'ಗೋಲ್ಡನ್ ಗ್ಲೋಬ್ಸ್'ನಲ್ಲಿ ಗೆದ್ದ RRR ತಂಡಕ್ಕೆ ಪ್ರಕಾಶ್ ರಾಜ್ ಫನ್ನಿ ವಿಶ್; ವಿಡಿಯೋ ವೈರಲ್

Published : Jan 14, 2023, 05:29 PM ISTUpdated : Jan 14, 2023, 05:30 PM IST
'ಗೋಲ್ಡನ್ ಗ್ಲೋಬ್ಸ್'ನಲ್ಲಿ ಗೆದ್ದ RRR ತಂಡಕ್ಕೆ ಪ್ರಕಾಶ್ ರಾಜ್ ಫನ್ನಿ ವಿಶ್; ವಿಡಿಯೋ ವೈರಲ್

ಸಾರಾಂಶ

ಗೋಲ್ಡನ್ ಗ್ಲೋಬ್ಸ್ ನಲ್ಲಿ ಶಸ್ತಿ ಗೆದ್ದುಕೊಂಡ ನಾಟು ನಾಟು...ಹಾಡಿಗೆ  ಪ್ರಕಾಶ್ ರಾಜ್ ವಿಶೇಷವಾಗಿ ವಿಶ್ ಮಾಡಿದ್ದಾರೆ. 

ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ ಸದ್ಯ ಪ್ರತಿಷ್ಠಿತ ಗೋಲ್ಡನ್ ಬ್ಲೋಬ್ಸ್ ಪ್ರಶಸ್ತಿ ಗೆದ್ದ ಸಂಭ್ರಮದಲ್ಲಿದ್ದಾರೆ. ಆರ್ ಆರ್ ಆರ್ ಸಿನಿಮಾದ ನಾಟು ನಾಟು ಹಾಡಿಗೆ 'ಗೋಲ್ಡನ್ ಗ್ಲೋಬ್ಸ್' ಪ್ರಶಸ್ತಿ ಬಂದಿದ್ದು ಸಂಗೀತ ನಿರ್ದೇಶಕ ಎಂ ಎಂ ಕೀರವಾಣಿ ಪ್ರಶಸ್ತಿ ಗೆದ್ದು ಬೀಗಿದ್ದಾರೆ. ಇತ್ತೀಚಿಗಷ್ಟೆ ಈ ಸಮಾರಂಭ ಅಮೆರಿಕಾದ ಲಾಸ್ ಏಂಜಲೀಸ್‌ನಲ್ಲಿ ನಡೆದಿದ್ದು ಇಡೀ ಆರ್ ಆರ್ ಆರ್ ಸಿನಿಮಾತಂಡ ಅಮೆರಿಕಾದಲ್ಲಿ ಬೀಡು ಬಿಟ್ಟಿದೆ. ಪ್ರಶಸ್ತಿ ಸಮಾರಂಭದ ಒಂದಿಷ್ಟು ಸುಂದರ ಕ್ಷಣಗಳ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಜಮೌಳಿ ಅವರ ಸಾಧನೆಗೆ ಇಡೀ ಭಾರತೀಯ ಸಿನಿಮಾರಂಗ ಹೆಮ್ಮೆ ಪಡುತ್ತಿದೆ. ಇಡೀ ಭಾರತೀಯ ಸಿನಿಮಾರಂಗದ ಅನೇಕ ಗಣ್ಯರು ರಾಜಮೌಳಿ ಅವರಿಗೆ ಶುಭಾಶಯ ತಿಳಿಸುತ್ತಿದ್ದಾರೆ. ಪ್ರೀತಿ ವ್ಯಕ್ತಪಡಿಸುತ್ತಿದ್ದಾರೆ. 

ಕರ್ನಾಟಕ ಮೂಲದ ಬಹುಭಾಷ ನಟ ಪ್ರಕಾಶ್ ರಾಜ್ ವಿಭಿನ್ನವಾಗಿ ಶುಭಾಶಯ ತಿಳಿಸಿದ್ದಾರೆ. ನಾಟು ನಾಟು ಹಾಡಿಗೆ ಲಾರೆಲ್ ಮತ್ತು ಹಾರ್ಡಿ ಇಬ್ಬರೂ ಡಾನ್ಸ್ ಮಾಡುತ್ತಿರುವ ವಿಡಿಯೋ ಶೇರ್ ಮಾಡಿ ಶುಭಾಶಯ ತಿಳಿಸಿದ್ದಾರೆ. ಪ್ರಕಾಶ್ ರಾಜ್ ಅವರ ಫನ್ನಿ ವಿಡಿಯೋಗೆ ಪ್ರೀತಿಯ ಕಾಮೆಂಟ್ ಹರಿದು ಬರುತ್ತಿದೆ.  
ಆರ್ ಆರ್ ಆರ್ ಸಿನಿಮಾ ‘ಇಂಗ್ಲಿಷ್​ ಹೊರತಾದ ಅತ್ಯುತ್ತಮ ಸಿನಿಮಾ’ ಹಾಗೂ ‘ಅತ್ಯುತ್ತಮ ಹಾಡು’ (ನಾಟು ನಾಟು) ವಿಭಾಗದಲ್ಲಿ ಈ ಚಿತ್ರ ಬೇರೆ ಬೇರೆ ದೇಶಗಳ ಸಿನಿಮಾ ಜೊತೆಗೆ ಸ್ಪರ್ಧಿಸಿತ್ತು. ಅತ್ಯುತ್ತಮ ಹಾಡು ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡಿದೆ.

RRR ತಂಡದಲ್ಲಿ ಎಲ್ಲವೂ ಸರಿಯಿಲ್ಲ; ನಿರ್ಮಾಪಕರನ್ನು ದೂರ ಇಟ್ಟಿದ್ದೇಕೆ ರಾಜಮೌಳಿ ಮತ್ತು ತಂಡ?

ಪ್ರಶಸ್ತಿ ಸಮಾರಂಭದಲ್ಲಿ ಇಡೀ ಆರ್‌ಆರ್‌ಆರ್‌ ತಂಡ ಹಾಜರಿತ್ತು. ಚಿತ್ರದ ಸಂಗೀತ ನಿರ್ದೇಶಕ ಎಂ. ಎಂ. ಕೀರವಾಣಿ,  ರಾಜಮೌಳಿ ದಂಪತಿ, ಜೂ. ಎನ್‌ಟಿಆರ್ ದಂಪತಿ ಮತ್ತು ರಾಮ್ ಚರಣ್ ದಂಪತಿ ಸಹ ಭಾಗಿಯಾಗಿದ್ದರು. ಬ್ಲಾಕ್‌ಬಸ್ಟರ್‌ ಆರ್‌ಆರ್‌ಆರ್‌ ಚಿತ್ರದಲ್ಲಿ ಜೂನಿಯರ್ ಮತ್ತು ರಾಮ್ ಚರಣ್ ಸ್ವಾತಂತ್ರ್ಯ ಹೋರಾಟಗಾರರಾದ ಕೊಮರಂ ಭೀಮ್ ಮತ್ತು ಅಲ್ಲೂರಿ ಸೀತಾರಾಮ ರಾಜು ಅವರ ಪಾತ್ರದಲ್ಲಿ ಅಭಿನಯಿಸಿದ್ದರು. ಈ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ಅಜಯ್ ದೇವಗನ್ ಮತ್ತು ಅಲಿಯಾ ಭಟ್ ನಟಿಸಿದ್ದರು.

'ನಾಟು ನಾಟು'ಗೆ ಪ್ರಶಸ್ತಿ ಬೆನ್ನಲ್ಲೇ ಜ್ಯೂ. ಎನ್​ಟಿಆರ್​ ಟ್ರೋಲ್: ಬೇಕಿತ್ತಾ ಈ ಸ್ಟೈಲು?

ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಬಾಚಿಕೊಂಡಿದ್ದ ಈ ಸಿನಿಮಾ ಇದೀಗ ಗೋಲ್ಡನ್ ಗ್ಲೋಬ್ಸ್‌ನಲ್ಲಿ ಪ್ರಶಸ್ತಿ ಗೆದ್ದು ಬೀಗಿದೆ. ಸದ್ಯ ಈ ಸಿನಿಮಾ ಆಸ್ಕರ್ ರೇಸ್ ನಲ್ಲಿಯ ಸ್ಪರ್ಧೆಗಿಳಿದಿದೆ. ಸದ್ಯ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಗೆದ್ದಿರುವ ಆರ್ ಆರ್ ಆರ್ ಆಸ್ಕರ್ ಮೇಲೆ ಕಣ್ಣಿಟ್ಟಿದೆ.  

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಮಾಧುರಿಗೆ 'ನಿನ್ನನ್ನು ತಾಯಿಯಾಗಿ ನೋಡುತ್ತೇನೆ' ಎಂದಿದ್ದ ಎಂಎಫ್ ಹುಸೇನ್; ಆದ್ರೆ ಮುಂದೆ ಆಗಿದ್ದೇನು?
ಮದುವೆ ಮುರಿದುಬಿದ್ದ ಬಳಿಕ ಸ್ಮೃತಿ ಮಂಧಾನ-ಪಲಾಶ್ ಲೈಫ್‌ ಸ್ಟೈಲ್‌ನಲ್ಲಿ ಏನೆಲ್ಲಾ ಆಗೋಯ್ತು ನೋಡಿ...!