ನಿರ್ದೇಶಕ ಸುಂದರ್‌ಗೆ ಕೊರೋನಾ ಪಾಸಿಟಿವ್ ಎಂದು ತಿಳಿದು ಬಂದಿದೆ. 'ಸುಂದರ್ ಆರೋಗ್ಯವಾಗಿದ್ದಾರೆ. ವೈದ್ಯರು ನೀಡಿರುವ ಸಲಹೆಯಿಂದ ಆಸ್ಪತ್ರೆ ಸೇರಿದ್ದಾರೆ. ಕೆಲವು ದಿನಗಳಿಂದ ಅವರ ಸಂಪರ್ಕದಲ್ಲಿದ್ದವರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ,' ಎಂದು ಟ್ಟೀಟ್ ಮಾಡುವ ಮೂಲಕ ನಟಿ ಖುಷ್ಬೂ ಮನವಿ ಮಾಡಿಕೊಂಡಿದ್ದಾರೆ.
'ವಕೀಲ್ ಸಾಬ್' ಚಿತ್ರದ ಬಗ್ಗೆ ಟ್ವೀಟ್ಸ್ ಸುರಿಮಳೆ; ಚಿತ್ರ ವಿಮರ್ಶೆ ರೆಡಿ!
ಇತ್ತೀಚಿಗೆ ಪವನ್ ಕಲ್ಯಾಣ ಅಭಿನಯದ ವಕೀಲ್ ಸಾಬ್ ಸಿನಿಮಾ ತೆರೆ ಕಂಡಿದೆ. ಮೂರು ವರ್ಷಗಳ ನಂತರ ಪವನ್ ಕಲ್ಯಾಣ್ ಅವರನ್ನು ತೆರೆ ಮೇಲೆ ಕಂಡ ಅಭಿಮಾನಿಗಳು ಸಂತಸ ವ್ಯಕ್ತ ಪಡಿಸಿದ್ದಾರೆ. ಇದು ರಿಮೇಕ್ ಚಿತ್ರವೇ ಆಗಿರಬಹುದು ಆದರೆ ಪವನ್ ಕಲ್ಯಾನ್ ಆ್ಯಕ್ಟಿಂಗ್ ತುಂಬಾನೇ ಯ್ಯೂನಿಕ್ ಅದಕ್ಕೆ ಸಿನಿಮಾ ಕ್ಲಿಕ್ ಆಗುತ್ತಿದೆ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.