KGF 2: ಬಿಡುಗಡೆ ಆಯ್ತು 'ಗಗನ ನೀ, ಭುವನ ನೀ..' ಹಾಡು; ಹೇಗಿದೆ ನೋಡಿ

Published : Apr 06, 2022, 01:10 PM ISTUpdated : Apr 06, 2022, 03:36 PM IST
KGF 2: ಬಿಡುಗಡೆ ಆಯ್ತು 'ಗಗನ ನೀ, ಭುವನ ನೀ..' ಹಾಡು; ಹೇಗಿದೆ ನೋಡಿ

ಸಾರಾಂಶ

ರಾಕಿಂಗ್ ಸ್ಟಾರ್ ಯಶ್(Yash) ನಟನೆಯ ಕೆಜಿಎಫ್-2 (KGF 2) ಸಿನಿಮಾದ ಬಹುನಿರೀಕ್ಷೆಯ 2ನೇ ಹಾಡು ಬಿಡುಗಡೆಯಾಗಿದೆ. ಈಗಾಗಲೇ ಸಿನಿಮಾದಿಂದ ಮೊದಲ ಹಾಡು ತೂಫಾನ್ ರಿಲೀಸ್ ಮಾಡಿದ್ದ ಚಿತ್ರತಂಡ ಇದೀಗ ತಾಯಿ ಸೆಂಟಿಮೆಂಟ್ ಹಾಡನ್ನು ಬಿಡುಗಡೆ ಮಾಡಿದೆ.

ರಾಕಿಂಗ್ ಸ್ಟಾರ್ ಯಶ್ (Rocking star Yash) ನಟನೆಯ ಕೆಜಿಎಫ್-2 (KGF 2) ಸಿನಿಮಾದ ಬಹುನಿರೀಕ್ಷೆಯ 2ನೇ ಹಾಡು ಬಿಡುಗಡೆಯಾಗಿದೆ. ಈಗಾಗಲೇ ಸಿನಿಮಾದಿಂದ ಮೊದಲ ಹಾಡು ತೂಫಾನ್ ರಿಲೀಸ್ (Toofan song KGF) ಮಾಡಿದ್ದ ಚಿತ್ರತಂಡ ಇದೀಗ ತಾಯಿ ಸೆಂಟಿಮೆಂಟ್ ಹಾಡನ್ನು ಬಿಡುಗಡೆ ಮಾಡಿದೆ. ಗಗನ ನೀ, ಭುವನ ನೀ.. (Gagana Nee Bhuvana Nee song) ಎಂಬ ಸಾಲುಗಳಿಂದ ಆರಂಭವಾಗುವ ಹಾಡನ್ನು ರಿಲೀಸ್ ಮಾಡಿದ್ದು, ಇದು ಪ್ರತಿ ಅಮ್ಮಂದಿರ ಧ್ವನಿ ಎಂದು ಸಿನಿಮಾತಂಡ ಬಣ್ಣಿಸಲಾಗಿದೆ. ಪಾರ್ಟ್-1ರಲ್ಲಿ ರಾಕಿ ಭಾಯ್ ಮತ್ತು ತಾಯಿ ಸೆಂಟಿಮೆಂಟ್ ಅಭಿಮಾನಿಗಳ ಹೃದಯತಟ್ಟಿತ್ತು. ಪಾರ್ಟ್-2ನಲ್ಲೂ ಅದು ಮುಂದುವರೆದಿದೆ ಎನ್ನುವುದು ಈ ಸಾಂಗ್ ನೋಡಿದ್ರೆ ಗೊತ್ತಾಗುತ್ತಿದೆ.

ತೂಫಾನ್ ಬಳಿಕ ಮತ್ತೊಂದು ಹಾಡು ಬಿಡುಗಡೆ ಮಾಡುವುದಾಗಿ ಘೋಷೆಣೆ ಮಾಡುತ್ತಿದ್ದಂತೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿತ್ತು. ಈ ಹಾಡಿಗಾಗಿ ಕಾತರದಿಂದ ಕಾಯುತ್ತಿದ್ದರು. ಇದೀಗ ಬಿಡುಗಡೆಯಾಗಿದ್ದು ಕೆಲವೇ ಕ್ಷಣಗಳಲ್ಲಿ ಸಿಕ್ಕಾಪಟ್ಟೆ ವೀಕ್ಷಣೆ ಪಡೆದುಕೊಂಡಿದೆ. ರವಿ ಬಸ್ರೂರು ಸಂಗೀತ ಸಂಯೋಜನೆ ಮಾಡಿರುವ ಈ ಹಾಡು ಸುಚೇತಾ ಬಸ್ರೂರ್ ಧ್ವನಿಯಲ್ಲಿ ಮೂಡಿಬಂದಿದೆ. ಕಿನ್ನಲ್ ರಾಜ್ ಎನ್ನುವವರು ಆ ಹಾಡಿಗೆ ಸಾಹಿತ್ಯ ರಚಿಸಿದ್ದಾರೆ. ಈ ಹಾಡು ಕನ್ನಡದ ಜೊತೆಗೆ ಬೇರೆ ಬೇರೆ ಭಾಷೆಗಳಲ್ಲಿ ಈ ಹಾಡು ರಿಲೀಸ್ ಆಗಿದೆ.

ಇನ್ನು ಕೆಜಿಎಫ್-2 ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಏಪ್ರಿಲ್ 14ರಂದು (April 14th) ಸಿನಿಮಾ ಅದ್ದೂರಿಯಾಗಿ ತೆರೆಗೆ ಬರುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟ್ರೇಲರ್ ಯೂಟ್ಯೂಬ್ ನಲ್ಲಿ ಧೂಳ್ ಎಬ್ಬಿಸಿದೆ. ದಾಖಲೆಯ ವೀಕ್ಷಣೆ ಪಡೆದುಕೊಂಡಿದೆ. ಅಲ್ಲದೆ ಚಿತ್ರದಿಂದ ಬಂದ ಮೊದಲು ಹಾಡು ತೂಫಾನ್ ಕೂಡ ಅಭಿಮಾನಿಗಳು ಹುಚ್ಚೆದ್ದು ಕುಣಿಯುವಂತೆ ಮಾಡಿದೆ. ದಿನದಿಂದ ದಿನಕ್ಕೆ ಕುತೂಹಲ, ನಿರೀಕ್ಷೆ ಹೆಚ್ಚಿಸುತ್ತಲೇ ಇದೆ ಕೆಜಿಎಫ್-2.

KGF 2; ದೆಹಲಿ ಬಳಿಕ ಮುಂಬೈನಲ್ಲಿ ಯಶ್, ಸಂಜಯ್ ದತ್, ರವೀನಾ ಭರ್ಜರಿ ಪ್ರಚಾರ

ಬೆಂಗಳೂರಿನಲ್ಲಿ ಟ್ರೇಲರ್ ಬಿಡುಗಡೆ ಮಾಡುತ್ತಿದ್ದಂತೆ ಉತ್ತರ ಭಾರತದ ಕಡೆ ಪಯಣ ಬೆಳೆಸಿರುವ ಕೆಜಿಎಫ್-2 ತಂಡ ಅಬ್ಬರದ ಪ್ರಚಾರ ಮಾಡುತ್ತಿದೆ. ರಾಕಿಂಗ್ ಸ್ಟಾರ್ ಯಶ್, ರವೀನಾ ಟಂಡನ್, ಸಂಜಯ್ ದತ್ ಮತ್ತು ಶ್ರೀನಿಧಿ ಶೆಟ್ಟಿ ಅವರ ಪ್ರಚಾರದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಟೈಲಿಶ್ ಲುಕ್ ನಲ್ಲಿ ಮಿಂಚುತ್ತಿರುವ ರಾಕಿ ಭಾಯ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

ಇನ್ನು ಕೆಜಿಎಫ್-2 ಕೇವಲ ಭಾರತ ಮಾತ್ರವಲ್ಲದೆ ಯುರೋಪ್, ಅಮೇರಿಕಾ, ರಷ್ಯಾ ಸೇರಿದಂತೆ ವಿಶ್ವದ ಹಲವು ಪ್ರದೇಶಗಳಲ್ಲಿ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ಎಲ್ಲೆಡೆ ಕನ್ನಡ ಸೇರಿದಂತೆ ತೆಲುಗು, ಹಿಂದಿ ಮೊದಲಾದ ಭಾಷೆಗಳಲ್ಲೂ ಚಿತ್ರವನ್ನು ರಿಲೀಸ್ ಮಾಡಲಾಗುತ್ತಿದೆ. ವಿಶೇಷ ಎಂದರೆ ಗ್ರೀಸ್ ​ನಲ್ಲೂ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಮೂಲಕ ಗ್ರೀಸ್ ನಲ್ಲಿ ಬಿಡುಗಡೆಯಾಗುತ್ತಿರುವ ದಕ್ಷಿಣ ಭಾರತದ ಮೊದಲ ಸಿನಿಮಾ ಎಂಬ ಖ್ಯಾತಿಯನ್ನು ಕೆಜಿಎಫ್2 ಪಡೆದುಕೊಂಡಿದೆ.

RRR ಮತ್ತು ಕಾಶ್ಮೀರ್ ಫೈಲ್ಸ್ ನೋಡಿದ್ರಾ ಯಶ್?, ರಾಕಿಂಗ್ ಸ್ಟಾರ್ ಉತ್ತರವೇನು?

ವಿಶ್ವದಾದ್ಯಂತ ತೆರೆಗೆ ಬರುತ್ತಿರುವ ಕೆಜಿಎಫ್-2 ಸಿನಿಮಾ ನೋಡಲು ಕೋಟ್ಯಂತರ ಅಭಿಮಾನಿಗಳು ಉಸಿರು ಬಿಗಿಹಿಡಿದು ಕಾಯುತ್ತಿದ್ದಾರೆ. ಕೆಜಿಎಫ್ ಮೊದಲ ಭಾಗಕ್ಕಿಂತ 2ನೇ ಭಾಗ ಮತ್ತಷ್ಟು ರೋಚಕವಾಗಿದ್ದು ರಾಕಿ ಭಾಯ್ ಅನ್ನು ಕಣ್ತುಂಬಿಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ. ಚಿತ್ರದಲ್ಲಿ ಬಾಲಿವುಡ್ ನಟ ಸಂಜಯ್ ದತ್, ನಟಿ ರವೀನಾ ಟಂಡನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಸಂಜಯ್ ದತ್ ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಅಧೀರಾ ಎನ್ನುವ ಭಯಾನಕ ಪಾತ್ರ ನಿರ್ವಾಹಿಸಿರುವ ಸಂಜಯ್ ದತ್ ಅವರನ್ನು ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ಏಪ್ರಿಲ್ 14ರಂದು ಎಲ್ಲಾ ಕುತೂಹಲ, ನಿರೀಕ್ಷೆ ಗಳಿಗೆ ತೆರೆ ಬೀಳಲಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಅತ್ತ ಪಂಚೆ ಉದುರಿ ಹೋಗುತ್ತಿದೆ.. ಇತ್ತ ಕುಣಿದು ಕುಪ್ಪಳಿಸಿ ಇಳಯರಾಜಾ ಕಂಪೋಸ್ ಮಾಡಿದ ಮಜವಾದ ಹಾಡು ಯಾವುದು?
ಅಖಂಡ 2 ರಿಲೀಸ್ ನಿಲ್ಲೋಕೆ ಅಸಲಿ ಕಾರಣ ಇದೇನಾ? ಅಷ್ಟಕ್ಕೂ ಬಾಲಯ್ಯ ಮುಂದೆ ಏನ್ಮಾಡ್ತಾರೆ?