
ಪ್ಯಾನ್ ಇಂಡಿಯಾ ಹೀರೋ, ರಾಕಿಂಗ್ ಸ್ಟಾರ್ ಯಶ್(Yash) ನಟನೆಯ ಕೆಜಿಎಫ್-2 (KGF 2)ಸಿನಿಮಾ ಮೊದಲ ದಿನ ಭರ್ಜರಿ ಕಲೆಕ್ಷನ್ ಮಾಡಿದೆ. ಇದೀಗ ವಿಶ್ವದಾದ್ಯಂತ ಕೆಜಿಎಫ್-2 ಸಿನಿಮಾದೇ ಸದ್ದು. ಭಾರಿ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿದ್ದ ಕೆಜಿಎಫ್2 ಏಪ್ರಿಲ್ 14ರಂದು ಅದ್ದೂರಿಯಾಗಿ ತೆರೆಗೆ ಬಂದಿದ್ದು ಎಲ್ಲಾ ಭಾಷೆಯಲ್ಲೂ ಅಭಿಮಾನಿಗಳು ಭರ್ಜರಿ ಸ್ವಾಗತ ಮಾಡಿದ್ದಾರೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿರುವ ಕೆಜಿಎಫ್-2 ಮೊದಲ ದಿನ ಬಾಕ್ಸ್ ಆಫೀಸ್ ನಲ್ಲೂ ಅತ್ಯುತ್ತಮ ಕಲೆಕ್ಷನ್(KGF 2 box office collection) ಮಾಡಿದೆ. ಅದರಲ್ಲೂ ಹಿಂದಿ ಭಾಗದಲ್ಲಿ ಕೆಜಿಎಫ್2 ದಾಖಲೆ ಕಲೆಕ್ಷನ್ ಮಾಡುವ ಮೂಲಕ ಬಾಲಿವುಡ್ ಮಂದಿಗೆ ಶಾಕ್ ನೀಡಿದೆ.
ದೇಶದಾದ್ಯಂತ ಕೆಜಿಎಫ್-2 ಸಿನಿಮಾ ಸಂಭ್ರಮಾಚರಣೆ ನಡೆಯುತ್ತಿದೆ. ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಇಡೀ ಸಿನಿಮಾತಂಡ ಸಂತಸದಲ್ಲಿದೆ. ಅಂದಹಾಗೆ ಕೆಜಿಎಫ್-2 ಸಿಮಾದ ಕ್ರೇಜ್ ಮತ್ತು ಅಭಿಮಾನಿ ಸಾಗರ ನೋಡಿದ ಮೇಲೆ ಮೊದಲ ದಿನದ ಕಲೆಕ್ಷನ್ ಎಷ್ಟು ಎನ್ನುವ ಕುತೂಹಲ ಎಲ್ಲರಲ್ಲೂ ಮನೆಮಾಡಿತ್ತು. ಇದೀಗ ಸಿನಿಮಾತಂಡ ಅಧಿಕೃತ ಕಲೆಕ್ಷನ್ ಮಾಹಿತಿ ಬಹಿರಂಗ ಪಡಿಸಿದೆ.
ಭಾರತದಲ್ಲಿ ಕೆಜಿಎಫ್-2 ಗಳಿಕೆ
ಅಂದಹಾಗೆ ಕೆಜಿಎಫ್-2 ಸಿನಿಮಾ ಮೊದಲ ದಿನ ಭಾರತದಲ್ಲಿ ಬರೋಬ್ಬರಿ 134.5 ಕೋಟಿ ರೂಪಾಯಿ ಬಾಚಿಕೊಂಡಿದೆ. ಇದು ಭಾರತದ ಬಾಕ್ಸ್ ಆಫೀಸ್ ಗಳಿಕೆಯಲ್ಲೇ ಅತೀ ದೊಡ್ಡ ಮಟ್ಟದ ಗಳಿಕೆಯಾಗಿದೆ. ಕಲೆಕ್ಷನ್ ವಿಚಾರದಲ್ಲಿ ದಾಖಲೆ ಬರೆಯಲಿದೆ ಎನ್ನುವ ನಿರೀಕ್ಷೆ ಎಲ್ಲರಲ್ಲಿತ್ತು. ಅದರಂತೆ ಸಿನಿಮಾ ಮೊದಲ ದಿನವೇ ಉತ್ತಮ ಕಮಾಯಿ ಮಾಡಿದೆ. ಅದರಲ್ಲೂ ಹಿಂದಿ ಭಾಗದಲ್ಲಿ ಕೆಜಿಎಫ್-2 ಇತಿಹಾಸ ಸೃಷ್ಟಿಸಿದೆ. ಬಾಲಿವುಡ್ ನ ಘಟಾನುಘಟಿ ಸ್ಟಾರ್ ಕಲಾವಿದರನ್ನು ರಾಕಿಂಗ್ ಸ್ಟಾರ್ ಯಶ್ ಹಿಂದಿಕ್ಕಿದ್ದಾರೆ. ದಕ್ಷಿಣ ಭಾರತ ಸಿನಿಮಾ ಬಾಲಿವುಡ್ ನಲ್ಲಿ ಅತೀ ಹೆಚ್ಚು ಗಳಿಕೆ ಮಾಡಿರುವುದು ಹಿಂದಿ ಮಂದಿಗೆ ಅಚ್ಚರಿ ಮೂಡಿಸಿದೆ.
KGF 2 ಅಬ್ಬರದ ನಡುವೆ ವಿಜಯ್ 'ಬೀಸ್ಟ್' ಸಿನಿಮಾ ಗಳಿಸಿದೆಷ್ಟು?
ಹಿಂದಿಯಲ್ಲಿ ದಾಖಲೆ ಬರೆದ ಯಶ್
ಬಾಲಿವುಡ್ ನಲ್ಲಿ ಮೊದಲ ದಿನ ಅತೀ ಹೆಚ್ಚು ಗಳಿಕೆ ಮಾಡಿದ್ದ ಹೃತಿಕ್ ರೋಷನ್ ನಟನೆಯ ವಾರ್, ಆಮೀರ್ ನಟನೆಯ ಥಗ್ಸ್ ಆಫ್ ಹಿಂದೂಸ್ತಾನ್ ಸಿನಿಮಾಗಳ ಗಳಿಕೆಯನ್ನು ಹಿಂದಿಕ್ಕಿ ಕೆಜಿಎಫ್-2 ಹೊಸ ದಾಖಲೆ ಬರೆದಿದೆ. ಅಂದಹಾಗೆ ಯಶ್ ನಟನೆಯ ಕೆಜಿಎಫ್-2 ಮೊದಲ ದಿನ ಹಿಂದಿಯಲ್ಲಿ ಬರೋಬ್ಬರಿ 53.95 ಕೋಟಿ ರೂ. ಗಳಿಕೆ ಮಾಡಿದೆ. ಹಿಂದಿ ಭಾಗದಲ್ಲಿ ಭಾರಿ ಕ್ರೇಜ್ ಇತ್ತು. ಅದರಂತೆ ರಾಕಿಂಗ್ ಸ್ಟಾರ್ ಯಶ್ ಮತ್ತು ತಂಡ ಆ ಭಾಗಗಳಲ್ಲಿ ಭರ್ಜರಿ ಪ್ರಚಾರ ಮಾಡಿದ್ದರು. ಇದೀಗ ಪ್ರಚಾರಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ.
ಅಂದಹಾಗೆ ಹೃತಿಕ್ ರೋಷನ್ ನಟನೆಯ ವಾರ್ ಸಿನಿಮಾ ಮೊದಲ ದಿನ 51.60 ಕೋಟಿ ರೂ.ಬಾಚಿಕೊಂಡಿತ್ತು. ಆಮೀರ್ ಖಾನ್ ನಟನೆಯ ಥಗ್ಸ್ ಆಫ್ ಹಿಂದೂಸ್ತಾನ್ ಸಿನಿಮಾ 50.75 ಕೋಟಿ ಗಳಿಕ ಮಾಡಿತ್ತು. ಇದೀಗ ಈ ಎರಡು ಅತೀ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾಗಳ ದಾಖಲೆಯನ್ನು ಮುರಿದು ಕೆಜಿಎಫ್-2 ಹೊಸ ದಾಖಲೆ ಬರೆದಿದೆ. ಈ ಬಗ್ಗೆ ಸಿನಿಮಾ ವಿಶ್ಲೇಷಕ ತರಣ್ ಆದರ್ಶ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.
Koo App‘KGF2’ CREATES HISTORY, BIGGEST DAY 1 TOTAL… #KGF2 has demolished *opening day* records of #War and #ThugsOfHindostan… #KGFChapter2 is now BIGGEST OPENER in #India [#Hindi version]… *Day 1* biz… ⭐️ #KGF2: ₹ 53.95 cr ⭐️ #War: ₹ 51.60 cr ⭐️ #TOH: ₹ 50.75 cr Nett BOC. #India biz.- Taran Adarsh (@taran_adarsh) 15 Apr 2022
KGF 2 ಮೊದಲ ದಿನ 134.5 ಕೋಟಿ ರೂ.ಗಳಿಕೆ; ಬಾಲಿವುಡ್ ಇತಿಹಾಸದಲ್ಲೇ ದಾಖಲೆ ಬರೆದ ರಾಕಿ ಭಾಯ್
ಇಂದು 2ನೇ ದಿನ ಗುಡ್ ಫ್ರೈಡೇ ಇರುವುದರಿಂದ ಕಲೆಕ್ಷನ್ ವಿಚಾರದಲ್ಲಿ ಸಿನಿಮಾತಂಕ್ಕೆ ಪ್ಲಸ್ ಆಗಲಿದೆ. ನಾಳೆ ವೀಕೆಂಡ್ ಪ್ರಾರಂಭವಾಗುತ್ತದೆ. ಹಾಗಾಗಿ ಕೆಜಿಎಫ್2 ಮತ್ತಷ್ಟು ಕಲೆಕ್ಷನ್ ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ. ದಾಖಲೆ ಮೇಲೆ ದಾಖಲೆ ಬರೆಯುತ್ತಿರುವ ಕೆಜಿಎಫ್-2 ಮೊದಲ ವಾರದ ಅಂತ್ಯಕ್ಕೆ ಎಷ್ಟು ಕೋಟಿ ಬಾಚಿಕೊಳ್ಳಲಿದೆ ಎಂದು ಕಾದು ನೋಡಬೇಕು.
ಪ್ರಶಾಂತ್ ನೀಲ್ ನಿರ್ದೇಶನ, ಯಶ್ ಮತ್ತು ಸಂಜಯ್ ದತ್ ನಟನೆ, ರವೀನಾ ಟಂಡನ್, ಶ್ರೀನಿಧಿ ಶೆಟ್ಟಿ, ಅರ್ಚನಾ ಜೋಯಿಶ್ ಹೀಗೆ ಪ್ರತಿಯೊಂದು ಪಾತ್ರಗಳು ಅಭಿಮಾನಿಗಳ ಹೃದಯ ಗೆದ್ದಿದೆ. ಆಕ್ಷನ್ ದೃಶ್ಯ, ಸಂಗೀತ ಮಾಸ್ ಎಲಿಮೆಂಟ್, ತಾಯಿ ಸೆಂಟಿಮೆಂಟ್ ಪ್ರತಿಯೊಂದು ವಿಭಾಗದಲ್ಲೂ ಕೆಜಿಎಫ್-2 ಅಭಿಮಾನಿಗಳ ಹೃದಯ ಗೆದ್ದಿದೆ. 2ನೇ ದಿನವು ಪ್ರೇಕ್ಷಕರು ಮುಗಿಬಿದ್ದು ಸಿನಿಮಾ ನೋಡಿ ಸಂಭ್ರಮಿಸುತ್ತಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.