ಕೊರೋನಾ ಆತಂಕ: 'ಯಾವುದೇ ಕಾರಣಕ್ಕೂ ಕೇರಳ ಗಡಿ ತೆರೆಯಲು ಬಿಡೋದಿಲ್ಲ'

Kannadaprabha News   | Asianet News
Published : Apr 03, 2020, 11:18 AM IST
ಕೊರೋನಾ ಆತಂಕ: 'ಯಾವುದೇ ಕಾರಣಕ್ಕೂ ಕೇರಳ ಗಡಿ ತೆರೆಯಲು ಬಿಡೋದಿಲ್ಲ'

ಸಾರಾಂಶ

ಕೇರಳ, ಕಾಸರಗೋಡು ಭಾಗದ ಎಲ್ಲ ರಸ್ತೆಗಳು ಬಂದ್‌| ನಮ್ಮಲ್ಲಿ ಕೊರೋನಾ ಪ್ರಕರಣ ಜಾಸ್ತಿಯಾಗುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ: ಕಟೀಲ್‌| ಕೇರಳ ಸರ್ಕಾರ ನ್ಯಾಯಾಲಯದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ| ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಿದೆ| 

ಮಂಗಳೂರು(ಏ.03): ಯಾವುದೇ ಕಾರಣಕ್ಕೂ ಕೇರಳ ಗಡಿ ರಸ್ತೆ ತೆರವು ಮಾಡುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಕೇರಳ, ಕಾಸರಗೋಡು ಭಾಗದ ಎಲ್ಲ ರಸ್ತೆಗಳನ್ನು ಬಂದ್‌ ಮಾಡಲಾಗಿದೆ. ನಮ್ಮಲ್ಲಿ ಕೊರೋನಾ ಪ್ರಕರಣ ಜಾಸ್ತಿಯಾಗುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ ಕೇರಳ ಸರ್ಕಾರ ನ್ಯಾಯಾಲಯದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಹೀಗಾಗಿ ಕರ್ನಾಟಕ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಿದೆ. ರಾಜ್ಯ ಸರ್ಕಾರದ ಈ ಪ್ರಯತ್ನದಿಂದ ಜಿಲ್ಲೆಯಲ್ಲಿ ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಅವರು ಸ್ಪಷ್ಟ​ಪ​ಡಿ​ಸಿ​ದ್ದಾರೆ. 

ಸದ್ಯ ಯಾವುದೇ ವಾಹನಗಳು ಕೇರ​ಳ​ದಿಂದ ಮಂಗ​ಳೂ​ರಿ​ಗೆ ಬರುತ್ತಿಲ್ಲ. ಯಾವುದೇ ಕಾರಣಕ್ಕೂ ರಸ್ತೆ ತೆರವು ಮಾಡುವ ಪ್ರಶ್ನೆಯೇ ಇಲ್ಲ. ಅಲ್ಲದೆ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಈ ಜಿಲ್ಲೆಯ ರೋಗಿಗಳು ಮಾತ್ರ ಇರಬೇಕು ಎಂದು ಮನವಿ ಮಾಡಿದ್ದೇವೆ. ನಮ್ಮ ಜಿಲ್ಲೆಯ ವೈದ್ಯಕೀಯ ವ್ಯವಸ್ಥೆ ಈ ಜಿಲ್ಲೆಗೆ ಮಾತ್ರ ಸೀಮಿತ ಎಂದು ಅವರು ಸುದ್ದಿ​ಗಾ​ರ​ರಿಗೆ ತಿಳಿ​ಸಿ​ದ್ದಾ​ರೆ.

ನೆರವು ಕೇಳಿದವನ ಮನೆಗೆ 2 ಗಂಟೇಲಿ ಅಕ್ಕಿ ಕಳುಹಿಸಿದ ಪ್ರಧಾನಿ ಮೋದಿ

ಈ ಮಧ್ಯೆ, ಕೊರೋನಾ ತಡೆಗಟ್ಟುವ ಹಿನ್ನಲೆಯಲ್ಲಿ ಕೇರಳ-ಕರ್ನಾಟಕ ಗಡಿ ಪ್ರದೇಶದಲ್ಲಿ ಕೇರಳದಿಂದ ಬರುವ ವಾಹನಕ್ಕೆ ನಿರ್ಬಂಧ ಹೇರಿ ಬಂದ್‌ ಮಾಡಲಾಗಿದೆ. ಕೇರಳ ಗಡಿ ಬಂದ್‌ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಯಾವ ಒತ್ತಡಕ್ಕೂ ನಾವು ಮಣಿಯುವುದಿಲ್ಲ ಎಂದು ಮುಜರಾಯಿ ಸಚಿವ ಶ್ರೀನಿವಾಸ ಪೂಜಾರಿ ಕೂಡ ತಿಳಿಸಿದ್ದಾರೆ.
 

PREV
click me!

Recommended Stories

ವೈರಸ್‌ ಕಾಟ: ಕೊರೋನಾ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ, ಸಚಿವ ಪಾಟೀಲ್‌
ಮತ್ತೆ ಕೊರೋನಾರ್ಭಟ: ಪೂಲಿಂಗ್ ಟೆಸ್ಟ್ ಮೊರೆಹೋದ ಆರೋಗ್ಯ ಇಲಾಖೆ, ಏನಿದು ಹೊಸ ಪರೀಕ್ಷೆ?