ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ತನ್ನ ವ್ಯಾಪ್ತಿ ವಿಸ್ತರಿಸುತ್ತಿದ್ದು, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಯಾಗುತ್ತಿದೆ. ಇದನ್ನು ನಿಯಂತ್ರಣ ಮಾಡಲು ರಾಜ್ಯ ಸರ್ಕಾರ ಹಲವು ಕ್ರಮಕೈಗೊಳ್ಳುತ್ತಿದೆ. ಅಷ್ಟೇ ಅಲ್ಲದೇ ಮಾಹಾಮಾರಿ ಕಿಲ್ಲರ್ ವೈರಸ್ ವಿರುದ್ಧ ಹೋರಾಡಲು ಸಿಎಂ ಬಿಎಸ್ ಯಡಿಯೂರಪ್ಪ ಅವರು ವಿರೋಧ ಪಕ್ಷದ ನಾಯಕನ್ನು ಒಗ್ಗೂಡಿಸಿಕೊಂಡು ಸಭೆಯಲ್ಲಿ 11 ನಿರ್ಣಯಗಳನ್ನು ಕೈಗೊಂಡಿದ್ದಾರೆ.
ಬೆಂಗಳೂರು, (ಮಾ.29): ಕಿಲ್ಲರ್ ಕೊರೋನಾ ವೈರಸ್ ತಡೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸರ್ವಪಕ್ಷಗಳ ಸಭೆ ನಡೆಸಿದರು.
ಕೊರೋನಾ ಬಗ್ಗೆ 8 ತಿಂಗಳ ಮುಂಚೆಯೇ ಎಚ್ಚರಿಸಿದ್ದ ಬಾಲಕ, ನಿಜವಾಯ್ತು ಭವಿಷ್ಯ
undefined
ಇಂದು (ಭಾನುವಾರ) ವಿಧಾನಸೌಧದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಎಚ್.ಡಿ.ಉಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್, ಜೆಡಿಎಸ್ ಮತ್ತು ಆಡಳಿತ ಪಕ್ಷದ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ಹಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಆ ನಿರ್ಣಯಗಳು ಈ ಕೆಳಗಿನಂತಿವೆ.
ಸರ್ವ ಪಕ್ಷಗಳ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು
1. ಸರ್ವ ಪಕ್ಷಗಳ ಸಭೆಯಲ್ಲಿ ನಾಯಕರು ಉಪಯುಕ್ತ ಸಲಹೆಗಳನ್ನು ನೀಡಿರುತ್ತಾರೆ, ಸರ್ಕಾರ ಅವುಗಳನ್ನು ಗಂಭೀರವಾಗಿ ಪರಿಗಣಿಸಿ ಅನುಷ್ಠಾನಕ್ಕೆ ತರಲಿದೆ.
2.ಸರ್ವ ಪಕ್ಷಗಳ ಮುಖಂಡರು ಸರ್ಕಾರದ ಕ್ರಮಗಳಿಗೆ ಒಕ್ಕೊರಲಿನ ಬೆಂಬಲ ವ್ಯಕ್ತಪಡಿಸಿ, ಈ ಸಂಕಷ್ಟದ ಸನ್ನಿವೇಶದಲ್ಲಿ ಸರ್ಕಾರದ ಜೊತೆ ಕೈಗೊಡಿಸುವುದಾಗಿ ಸಹಮತ ವ್ಯಕ್ತಪಡಿಸಿದರು.
3.ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು, ನರ್ಸ್‌ಗಳು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ಕಿಟ್, ಮಾಸ್ಕ್ ಹಾಗೂ ಸ್ಯಾನಿಟೈಜರ್ ಬಾಟಲಿಗಳನ್ನು ಸರಬರಾಜು ಮಾಡಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು.
4. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ರಕ್ಷಣಾ ಸಾಧನಗಳು ಒದಗಿಸಲು ಕೂಡಲೇ ಕ್ರಮ ಕೈಗೊಳ್ಳುವುದು.
5.ರಾಜ್ಯದ ಗಡಿಗಳಲ್ಲಿ ಸಿಲುಕಿಕೊಂಡಿರುವ ಜನರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ಬಳಿಕ ಅವರಿಗೆ ಆಶ್ರಯ ಕಲ್ಪಿಸಲು ವ್ಯವಸ್ಥೆ ಮಾಡುವುದು.
6. ವೈರಸ್ ತಗುಲಿರುವ ಪ್ರಯಾಣಿಕರಿಗೆ ಕ್ವಾರಂಟೈನ್ ವ್ಯವಸ್ಥೆಗೆ ಒಳಪಡಿಸಲು ಹಾಗೂ ಆರೋಗ್ಯವಾಗಿರುವ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ತಲುಪಿಸಲು ಕ್ರಮ ಕೈಗೊಳ್ಳುವುದು.
7. ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಿಗೆ ಅಗತ್ಯ ಸಂಖ್ಯೆಯಲ್ಲಿ ಟೆಸ್ಟಿಂಗ್ ಕಿಟ್ ವಿತರಿಸಲಾಗುವುದು.
8.ರೈತರ ಕೃಷಿ ಉತ್ಪನ್ನಗಳ ಸಾಗಣೆ, ಮಾರಾಟ ಮತ್ತು ಬಳಕೆದಾರರಿಗೆ ಸೂಕ್ತವಾಗಿ ವಿತರಿಸಲು ವ್ಯವಸ್ಥೆ ಮಾಡಲಾಗುವುದು.
9. ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಮುಂತಾದ ವಿತರಣೆಗೆ ಸೂಕ್ತ ವ್ಯವಸ್ಥೆ ಮಾಡಲಾಗುವುದು.
10.ಪಡಿತರವನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಸಲಹೆಯನ್ನು ವಿರೋಧ ಪಕ್ಷದ ನಾಯಕರು ನೀಡಿದ್ದು, ಆ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.
11 ಮುಸ್ಲಿಂ ಬಾಂಧವರ ಜೊತೆಗೆ ನಾನು ಸಭೆ ನಡೆಸಿದ್ದು, ಅವರೆಲ್ಲರೂ ತಮ್ಮ-ತಮ್ಮ ಮನೆಗಗಳಲ್ಲಿಯೇ ಪ್ರಾರ್ಥನೆ ನಡೆಸಲು ಒಪ್ಪಿ ಸಹಕರಿಸಿರುತ್ತಾರೆ.ಅವರನ್ನು ಅಭಿನಂದಿಸುತ್ತೇನೆ.