ಮದ್ದೂರು ತಾಲೂಕಿನ ಕೊಪ್ಪ ಹೋಬಳಿ ಹಳೆ ಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ದಾಸ್ತಾನು ಮಾಡಿದ್ದ ಅಂಗಡಿ ಮೇಲೆ ಗುರುವಾರ ರಾತ್ರಿ ದಾಳಿ ಮಾಡಿದ ಅಬಕಾರಿ ಅಧಿಕಾರಿಗಳು ಸುಮಾರು 11 ಸಾವಿರ ರು. ಮೌಲ್ಯದ 25.920 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಮಂಡ್ಯ(ಏ.04): ತಾಲೂಕಿನ ಕೊಪ್ಪ ಹೋಬಳಿ ಹಳೆ ಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ದಾಸ್ತಾನು ಮಾಡಿದ್ದ ಅಂಗಡಿ ಮೇಲೆ ಗುರುವಾರ ರಾತ್ರಿ ದಾಳಿ ಮಾಡಿದ ಅಬಕಾರಿ ಅಧಿಕಾರಿಗಳು ಸುಮಾರು 11 ಸಾವಿರ ರು. ಮೌಲ್ಯದ 25.920 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಜಿಲ್ಲಾ ಅಬಕಾರಿ ಉಪ ಆಯುಕ್ತ ಶಿವಪ್ರಸಾದ್, ಅಧೀಕ್ಷಕ ಚಂದ್ರಕುಮಾರ್, ಮದ್ದೂರು ವಲಯ ನಿರೀಕ್ಷಕ ಕುಮಾರ್ ಹಾಗೂ ಸಿಬ್ಬಂದಿ ಮಾಹಿತಿ ಮೇರೆಗೆ ದಾಳಿ ಮಾಡಿ ಚಿಲ್ಲರೆ ಅಂಗಡಿಯಲ್ಲಿ ದಾಸ್ತಾನು ಮಾಡಿದ್ದ ಹನ್ನೊಂದು ಸಾವಿರ ಮೌಲ್ಯದ ಮೂರು ಲೀಟರ್ ಸಿಲ್ವರ್ ಕಪ್ ಸೀಜ್ ಮಾಡಲಾಗಿದೆ.
ಕೊರೋನಾ ಕಾಟ: ನೈರುತ್ಯ ರೈಲ್ವೆಯಿಂದ ಮಾಸ್ಕ್, ಸ್ಯಾನಿಟೈಸರ್ ಉತ್ಪಾದನೆ
ಹಾಗೂ ಹೈವಾಟ್ಸ್ ವಿಸ್ಕಿ ಪ್ಯಾಕೆಟ್‌ಗಳನ್ನು ದಾಳಿ ವೇಳೆ ವಶಪಡಿಸಿಕೊಳ್ಳಲಾಗಿದೆ. ಅಧಿಕಾರಿಗಳ ದಾಳಿ ವೇಳೆ ಅಂಗಡಿ ಮಾಲೀಕ ರಮೇಶ್ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.