ಆ ಬಗ್ಗೆ ಮಾತಾಡೋದ್ರಲ್ಲಿ ಅರ್ಥವಿಲ್ಲ: ಸಲ್ಮಾನ್ ಬಾಡಿಗಾರ್ಡ್ ತಳ್ಳಿದ ಬಗ್ಗೆ ಕೊನೆಗೂ ಮೌನ ಮುರಿದ ವಿಕ್ಕಿ ಕೌಶಲ್

Published : May 27, 2023, 11:34 AM IST
ಆ ಬಗ್ಗೆ ಮಾತಾಡೋದ್ರಲ್ಲಿ ಅರ್ಥವಿಲ್ಲ: ಸಲ್ಮಾನ್ ಬಾಡಿಗಾರ್ಡ್ ತಳ್ಳಿದ ಬಗ್ಗೆ ಕೊನೆಗೂ ಮೌನ ಮುರಿದ ವಿಕ್ಕಿ ಕೌಶಲ್

ಸಾರಾಂಶ

ಆ ಬಗ್ಗೆ ಮಾತಾಡೋದ್ರಲ್ಲಿ ಅರ್ಥವಿಲ್ಲ ಎಂದು ಸಲ್ಮಾನ್ ಬಾಡಿಗಾರ್ಡ್ ತಳ್ಳಿದ ಘಟನೆ ಬಗ್ಗೆ ವಿಕ್ಕಿ ಕೌಶಲ್ ಪ್ರತಿಕ್ರಿಯೆ ನೀಡಿದ್ದಾರೆ. 

ಬಾಲಿವುಡ್ ಖ್ಯಾತ ನಟ ವಿಕ್ಕಿ ಕೌಶಲ್ ಅವರನ್ನು ಸಲ್ಮಾನ್ ಖಾನ್ ಬಾಡಿಗಾರ್ಡ್ಸ್ ತಳ್ಳಿದ ವಿಚಾರ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ಸಲ್ಮಾನ್ ಖಾನ್‌ ಅವರಿಗೆ ಶೇಕ್ ಹ್ಯಾಂಡ್ ಕೊಡಲು ಹೋದ ವಿಕ್ಕಿ ಕೌಶಲ್ ಅವರನ್ನು ಪಕ್ಕಕ್ಕೆ ತಳ್ಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ವಿಡಿಯೋಗೆ ಅಭಿಮಾನಿಗಳು ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ. ಅನೇಕರು ಸಲ್ಮಾನ್ ಖಾನ್ ನಡೆಯನ್ನು ಪ್ರಶ್ನೆ ಮಾಡಿದ್ರೆ ಇನ್ನು ಕೆಲವರು ಸಲ್ಮಾನ್ ಖಾನ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ಅಂದಹಾಗೆ ಈ ಘಟನೆ ನಡೆದಿದ್ದುಐಫಾ 2023 ಅವಾರ್ಡ್ ಸಮಾರಂಭದಲ್ಲಿ. ಈ ಬಗ್ಗೆ ಕೊನೆಗೂ ವಿಕ್ಕಿ ಕೌಶಲ್ ಮೌನ ಮುರಿದಿದ್ದಾರೆ. 

ವೈರಲ್ ವಿಡಿಯೋಗೆ ಪ್ರತಿಕ್ರಿಯೆ ನೀಡಿರುವ ವಿಕ್ಕಿ,  'ಅನೇರ ಬಾರಿ ಕೆಲವು ವಿಷಯಗಳ ಬಗ್ಗೆ ಅನಾವಶ್ಯಕ ಚರ್ಚೆಯಾಗುತ್ತದೆ. ಅದರಲ್ಲಿ ಯಾವುದೇ ಅರ್ಥವಿಲ್ಲ. ಎಲ್ಲಾ ವಿಷಯಗಳು ವಿಡಿಯೋದಲ್ಲಿ ತೋರಿಸಿದ ಹಾಗೆ ಇರುವುದಿಲ್ಲ. ಆ ಬಗ್ಗೆ ಮಾತನಾಡುವುದರಲ್ಲಿ ಯಾವುದೇ ಅರ್ಥವಿಲ್ಲ' ಎಂದು ಹೇಳಿದ್ದಾರೆ. 

ನಡೆದಿದ್ದೇನು?

ಐಫಾ ಕಾರ್ಯಕ್ರಮಕ್ಕೆ ಸಲ್ಮಾನ್ ಖಾನ್ ಎಂಟ್ರಿ ಕೊಡುತ್ತಾರೆ. ಆಗ ವಿಕ್ಕಿ ಕೌಶಲ್ ಸೆಲ್ಫಿ ನೀಡುತ್ತಿರುತ್ತಾರೆ. ಸಲ್ಮಾನ್ ಖಾನ್ ಜೊತೆ ದೊಡ್ಡ ಗುಂಪು ಬಂದಿದ್ದು ವಿಕ್ಕಿ ಕೌಶಲ್ ಪಕ್ಕಕ್ಕೆ ಸರಿಯುತ್ತಾರೆ. ಬಳಿಕ ಸಲ್ಮಾನ್ ಖಾನ್ ಅವರನ್ನು ಮಾತನಾಡಿಸಲು ಮುಂದಾಗುತ್ತಾರೆ. ಅಷ್ಟೊತ್ತಿಗೆ ಸಲ್ಮಾನ್ ಬಾಡಿಗಾರ್ಡ್ ವಿಕ್ಕಿ ಕೌಶಲ್ ಅವರನ್ನು ಪಕ್ಕಕ್ಕೆ ಸರಿಸಿ ಸಲ್ಮಾನ್ ಖಾನ್‌ಗೆ ಮುಂದೆ ಹೋಗಲು ದಾರಿ ಮಾಡಿಕೊಡುತ್ತಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿ ಕತ್ರಿನಾ-ವಿಕ್ಕಿ ಜೋಡಿ? ಮೌನ ಮುರಿದ ಸ್ಟಾರ್ ನಟಿ

ನೆಟ್ಟಿಗರ ಕಾಮೆಂಟ್ 

ಕ್ಷಣಾರ್ಧದಲ್ಲಿ ವಿಡಿಯೋ ವೈರಲ್ ಆಗಿತ್ತು. ಸಲ್ಮಾನ್ ಖಾನ್ ಮಾಜಿ ಪ್ರೇಯಸಿ ಎಂದೇ ಗುರುತಿಸಿಕೊಂಡಿದ್ದ ಕತ್ರಿನಾ ಕೈಫ್ ಅವರ ಪತಿಯನ್ನು ನಡೆಸಿಕೊಂಡ ರೀತಿ ನೋಡಿ ಅಭಿಮಾನಿಗಳು ಆಕ್ರೋಶ ಹೊರಹಾಕುತ್ತಿದ್ದರು. ಇಷ್ಟೆಲ್ಲ ಅವಮಾನ ಮಾಡಬಾರದು ಎಂದು ಕಾಮೆಂಟ್ ಮಾಡಿ ಬೇಸರ ಹೊರಹಾಕಿದ್ದರು. ಇನ್ನು ಕೆಲವರು ವಿಕ್ಕಿ ಕೌಶಲ್ ಕಂಡರೆ ಸಲ್ಮಾನ್ ಖಾನ್ ಆಗಲ್ಲ ಎನ್ನುವುದು ಪದೇ ಪದೇ ಸಾಬೀತಾಗುತ್ತಿದೆ ಎಂದು ಹೇಳಿದ್ದರು. ಸಲ್ಮಾನ್ ಖಾನ್ ಜೊತೆ ಡೇಟಿಂಗ್ ಮಾಡಿ ಬಳಿಕ ರಣಬೀರ್ ಕಪೂರ್ ಜೊತೆ ಹೋದಳು ಕತ್ರಿನಾ ಆದರೆ ಬಳಿಕ ವಿಕ್ಕಿ ಕೌಶಲ್‌ನ ಮದುವೆಯಾದರು. ಇದು ಸಲ್ಮಾನ್ ಖಾನ್‌ಗೆ ಸಹಿಸಲು ಆಗುತ್ತಿಲ್ಲ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ. 

ಸಲ್ಮಾನ್ ಖಾನ್‌ಗೆ ಶೇಕ್‌ಹ್ಯಾಂಡ್ ಮಾಡಲು ಹೋದ ವಿಕ್ಕಿ ಕೌಶಲ್‌ನ ನೂಕಿದ ಬಾಡಿಗಾರ್ಡ್: ಅಭಿಮಾನಿಗಳ ಆಕ್ರೋಶ

ಟೈಗರ್ -3 ಬಗ್ಗೆ ಪ್ರತಿಕ್ರಿಯೆ

IIFA ಅವಾರ್ಡ್ಸ್ 2023 ಅಬುಧಾಬಿಯಲ್ಲಿ ಗುರುವಾರ ನಡೆಯಿತು. ಪತ್ರಿಕಾಗೋಷ್ಠಿಯಲ್ಲಿ ಸಲ್ಮಾನ್ ಖಾನ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ಇನ್ನೂ ಸಲ್ಮಾನ್ ಖಾನ್ ಸಿನಿಮಾ ವಿಚಾರಕ್ಕೆ ಬರುವುದಾದರೆ ಟೈಗರ್ 3 ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಕತ್ರಿನಾ ಕೈಫ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಸಿನಿಮಾ ಬಗ್ಗೆ ಮಾತನಾಡಿದ ಸಲ್ಮಾನ್ ಖಾನ್, ಕಳೆಕ ರಾತ್ರಿ ಟೈಗರ್ 3 ಶೂಟಿಂಗ್‌ನಲ್ಲಿದೆ. ಸದ್ಯ ಚಿತ್ರೀಕರಣ ಮುಗಿದಿದೆ. ನೀವು ದೀಪಾಳಿಯಂದು ಟೈಗರ್ ಸಿನಿಮಾ ನೋಡುತ್ತೀರಿ. ತುಂಬಾ ಹ್ಯಕ್ಟಿಕ್ ಚಿತ್ರೀಕರಣವಾಗಿತ್ತು ಆದರೂ ಚೆನ್ನಾಗಿತ್ತು' ಎಂದು ಹೇಳಿದರು.
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ನಾನೇನು ಸಾಧುವಲ್ಲ.. ಹೀಗೆ ಮಾತಾಡೋಕೆ ನನಗೂ ಬರುತ್ತೆ: ಪುಷ್ಪ ನಟಿ ಹೇಳಿದ್ದೇನು?
ವೃತ್ತಿಜೀವನದಲ್ಲಿ 2 ಬಾರಿ ದೊಡ್ಡ ತಪ್ಪು ಮಾಡಿದ ರಾಮ್ ಚರಣ್.. ಚಿರಂಜೀವಿಯೂ ಏನೂ ಮಾಡಲಾಗಲಿಲ್ಲವೇ?