1ರಿಂದ 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪಾಸ್: ಕೊರೋನಾದಿಂದ ಸಿಕ್ತು ಗ್ರೇಸ್

Published : Apr 01, 2020, 10:04 PM ISTUpdated : Apr 01, 2020, 10:10 PM IST
1ರಿಂದ 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪಾಸ್: ಕೊರೋನಾದಿಂದ ಸಿಕ್ತು ಗ್ರೇಸ್

ಸಾರಾಂಶ

ದೇಶದಲ್ಲಿ ಕೊರೋನಾ ವೈರಸ್ ಸಂಕಷ್ಟ ಎದುರಾಗಿದ್ದು, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈ ಹಿನ್ನೆಲೆಯಲ್ಲಿ 1 ರಿಂದ 8ನೇ ತರಗತಿಗೆ ಪರೀಕ್ಷೆ ನಡೆಸಲು ಕಷ್ಟ ಸಾಧ್ಯ. ಇದರಿಂದ 1ರಿಂದ 8ನೇ ವಿದ್ಯಾರ್ಥಿಗಳು ಪಾಸ್.

ನವದೆಹಲಿ, (ಏ.01): ಕೊರೋನಾ ವೈರಸ್ ಹಾವಳಿ ಹೆಚ್ಚುತ್ತಿರುವುದರಿಂದ CBSE ಪಠ್ಯ ಕ್ರಮ ಓದುತ್ತಿರುವ  1 ರಿಂದ 8ನೇ ವಿದ್ಯಾರ್ಥಿಗಳನ್ನು ನೇರವಾಗಿ ಪಾಸ್ ಮಾಡುವಂತೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಕ್ರಿಯಾಲ್ ನಿಶಾಂಕ್ ಆದೇಶಿಸಿದ್ದಾರೆ.

ಕೊರೋನಾ ಎಫೆಕ್ಟ್: CBSE, ICSE ಮತ್ತು ISC ಪರೀಕ್ಷೆ ಮುಂದೂಡಿಕೆ!

ಈ ಬಗ್ಗೆ ಅವರು ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ. ಕೊರೋನಾ ವೈರಸ್ ಹರಡುತ್ತಿರುವ ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.   1 ರಿಂದ 8ನೇ ವಿದ್ಯಾರ್ಥಿಗಳನ್ನು ಪಾಸ್ ಮಾಡಿ ಮುಂದಿನ ತರಗತಿಗೆ ಸೇರಿಸಿಕೊಳ್ಳು ಆದೇಶಿಸಲಾಗಿದೆ.
  ಇನ್ನು 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳನ್ನು ಆಯಾ ಶಾಲೆಗಳಲ್ಲಿ ನೀಡಿದ ಪ್ರಾಜೆಕ್ಟ್ ಹಾಗೂ ಪರೀಕ್ಷೆ ಆಧಾರದ ಮೇಲೆ ಮುಂದಿನ ತರಗತಿಗೆ ಉತ್ತೀರ್ಣ ಮಾಡಬಹುದಾಗಿದೆ. ಒಂದು ವೇಳೆ ಇದರಲ್ಲಿ ಪಾಸ್‌ ಆಗದೇ ಇರುವವರು ಶಾಲೆಗಳು ನಡೆಸುವ ಆನ್‌ಲೈನ್ ಅಥವಾ ಆಫ್‌ಲೈನ್ ಪರೀಕ್ಷೆಗಳಿಗೆ ಹಾಜರಾಗಹುದಾಗಿದೆ ಎಂದು ಸಚಿವರು ತಿಳಿಸಿದ್ದಾರೆ. 

ಬಹುಮುಖ್ಯವಾಗಿ ಸಿಬಿಎಸ್‌ಇ 10 ಮತ್ತು 12ನೇ ತರಗತಿಗೆ ಪ್ರಧಾನ 29 ವಿಷಯಗಳಿಗೆ ಮಾತ್ರ ಪರೀಕ್ಷೆ ನಡೆಸಲಿದೆ. ಮುಂದಿನ ಶಿಕ್ಷಣ ಪಡೆಯಲು ಬೇಕಾಗಿರುವ ಮತ್ತು ಉತ್ತೀರ್ಣಗೊಳ್ಳಲು ಅತ್ಯಗತ್ಯವಾಗಿರುವ ವಿಷಯಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಸಚಿವ ರಮೇಶ್ ಪೊಕ್ರಿಯಾಲ್ ನಿಶಾಂಕ್ ಮಾಹಿತಿ ನೀಡಿದ್ದಾರೆ.

PREV
click me!

Recommended Stories

ಅಕ್ಷಯ್ ಕುಮಾರ್ ರಾಮಸೇತು ಚಿತ್ರದ 45 ಕಿರಿಯ ಕಲಾವಿದರಿಗೂ ಕೊರೊನಾ ಪಾಸಿಟಿವ್!
ಕೊರೋನಾ ಅಟ್ಟಹಾಸ; 3 ರಾಜ್ಯಗಳಿಗೆ ತಜ್ಞರ ತಂಡ ಕಳುಹಿಸಿದ ಮೋದಿ!