ನಟ ಶಾರುಖ್ ಖಾನ್‌ಗೆ ವಿಲನ್ ಆದ ಸೌತ್ ಸ್ಟಾರ್ ವಿಜಯ್ ಸೇತುಪತಿ

Published : Jul 08, 2022, 12:34 PM IST
 ನಟ ಶಾರುಖ್ ಖಾನ್‌ಗೆ ವಿಲನ್ ಆದ ಸೌತ್ ಸ್ಟಾರ್ ವಿಜಯ್ ಸೇತುಪತಿ

ಸಾರಾಂಶ

ಶಾರುಖ್ ಖಾನ್ ಜವಾನ್ ಸಿನಿಮಾಗೆ ತಮಿಳಿನ ಖ್ಯಾತ ನಿರ್ದೇಶಕ ಅಟ್ಲೀ ಕುಮಾರ್ (Atlee Kumar) ಆಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾದ ಬಗ್ಗೆ ಮತ್ತೊಂದು ಇಂಟ್ರಸ್ಟಿಂಗ್ ಮಾಹಿತಿ ಹರಿದಾಡುತ್ತಿದೆ. ಈ ಸಿನಿಮಾದಲ್ಲಿ ಶಾರುಖ್ ಖಾನ್ ಗೆ ವಿಲನ್ ಆಗಿ ಸೌತ್ ಸ್ಟಾರ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. 

ಬಾಲಿವುಡ್ ಸ್ಟಾರ್ ನಟ ಶಾರುಖ್ ಖಾನ್ (Shah Rukh Khan) ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಶಾರುಖ್ ಅನೇಕ ವರ್ಷಗಳ ಬಳಿಕ ಸಿನಿಮಾಗಳಲ್ಲಿ ನಿರತರಾಗಿದ್ದಾರೆ.ಸಾಲು ಸಾಲು ಸಿನಿಮಾಗಳ ಸೋಲಿನಿಂದ ಕಂಗೆಟ್ಟಿದ್ದ ಶಾರುಖ್ ಝೀರೋ ಸಿನಿಮಾ ಬಳಿಕ ಬಣ್ಣ ಹಚ್ಚುವುದನ್ನೇ ಬಿಟ್ಟಿದ್ದರು. ಗ್ಯಾಪ್‌ನ ನಂತರ ಶಾರುಖ್ ಸಾಲು ಸಾಲು ಸಿನಿಮಾಗಳಿಗೆ ಸಹಿ ಮಾಡಿದ್ದು ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ.ಪಠಾಣ್ (Pathan), ಜವಾನ್ (Jawan) ಮತ್ತು ದುನ್ಕಿ ಸಿನಿಮಾಗಳಲ್ಲಿ ಶಾರುಖ್ ನಟಿಸುತ್ತಿದ್ದಾರೆ. ಈಗಾಗಲೇ ಪಠಾಣ್ ಮತ್ತು ಜವಾನ್ ಸಿನಿಮಾದ ಲುಕ್ ರಿವೀಲ್ ಆಗಿದ್ದು ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. 

ಅಂದಹಾಗೆ ಶಾರುಖ್ ಖಾನ್ ಜವಾನ್ ಸಿನಿಮಾಗೆ ತಮಿಳಿನ ಖ್ಯಾತ ನಿರ್ದೇಶಕ ಅಟ್ಲೀ ಕುಮಾರ್ (Atlee Kumar) ಆಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾದ ಬಗ್ಗೆ ಮತ್ತೊಂದು ಇಂಟ್ರಸ್ಟಿಂಗ್ ಮಾಹಿತಿ ಹರಿದಾಡುತ್ತಿದೆ. ಈ ಸಿನಿಮಾದಲ್ಲಿ ಶಾರುಖ್ ಖಾನ್ ಗೆ ವಿಲನ್ ಆಗಿ ಸೌತ್ ಸ್ಟಾರ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಹೌದು, ದಕ್ಷಿಣ ಭಾರತದ ಖ್ಯಾತ ನಟ ವಿಜಯ್ ಸೇತುಪತಿ (Vijay Sethupathi) ಜವಾನ್ ಸಿನಿಮಾದಲ್ಲಿ ಖಳನಟನಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಒಂದುವೇಳೆ ಈ ಸುದ್ದಿ ನಿಜವೇ ಆಗಿದ್ದರೆ ಸಿನಿ ಅಭಿಮಾನಿಗಳಿಗೆ ದೊಡ್ಡ ಹಬ್ಬವಾಗಲಿದೆ. ಇಬ್ಬರು ಖ್ಯಾತ ಕಲಾವಿದರು ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಾರೆ ಅಂದರೆ ಅಭಿಮಾನಿಗಳಿಗೆ ಇದಕ್ಕಿಂತ ಸಂತಸ ವಿಚಾರ ಇನ್ನೊಂದಿಲ್ಲ. 

ಪುಷ್ಪ-2ನಲ್ಲಿ ಮತ್ತೋರ್ವ ಸೌತ್ ಸ್ಟಾರ್; ವಿಕ್ರಮ್ ಬಳಿಕ ಮತ್ತೆ ಒಂದಾದ ಫಹಾದ್-ಸೇತುಪತಿ

ವಿಜಯ್ ಸೇತುಪತಿ ಈಗಾಗಲೇ ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷೆಯ ಪುಷ್ಪ-2 ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಕಮಲ್ ಹಾಸನ್ ಜೊತೆ ವಿಕ್ರಮ್ ಸಿನಿಮಾದಲ್ಲಿ ಮಿಂಚಿದ್ದ ವಿಜಯ್ ಸೇತುಪತಿ ಬಳಿಕ ಅಲ್ಲುಅರ್ಜುನ್ ಜೊತೆ ಪುಷ್ಪ-2 ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಬೆನ್ನಲ್ಲೇ ಇದೀಗ ಶಾರುಖ್ ಜೊತೆ ನಟಿಸಲಿದ್ದಾರೆ ಎನ್ನುವ ಮಾತು ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಅಂದಹಾಗೆ ನಿರ್ಮಾಪಕರು ದಕ್ಷಿಣ ಭಾರತದ ಮತ್ತೋರ್ವ ಸ್ಟಾರ್ ನಟ ರಾಣಾದಗ್ಗುಬಾಟಿ ಅವರನ್ನು ವಿಲನ್ ಪಾತ್ರಕ್ಕೆ ಅಪ್ರೋಚ್ ಮಾಡಲಾಗಿತ್ತು ಎನ್ನಲಾಗಿದೆ. ಆದರೆ ರಾಣಾ ಬ್ಯುಸಿ ಇದ್ದ ಕಾರಣ ವಿಜಯ್ ಸೇತುಪತಿ ಅವರನ್ನು ಸಿನಿಮಾತಂಡ ಸಂಪರ್ಕ ಮಾಡಿದೆಯಂತೆ. ಶಾರುಖ್ ಜೊತೆ ನಟಿಸಲು ವಿಜಯ್ ಸೇತುಪತಿ ಗ್ರೀನ್ ಸಿಗ್ನಲ್ ನೀಡಿದ್ದು ಸದ್ಯದಲ್ಲೇ ಜವಾನ್ ತಂಡ ಅಧಕೃತವಾಗಿ ಬಹಿರಂಗ ಪಡಿಸಲಿದೆಯಂತೆ. 

ನಮ್ಮಲ್ಲಿ ಅಣ್ಣ ಯಾರೆಂದು ಗೊತ್ತಿಲ್ಲ; ಸಲ್ಮಾನ್ ಬಗ್ಗೆ ಶಾರುಖ್ ಹೀಗಂದಿದ್ದೇಕೆ?

ಸದ್ಯದಲ್ಲೇ ವಿಜಯ್ ಸೇತುಪತಿ ಮುಂಬೈ ಚಿತ್ರೀಕರಣ ಸೆಟ್ ಸೇರಿಕೊಳ್ಳಲಿದ್ದಾರಂತೆ. ಅಂದಹಾಗೆ ಅಟ್ಲೀ ಕುಮಾರ್ ನಿರ್ದೇಶನದ ಜವಾನ್ ಸಿನಿಮಾದಲ್ಲಿ ಶಾರುಖ್ ಖಾನ್‌ಗೆ ನಾಯಕಿಯಾಗಿ ನಯನತಾರಾ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು ಟೀಸರ್ ಕೂಡ ರಿಲೀಸ್ ಆಗಿದೆ. ಟೀಸರ್ ನಲ್ಲಿ ಶಾರುಖ್ ಲುಕ್ ಅಭಿಮಾನಿಗಳ ಹೃದಯ ಗೆದ್ದಿದೆ. ವಿಜಯ್ ಸೇತುಪತಿ ಈಗಾಗಲೇ ಒಂದು  ಹಿಂದಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕತ್ರಿನಾ ಕೈಫ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೀಗ ಶಾರುಖ್ ಜೊತೆ ನಟಿಸಲು ಸಜ್ಜಾಗಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

Bigg Boss ಗಿಲ್ಲಿ ಬಗ್ಗೆ ಅಂದೇ ಭವಿಷ್ಯ ನುಡಿದಿದ್ದ ನಟ ಜಗ್ಗೇಶ್​: ಮಾತು ನಿಜವಾಗೋಯ್ತು- ವಿಡಿಯೋ ವೈರಲ್​
ಅಮಿತಾಭ್ ಮಾತ್ರವಲ್ಲ, ಇವರೆಲ್ಲರೂ ಶೂಟಿಂಗ್ ಸೆಟ್‌ನಿಂದ ಜೀವ ಉಳಿಸಿಕೊಂಡು ಬಂದವರೇ