ಲಾಕ್‌ಡೌನ್‌ ಉಲ್ಲಂಘನೆ: ಬೀದಿಗೆ ಬಂದ ಮೂವರಿಗೆ ಜೈಲು

Suvarna News   | Asianet News
Published : Apr 03, 2020, 03:56 PM IST
ಲಾಕ್‌ಡೌನ್‌ ಉಲ್ಲಂಘನೆ: ಬೀದಿಗೆ ಬಂದ ಮೂವರಿಗೆ ಜೈಲು

ಸಾರಾಂಶ

ದೇಶಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದ್ದರೂ ಅನಗತ್ಯವಾಗಿ ರಸ್ತೆಗಿಳಿದ ಪುಣೆಯ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

ಪುಣೆ/ಕೊಚ್ಚಿ(ಏ.03): ಲಾಕ್‌ಡೌನ್‌ ಉಲ್ಲಂಘಿಸಿದ ಕಾರಣಕ್ಕೆ ಪುಣೆಯ ಬಾರಾಮತಿ ಕೋರ್ಟ್‌ ಮೂವರು ವ್ಯಕ್ತಿಗಳಿಗೆ ಮೂರು ದಿನಗಳ ಜೈಲು ಶಿಕ್ಷೆ ವಿಧಿಸಿದೆ. ಇನ್ನು ಕೇರಳದ ಕೊಚ್ಚಿಯಲ್ಲಿ ಓರ್ವನನ್ನು ಬಂಧಿಸಲಾಗಿದೆ.

ಮೈಸೂರು: ಅನಗತ್ಯ ಓಡಾಡಿದ 303 ವಾಹನಗಳ ವಶ

ಬಾರಾಮತಿ ನಗರದಲ್ಲಿ ಅನಾವಶ್ಯಕವಾಗಿ ಸುತ್ತಾಡುತ್ತಿದ್ದ ಕಾರಣಕ್ಕೆ ಮೂವರ ವಿರುದ್ಧ ಐಪಿಸಿ ಸೆಕ್ಷನ್‌ 188ರ ಪ್ರಕಾರ ಕೇಸು ದಾಖಸಿಕೊಳ್ಳಲಾಗಿದೆ. ನಿಯಮ ಉಲ್ಲಂಘನೆಗೆ ಜೈಲು ಶಿಕ್ಷೆ ವಿಧಿಸಿದ್ದು ಇದೇ ಮೊದಲು. ಕೇರಳದಲ್ಲಿ ವೈದ್ಯಕೀಯ ಸಿಬ್ಬಂದಿಗಳ ಸಲಹೆಯನ್ನು ಧಿಕ್ಕರಿಸಿ ಅನಾವಶ್ಯಕವಾಗಿ ಸಂಚರಿಸುತ್ತಿದ್ದ ಕಾಲಡಿ ಮಟ್ಟೂರ್‌ ನಿವಾಸಿ ಸೋಜನ್‌ ಎಂಬಾತನನ್ನು ಎರ್ನಾಕುಲಂ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ರಾಜ್ಯಾದ್ಯಂತ 5000ಕ್ಕೂ ಹೆಚ್ಚು ವಾಹನ ಜಪ್ತಿ!

ಇನ್ನು ಕರ್ನಾಟಕದಲ್ಲೂ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ರಾಜ್ಯಾದ್ಯಂತ ಅನಗತ್ಯವಾಗಿ ತಿರುಗಾಡುವ ಸಾವಿರಾರು ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವಾಹನಗಳನ್ನು ಲಾಕ್‌ಡೌನ್ ಮುಗಿದ ಬಳಿಕವಷ್ಟೇ ಮಾಲೀಕರಿಗೆ ಹಿಂತಿರುಗಿಸಲು ನಿರ್ಧರಿಸಿದ್ದಾರೆ.

ಕೊರೋನಾ ವೈರಸ್ ಹರಡದಂತೆ ತಡೆಯಲು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 24ರಂದು 21 ದಿನಗಳ ಕಾಲ ದೇಶಾದ್ಯಂತ ಲಾಕ್‌ಡೌನ್ ಘೋಷಿಸಿದ್ದಾರೆ. ಅಗತ್ಯ ಹಾಗೂ ತುರ್ತು ಸಂದರ್ಭದಲ್ಲಷ್ಟೇ ಮನೆಯಿಂದ ಹೊರಬನ್ನಿ ಎಂದು ಮನವಿ ಮಾಡಿಕೊಂಡಿದ್ದರು. ಇನ್ನು ಇದೇ ವೇಳೆ 21 ದಿನಗಳ ಕಾಲ ತಮಗೆ ತಾವೇ ಲಕ್ಷ್ಮಣ ರೇಖೆ ಹಾಕಿಕೊಂಡು ಮನೆಯಲ್ಲೇ ಉಳಿಯಿರಿ, ಇಲ್ಲದಿದ್ದರೆ ದೇಶ 21 ವರ್ಷ ಹಿಂದೆ ಹೋಗಲಿದೆ ಎಂದು ಎಚ್ಚರಿಸಿದ್ದರು. 

PREV
click me!

Recommended Stories

ಅಕ್ಷಯ್ ಕುಮಾರ್ ರಾಮಸೇತು ಚಿತ್ರದ 45 ಕಿರಿಯ ಕಲಾವಿದರಿಗೂ ಕೊರೊನಾ ಪಾಸಿಟಿವ್!
ಕೊರೋನಾ ಅಟ್ಟಹಾಸ; 3 ರಾಜ್ಯಗಳಿಗೆ ತಜ್ಞರ ತಂಡ ಕಳುಹಿಸಿದ ಮೋದಿ!