ಲಾಕ್‌ಡೌನ್: 50ಕ್ಕೂ ಹೆಚ್ಚು ವಾಹನ ಮುಟ್ಟುಗೋಲು

Kannadaprabha News   | Asianet News
Published : Mar 31, 2020, 07:13 AM IST
ಲಾಕ್‌ಡೌನ್: 50ಕ್ಕೂ ಹೆಚ್ಚು ವಾಹನ ಮುಟ್ಟುಗೋಲು

ಸಾರಾಂಶ

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸಂಪೂರ್ಣ ಲಾಕ್‌ಡೌನ್‌ ಘೋಷಣೆಯಾಗಿದ್ದರೂ ಅನಾವಶ್ಯಕವಾಗಿ ರಸ್ತೆಗಳಲ್ಲಿ ಸಂಚರಿಸುತ್ತಿದ್ದ 50ಕ್ಕೂ ಹೆಚ್ಚು ವಾಹನಗಳನ್ನು ಮಂಗಳೂರು ನಗರ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ.  

ಮಂಗಳೂರು(ಮಾ.30): ದ.ಕ. ಜಿಲ್ಲಾದ್ಯಂತ ಸಂಪೂರ್ಣ ಲಾಕ್‌ಡೌನ್‌ ಘೋಷಣೆಯಾಗಿದ್ದರೂ ಅನಾವಶ್ಯಕವಾಗಿ ರಸ್ತೆಗಳಲ್ಲಿ ಸಂಚರಿಸುತ್ತಿದ್ದ 50ಕ್ಕೂ ಹೆಚ್ಚು ವಾಹನಗಳನ್ನು ಮಂಗಳೂರು ನಗರ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಅನಾವಶ್ಯಕವಾಗಿ ಸಂಚಾರ ಮಾಡಿದರೆ ವಾಹನ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಪೊಲೀಸ್‌ ಆಯುಕ್ತ ಹರ್ಷ ಸಾರ್ವಜನಿಕರಿಗೆ ಈ ಹಿಂದೆಯೇ ಎಚ್ಚರಿಕೆ ನೀಡಿದ್ದರು. ಆದರೂ ಬಹಳಷ್ಟುಮಂದಿ ವಿನಾಕಾರಣ ಸಂಚರಿಸುವುದನ್ನು ಬಿಟ್ಟಿರಲಿಲ್ಲ.

ಬಂಟ್ವಾಳ ಯುವಕನ ಟಿಕ್ ಟಾಕ್ ಕೊರೋನಾ ಜಾಗೃತಿ ಅದ್ಭುತ

ಸೋಮವಾರ ಅಂತಹ 50ಕ್ಕೂ ಹೆಚ್ಚು ವಾಹನಗಳನ್ನು ಮುಟ್ಟುಗೋಲು ಹಾಕಿ, ಖಡಕ್‌ ಸಂದೇಶ ರವಾನಿಸಲಾಗಿದೆ. ಲಾಕ್‌ಡೌನ್ ಆಗಿದ್ದರೂ ಅದನ್ನು ಉಲ್ಲಂಘಿಸಿ ರಸ್ತೆಗಿಳಿಯುವ ವಾಹನಗಳಿಗೆ ಪೊಲೀಸರು ಖಡಕ್ ವಾರ್ನಿಂಗ್ ನೀಡಿದ್ದಾರೆ.

PREV
click me!

Recommended Stories

ವೈರಸ್‌ ಕಾಟ: ಕೊರೋನಾ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ, ಸಚಿವ ಪಾಟೀಲ್‌
ಮತ್ತೆ ಕೊರೋನಾರ್ಭಟ: ಪೂಲಿಂಗ್ ಟೆಸ್ಟ್ ಮೊರೆಹೋದ ಆರೋಗ್ಯ ಇಲಾಖೆ, ಏನಿದು ಹೊಸ ಪರೀಕ್ಷೆ?