
ಮಡಿಕೇರಿ(ಮಾ.25): ಕೊಡಗು ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 32 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರಲ್ಲಿ 1 ಪ್ರಕರಣ ದೃಢ ಪಟ್ಟಿದ್ದು, 10 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿರುತ್ತದೆ.
21 ಪ್ರಕರಣಗಳಲ್ಲಿ ವರದಿಯನ್ನು ನಿರೀಕ್ಷಿಸಲಾಗಿದೆ. ಪ್ರಸ್ತುತ 3 ಜನರನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿಟ್ಟು ಉಪಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾಗೆ 2ನೇ ಬಲಿ? ಗೌರಿಬಿದನೂರಿನ ವೃದ್ಧೆ ಸಾವು
ಈಗಾಗಲೇ ರಾಜ್ಯಾದ್ಯಂತ ಲಾಕ್‌ಡೌನ್ ಮಾಡಿದ್ದು, ಮಂಗಳವಾರ ರಾತ್ರಿಯಷ್ಟೇ ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ದೇಶ ಲಾಕ್‌ಡೌನ್‌ಗೆ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಕೊಡಗಿನಲ್ಲಿಯೂ ಸಂಪೂರ್ಣ ಲಾಕ್‌ಡೌನ್ ಮಾಡಲಾಗಿದೆ.