SSLC, PUC ಆಯ್ತು ಈಗ ಸಿಇಟಿ ಪರೀಕ್ಷೆ ಮುಂದಕ್ಕೆ, ಹೊಸ ವೇಳಾಪಟ್ಟಿ ಯಾವಾಗ..?

By Suvarna NewsFirst Published Mar 30, 2020, 8:45 PM IST
Highlights

ದೇಶದಲ್ಲಿ ಕೊರೋನಾ ವೈರಸ್  ಎಫೆಕ್ಟ್ ಜಾಸ್ತಿಯಾದ ಕಾರಣ ಮುಂದಿನ ತಿಂಗಳು ನಿಗದಿಯಾಗಿದ್ದ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಬೆಂಗಳೂರು, (ಮಾ.30): ರಾಜ್ಯದಲ್ಲಿ ರಣಕೇಕೆ ಹಾಕುತ್ತಿರುವುದರಿಂದ ವೃತ್ತಿಪರ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ)  ಮುಂದೂಡಲಾಗಿದೆ.

ಕೊರೋನಾ ವೈರಸ್ ಭೀತಿಯಿಂದ ಇಡೀ ದೇಶವೇ ಏಪ್ರಿಲ್ 14ವರೆಗೆ ಲಾಕ್‍ಡೌನ್ ಆಗಿರಲಿದೆ. ಈ ಹಿನ್ನೆಲೆಯಲ್ಲಿ ವೃತ್ತಿಪರ ಕೋರ್ಸ್‌ಗಳ  ಪ್ರವೇಶಕ್ಕೆ ಏಪ್ರಿಲ್ 22, 23ರಂದು ನಡೆಸಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

ಪರಿಸ್ಥಿತಿ ನೋಡಿಕೊಂಡು ಸಿಇಟಿ, ಇನ್ನಿತರ ಪರೀಕ್ಷೆ: ಶಿಕ್ಷಣ ಇಲಾಖೆ

ಕೋವಿಡ್-19 ಕಾರಣಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಇನ್ನೂ ಪೂರ್ಣ ವಾಗಿಲ್ಲ. ಅಲ್ಲದೇ ಸಹಜ ಸ್ಥಿತಿಯೂ ಇಲ್ಲ. ಹೀಗಾಗಿ ಸಿಇಟಿ ಮುಂದೂಡಲಾಗಿದೆ. ಏಪ್ರಿಲ್ ಮೂರನೇ ವಾರದಲ್ಲಿ ಸಿಇಟಿ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಮತ್ತೊಂದೆಡೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪತ್ರಿಕಾ ಪ್ರಕಟಣೆ ಮೂಲಕ ಖಚಿತಪಡಿಸಿದ್ದು, ಸಿಇಟಿ ಪರೀಕ್ಷೆ ಮುಂದೂಡಲಾಗಿದೆ ಎಂದು ಹೇಳಿದೆ. ಜೊತೆಗೆ ಈ ಸಿಇಟಿ ಪರೀಕ್ಷೆಯ ಹೊಸ ವೇಳಾಪಟ್ಟಿಯನ್ನು ಮುಂದೆ ನಿಗದಿ ಮಾಡಲಾಗುತ್ತದೆ ಎಂದು ತಿಳಿಸಿದೆ.

click me!