
ದಿ ಕಾಶ್ಮೀರ್ ಫೈಲ್ಸ್ (The Kashmir Files) ಹಿಂದಿ ಬಾಕ್ಸ್ ಆಫೀಸ್ ನಲ್ಲಿ ಧೂಳ್ ಎಬ್ಬಿಸಿದ ಸಿನಿಮಾ. ವಿವೇಕ್ ಅಗ್ನಿಹೋತ್ರಿ(Vivek Agnihotri) ಸಾರಥ್ಯದಲ್ಲಿ ಬಂದ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ಕೊರೊನಾ ಬಳಿಕ ಹಿಂದಿಯಲ್ಲಿ ಅತೀ ಹೆಚ್ಚು ಕಮಾಯಿ ಮಾಡಿದ ಹಿಂದಿ ಸಿನಿಮಾ ಎನ್ನುವ ಖ್ಯಾತಿಯನ್ನು ಸಹ ಗಳಿಸಿದೆ. ನಿರ್ದೇಶಕ ಅಗ್ನಿಹೋತ್ರಿ ಸಾರಥ್ಯದಲ್ಲಿ ಬಂದ ಸಿನಿಮಾವನ್ನು ಪ್ರೇಕ್ಷಕರು ಮಾತ್ರವಲ್ಲದೇ ಸಿನಿಮಾ ಗಣ್ಯರು ಮತ್ತು ರಾಜಕೀಯ ಗಣ್ಯರು ಸಹ ಹಾಡಿಹೊಗಳಿದ್ದರು.
ಅಂದಹಾಗೆ ಕಾಶ್ಮೀರ್ ಫೈಲ್ಸ್ ಸಿನಿಮಾ ಹಿಂದಿಯಲ್ಲಿ 250 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ದಾಖಲೆ ಮಾಡಿದೆ. ಚಿತ್ರಮಂದಿರದಲ್ಲಿ ದೂಳ್ ಎಬ್ಬಿಸಿದ್ದ ಕಾಶ್ಮೀರ್ ಫೈಲ್ಸ್ ಇದೀಗ ಒಟಿಟಿ ಪ್ಲಾಟ್ ಫಾರ್ಮ್ ಗೆ ಎಂಟ್ರಿ ಕೊಡುತ್ತಿದೆ. ಸದ್ಯ ಒಟಿಟಿ ಪ್ರೇಕ್ಷರರನ್ನು ರಂಜಿಸಲು ಮುಂದಾಗಿರುವ ಕಾಶ್ಮೀರ್ ಫೈಲ್ಸ್ Zee5ನಲ್ಲಿ ಬರಲು ಸಿದ್ಧವಾಗಿದೆ. ಮುಂದಿನ ತಿಂಗಳು ಮೇ 13ರಿಂದ ಕಾಶ್ಮೀರ್ ಫೈಲ್ಸ್ Zee5ನಲ್ಲಿ ಪ್ರೀಮಿಯರ್ ಆಗಲಿದೆ ಎಂದು ಆಂಗ್ಲ ಮಾಧ್ಯಮ ವರದಿ ಮಾಡಿದೆ.
ನಿರ್ದೇಶಕ ಅಗ್ನಿಹೋತ್ರಿ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಶೇರ್ ಮಾಡಿದ್ದು ಶೀಘ್ರದಲ್ಲೇ ವರ್ಲ್ಡ ಡಿಜಿಟಲ್ ಪ್ರೀಮಿಯರ್ ಎಂದು ಬರೆಯಲಾಗಿದೆ. ಅಲ್ಲದೆ ಇನ್ನು ವಿಶೇಷ ಎಂದರೆ ಈ ಸಿನಿಮಾ ಹಿಂದಿ ಮಾತ್ರವಲ್ಲದೆ ತಮಿಳು, ತೆಲುಗು ಮತ್ತು ಕನ್ನಡ ಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ. ಕನ್ನಡ ಅಭಿಮಾನಿಗಳು ಒಟಿಟಿಯಲ್ಲಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಕನ್ನಡದಲ್ಲೂ ನೋಡಿ ಆನಂದಿಸಬಹುದು.
'ದೆಹಲಿ ಫೈಲ್ಸ್'ನಲ್ಲಿದೆ 1984ರ ಕರಾಳ ಅಧ್ಯಾಯ; ಹೊಸ ಚಿತ್ರದ ಮಾಹಿತಿ ಬಿಚ್ಚಿಟ್ಟ ಅಗ್ನಿಹೋತ್ರಿ
ಕಾಶ್ಮೀರ್ ಫೈಲ್ಸ್ ಬಗ್ಗೆ
ಕಾಶ್ಮೀರ್ ಫೈಲ್ಸ್ 90 ದಶಕದಲ್ಲಿ ಕಾಶ್ಮೀರ ಪಂಡಿತರ ಹತ್ಯೆ ಮತ್ತು ವಲಸೆ ಬಗ್ಗೆ ಇರುವ ಸಿನಿಮಾವಾಗಿದೆ. ಕೇವಲ 15 ಕೋಟಿ ರೂಪಾಯಿನಲ್ಲಿ ಈ ಸಿನಿಮಾವನ್ನು ನಿರ್ಮಿಸಲಾಗಿದೆ. ಸಿನಿಮಾ ಬಿಡುಗಡೆಯಾಗಿ 5 ವಾರಗಳಲ್ಲಿ ಕಾಶ್ಮೀರ ಫೈಲ್ಸ್ 250 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಕೊರೊನಾ ಬಳಿಕ ಹಿಂದಿಯಲ್ಲಿ ಅತೀ ಹೆಚ್ಚು ಕಲೆಕ್ಷನ್ ಮಾಡಿ ಸಿನಿಮಾವಾಗಿದೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ಅನುಪಮ್ ಖೇರ್, ವಿಥುನ್ ಚಕ್ರವರ್ತಿ, ಪಲ್ಲವಿ ಜೋಶಿ, ದರ್ಶನ್ ಕುಮಾರ್ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.
ದೆಹಲಿ ಫೈಲ್ಸ್ ಘೋಷಿಸಿದ ಅಗ್ನಿಹೋತ್ರಿ
ಈ ಸಿನಿಮಾ ಸಕ್ಸಸ್ ಬಳಿಕ ಅಗ್ನಿಹೋತ್ರಿ ಇದೀಗ ದಿ ದೆಹಲಿ ಫೈಲ್ಸ್ ಸಿನಿಮಾ ಘೋಷಣೆ ಮಾಡಿದ್ದಾರೆ. ದೆಹಲಿ ಫೈಲ್ಸ್ ಮೂಲಕ ಅಗ್ನಿಹೋತ್ರಿ ಯಾವ ಘಟನೆಯನ್ನು ಬೆಳಕಿಗೆ ತರುತ್ತಿದ್ದಾರೆ ಎನ್ನುವುದನ್ನು ಕುತೂಹಲ ಎಲ್ಲರಲ್ಲಿ ಇತ್ತು. ಇದೀಗ ದೆಹಲಿ ಫೈಲ್ಸ್ ಸಿನಿಮಾದ ಬಗ್ಗೆ ಮಾಹಿತಿ ಬಹಿರಂಗ ಪಡಿಸಿದ್ದು, ಈ ಸಿನಿಮಾ 1984ರ ಕರಾಳ ಅಧ್ಯಾಯದ ಬಗ್ಗೆ ಸಿನಿಮಾ ಮಾಡುವುದಾಗಿ ಹೇಳಿದ್ದಾರೆ. ದೆಹಲಿ ಮಾತ್ರವಲ್ಲದೇ ತಮಿಳುನಾಡಿನ ಬಗ್ಗೆಯೂ ಈ ಸಿನಿಮಾದಲ್ಲಿ ಹೆಚ್ಚು ಹೇಳಲಾಗುತ್ತಿದೆ ಎಂದು ಹೇಳಿದರು.
Kashmir Files ಆಯ್ತು ಇದೀಗ 'ದಿ ದೆಹಲಿ ಫೈಲ್ಸ್' ಸಿನಿಮಾ ಘೋಷಿಸಿದ ಅಗ್ನಿಹೋತ್ರಿ
ಎ ಎನ್ ಐ ಸುದ್ದಿ ಸಂಸ್ಥೆ ಜೊತೆ ಮಾತನಾಡಿದ ಅಗ್ನಿಹೋತ್ರಿ, '1984ರಲ್ಲಿ ಭಾರತೀಯ ಇತಿಹಾಸದಲ್ಲಿ ದಾಖಲಾಗದ ಒಂದು ಕರಾಳ ಅಧ್ಯಾಯದ ಬಗ್ಗೆ ಇರಲಿದೆ. ಪಂಜಾಬ್ ಭಯೋತ್ಪಾದನೆಯ ಪರಿಸ್ಥಿತಿಯನ್ನು ನಿಭಾಯಿಸಿದ ರೀತಿ ಅಮಾನವೀಯವಾಗಿತ್ತು. ಇದು ಸಂಪೂರ್ಣವಾಗಿ ಮತಬ್ಯಾಂಕ್ ರಾಜಕಾರಣಕ್ಕಾಗಿ ಮತ್ತು ಅದಕ್ಕಾಗಿಯೇ ಪಂಜಾಬ್ ನಲ್ಲಿ ಕಾಂಗ್ರೆಸ್ ಪಕ್ಷ ಭಯೋತ್ಪಾದನೆಯನ್ನು ಬೆಳೆಸಿತು. ಮೊದಲು ಬೆಳೆಸಿದರು. ಬಳಿಕ ನಂತರ ನಾಶ ಮಾಡಿದರು. ಬಹಳಷ್ಟು ಅಮಾಯಕರನ್ನು ಕೊಲ್ಲಲಾಯಿತು. ಅದನ್ನು ಮುಚ್ಚಿಡಲಾಗಿದೆ. ಅವರಿಗೆ ಯಾವುದೇ ನ್ಯಾಯ ಸಿಕ್ಕಿಲ್ಲ ಅದು ಅತ್ಯಂತ ಕೆಟ್ಟದ್ದು' ಎಂದು ಹೇಳಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.