ರೇಪ್ ಸೀನ್ ಕುರಿತಂತೆ ನಟಿ ತ್ರಿಷಾ ವಿರುದ್ಧ ಅಸಭ್ಯ ಹೇಳಿಕೆ ನೀಡಿರುವ ಖಳ ನಟ ಮನ್ಸೂರ್ ಅಲಿ ಖಾನ್ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ, ನಾನು ತಪ್ಪೇ ಮಾಡಿಲ್ಲ ಎಂದಿದ್ದಾರೆ.
ಖ್ಯಾತ ಖಳನಾಯಕ ಮನ್ಸೂರ್ ಅಲಿ ಖಾನ್ ಇತ್ತೀಚೆಗೆ ನಟಿ ತ್ರಿಷಾ ಕೃಷ್ಣನ್ ಅವರ ಬಗ್ಗೆ ಅತ್ಯಂತ ಕೀಳು ಮಟ್ಟದ ಹೇಳಿಕೆ ನೀಡಿದ್ದು, ಅದರ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ತಮಿಳು ಚಿತ್ರ 'ಲಿಯೋ'ಕ್ಕೆ ಸಂಬಂಧಿಸಿದಂತೆ ಈ ಚಿತ್ರದ ಖಳ ನಟರಾಗಿರುವ ಖಾನ್ ಈ ಅಸಹ್ಯ ಹೇಳಿಕೆ ಕೊಟ್ಟಿದ್ದರು. 'ನಾನು ತ್ರಿಷಾ ಜೊತೆ ನಟಿಸುತ್ತಿದ್ದೇನೆ ಎಂದು ಕೇಳಿದಾಗ, ಚಿತ್ರದಲ್ಲಿ ರೇಪ್ ಸೀನ್ ಇರುತ್ತದೆ ಎಂದು ನಾನು ಭಾವಿಸಿದೆ. ನನ್ನ ಹಿಂದಿನ ಚಿತ್ರಗಳಲ್ಲಿ ಇತರ ನಟಿಯರೊಂದಿಗೆ ಮಾಡಿದಂತೆ ನಾನು ತ್ರಿಷಾಳನ್ನು ಬೆಡ್ ರೂಂಗೆ ಕರೆದುಕೊಂಡು ಹೋಗಿ ರೇಪ್ ಮಾಡುವ ಸೀನ್ ಇರುತ್ತದೆ ಎಂದು ನಾನು ಭಾವಿಸಿದೆ. ನಾನು ಅನೇಕ ಚಿತ್ರಗಳಲ್ಲಿ ಅತ್ಯಾಚಾರದ ದೃಶ್ಯಗಳನ್ನು ಮಾಡಿದ್ದೇನೆ. ಇದು ನನಗೆ ಹೊಸದಲ್ಲ. ಆದರೆ ಲಿಯೋ ಸಿನಿಮಾನವರು ತ್ರಿಷಾರ ಮುಖವನ್ನು ಸಹ ನನಗೆ ತೋರಿಸಲಿಲ್ಲ' ಎಂದು ಹೇಳಿದ್ದರು. ಇದರ ಬಗ್ಗೆ ನಟಿ ತ್ರಿಷಾ ಸೇರಿದಂತೆ ಹಲವರಿಂದ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.
ಇನ್ನುಮೇಲೆ ಆತನ ಜೊತೆ ಸಿನಿಮಾದಲ್ಲಿ ನಟಿಸೋದಿಲ್ಲ ಎಂದು ಖಂಡಾತುಂಡವಾಗಿ ತ್ರಿಷಾ ಹೇಳಿದರೆ, ಖಾನ್ ಕ್ಷಮೆ ಕೇಳುವವರೆಗೂ ತಾತ್ಕಾಲಿಕ ನಿಷೇಧ ಹೇರಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ಖಾನ್, ಈ ರೀತಿ ನನಗೆ ನಿಷೇಧ ಹೇರಿರುವುದು ಸರಿಯಲ್ಲ. ಈ ರೀತಿಯ ಸಮಸ್ಯೆ ಎದುರಾದಾಗ ಅವರು ನನ್ನ ವಿವರಣೆಯನ್ನೂ ಕೇಳಲಿಲ್ಲ, ಅವರು ನನ್ನನ್ನು ಕರೆದು ವಿವರಣೆ ಕೇಳಿ ನೋಟಿಸ್ ನೀಡಬೇಕಿತ್ತು. ವಿಚಾರಣೆ ನಡೆಸಬೇಕಿತ್ತು. ಆದರೆ ಹಾಗೆ ಮಾಡದೇ ಏಕಾಏಕಿ ನಿಷೇಧ ಹೇರಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟೇ ಅಲ್ಲದೇ, ಕ್ಷಮೆ ಕೋರುವ ಪ್ರಶ್ನೆಯೇ ಇಲ್ಲ. ಅದೆಷ್ಟು ನಟಿಯರ ಜೊತೆ ರೇಪ್ ಸೀನ್ ಮಾಡಿದ್ದೇನೆ. ನನ್ನನ್ನು ನೋಡಿದರೆ ಕ್ಷಮೆ ಕೋರುವವನ ರೀತಿ ಕಾಣಿಸ್ತೀನಾ? ನಾನು ತಪ್ಪೇ ಮಾಡಿಲ್ಲ ಎಂದಿದ್ದಾರೆ.
ತ್ರಿಶಾ ಜೊತೆ ರೇಪ್, ಬೆಡ್ರೂಂ ಸೀನ್ ಬೇಕು ಎಂದ ವಿಡಿಯೋ ವೈರಲ್ ಆಗ್ತಿದ್ದಂತೇ ಉಲ್ಟಾ ಹೊಡೆದ ನಟ ಖಾನ್!
ನಾನು ಹೇಳಿರುವ ಹೇಳಿಕೆಗಳನ್ನು ತಿರುಚಲಾಗಿದೆ ಎಂದು ಖಾನ್ ಹೇಳಿದ್ದಾರೆ. ಎಡಿಟ್ ಮಾಡಿರುವ ವಿಡಿಯೋ ಅನ್ನು ತ್ರಿಶಾ ಅವರಿಗೆ ತೋರಿಸಲಾಗಿದೆ. ನಾನು ಆ ರೀತಿ ಹಗುರವಾದ ಧಾಟಿಯಲ್ಲಿ ಹೇಳಿದೆ. ಆದರೆ ವಿವಾದ ಸೃಷ್ಟಿಸುವ ರೀತಿಯಲ್ಲಿ ವಿಡಿಯೋ ಟ್ರಿಮ್ ಮಾಡಿ ಸ್ಪ್ರೆಡ್ ಮಾಡಲಾಗುತ್ತಿದೆ ಎಂದಿರುವ ಅವರು, ಮುಂಬರುವ ಚುನಾವಣೆಯಲ್ಲಿ ರಾಜಕೀಯ ಪಕ್ಷವನ್ನು ಬೆಂಬಲಿಸಿ ನಾನು ಸ್ಪರ್ಧಿಸಲಿದ್ದೇನೆ ಎನ್ನುವ ಕಾರಣ ಈ ರೀತಿ ಮಾಡಲಾಗಿದೆ ಎಂದಿದ್ದಾರೆ! ಹಳೆ ಕಾಲದ ಹಾಗೆ ಈಗಿನ ಕಾಲದಲ್ಲಿ ನಾಯಕಿಯರ ಜೊತೆ ನಟಿಸುವ ಅವಕಾಶಗಳು ಸಿಗುತ್ತಿಲ್ಲ ಎಂದು ನಾನು ನನ್ನ ಹತಾಶೆಯನ್ನು ಹೊರಹಾಕಿದ್ದೆ ಅಷ್ಟೇ. ಆದರೆ ವಿಡಿಯೋ ಎಡಿಟ್ ಮಾಡಲಾಗಿದೆ ಎಂದಿರೋ ನಟ, ಇದಕ್ಕೆ ಹೆದರುವ ವ್ಯಕ್ತಿ ನಾನಲ್ಲ ಎಂದಿದ್ದಾರೆ. ಯಾವುದೇ ಕಾರಣಕ್ಕೂ ಕ್ಷಮೆ ಕೋರುವುದಿಲ್ಲ ಎಂದಿದ್ದಾರೆ.
ಇದೇ ವೇಳೆ ನನ್ನ ಜೊತೆ ನಟಿಸಿದ್ದ ನಾಯಕಿಯರು ಈಗ ಎಂಎಲ್ ಎ, ಎಂಪಿ ಆಗಿದ್ದಾರೆ. ಅವರು ಯಶಸ್ವಿ ಉದ್ಯಮಿಗಳನ್ನು ವಿವಾಹವಾಗಿದ್ದಾರೆ ಎಂದಿರುವ ಮನ್ಸೂರ್ ಅಲಿ ಖಾನ್, ನನ್ನ ಇಬ್ಬರು ಹೆಣ್ಣು ಮಕ್ಕಳ ಮದುವೆ ಮಾಡಲು ನಾನು 360ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದೆ. ನಾನು ಯಾವಾಗಲೂ ನನ್ನ ಸಹನಟರನ್ನು ಗೌರವಿಸುವವನು. ಇದು ನನ್ನ ವಿರುದ್ಧ ಇರುವ ಕೆಲವರ ಕೃತ್ಯ ಮಾಡಿದ್ದಾರೆ ಎಂದಿದ್ದಾರೆ. ಇವರು ಕ್ಷಮೆ ಕೇಳುವವರೆಗೂ ಚಿತ್ರರಂಗದ ನಿಷೇಧ ಮುಂದುವರೆಸಬೇಕು ಎನ್ನುವುದು ಬಹುಮಂದಿಯ ಆಗ್ರಹವಾಗಿದೆ.
ಹಸಿಮೆಣಸು ತಿಂದ ತನಿಷಾ: ಟಾಸ್ಕ್ ಹೆಸರಲ್ಲಿ ಹೆಣ್ಣಿನ ಮೇಲೆ ದೌರ್ಜನ್ಯ! ಬಿಗ್ಬಾಸ್ ವಿರುದ್ಧ ನೆಟ್ಟಿಗರ ಆಕ್ರೋಶ