
ಟೈಗರ್ ಶ್ರಾಫ್, ಹೃತಿಕ್ ರೋಷನ್ ಜೊತೆ ಕಾಣಿಸಿಕೊಂಡಿದ್ದ ನಟಿ ವಾಣಿ ಕಪೂರ್ ಏನೋ ಮಾಡಲು ಹೋಗಿ ಇನ್ನೇನೋ ಎಡವಟ್ಟು ಮಾಡಿಕೊಂಡಿದ್ದಾರೆ. ಇಂತಹ ಅಚಾತುರ್ಯಗಳನ್ನು ಬೇಕು ಅಂತಲೇ ಮಾಡುತ್ತಾರೋ, ಗೊತ್ತಾಗದೇ ಮಾಡುತ್ತಾರೋ ಆದರೆ ವೈರಲ್ ಮಾತ್ರ ಆಗಿಬಿಡುತ್ತದೆ.
'ಹರೇ ರಾಮ್...' ಎಂದು ಬರೆದುಕೊಂಡಿದ್ದ ಬಿಕಿನಿ ಟಾಪ್ ವೊಂದನ್ನು ಹಾಕಿಕೊಂಡಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ನಿಮಗೆ ಸಂಸ್ಕೃತಿ, ಸಂಸ್ಕಾರದ ಬೆಲೆ ಗೊತ್ತಿಲ್ಲ. ಜನರ ಧಾರ್ಮಿಕ ಭಾವನೆಗಳ ಜೊತೆ ಆಟವಾಡಬೇಡಿ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.
ವಾಣಿ ಕಪೂರ್ ಹೃತಿಕ್ ರೋಷನ್, ಟೈಗರ್ ಶ್ರಾಫ್ ಜೊತೆ "ವಾರ್' ಸಿನಿಮಾದಲ್ಲಿ ನಟಿಸಿದ್ದಾರೆ. ಸಿದ್ಧಾರ್ಥ್ ಆನಂದ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಮೊದಲ ದಿನದ ಶೋನಲ್ಲಿ ಅತೀ ಹೆಚ್ಚು ವೀಕ್ಷಣೆ ಪಡೆದ ಚಿತ್ರ ಇದಾಗಿದೆ. ವಿಶ್ವದಾದ್ಯಂತ 450 ಕೋಟಿ ಗಳಿಕೆ ಕಂಡಿದೆ.
ನವೆಂಬರ್ 14ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.