: ಕೊರೋನಾ ವೈರಸ್‌ಗೆ ರಾಜ್ಯದಲ್ಲಿ 3ನೇ ಬಲಿಯಾಗಿದೆ. ವೈರಸ್ ತಡೆಯಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡರೂ ಜನರು ಗಂಬೀರವಾಗಿ ತೆಗದುಕೊಂಡಿಲ್ಲ. ಇದೀಗ ವೈರಸ್ ಹರಡದಂತೆ ಹಾಗೂ ಸೋಂಕಿತರ ಚಿಕಿತ್ಸೆ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಸಚಿವ ಸಂಪುಟ ತೆಗೆದುಕೊಂಡ ತೀರ್ಮಾನಗಳ ಕುರಿತ ವಿವರ ಇಲ್ಲಿದೆ.
ಬೆಂಗಳೂರು(ಮಾ.27): ಕರ್ನಾಟಕ ಸರ್ಕಾರ ಕೊರೋನಾ ವೈರಸ್ ಹರಡದಂತೆ ತಡೆಯಲು ಕೇಂದ್ರ ಸರ್ಕಾರಕ್ಕಿಂತ ಮೊದಲೇ ಲಾಕ್‌ಡೌನ್ ಘೋಷಣೆ ಮಾಡಿತ್ತು. ಆದರೆ ಜನರು ಗಂಭೀರವಾಗಿ ಪರಿಗಣಿಸಿಲ್ಲ. ಪ್ರಧಾನಿ ಮೋದಿ 21 ದಿನಗಳ ವರೆಗೆ ಸಂಪೂರ್ಣ ಭಾರತ ಲಾಕ್‌ಡೌನ್ ಘೋಷಿಸಿದ್ದರೂ, ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳುತ್ತಿಲ್ಲ. ಇದೀಗ ಲಾಕ್‌ಡೌನ್ 3ನೇ ದಿನ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಯಿತು.
undefined
ಲಾಕ್‌ಡೌನ್: ನಡೆದುಕೊಂಡೇ ಆಸ್ಪತ್ರೆಗೆ ಮಗು ಕರೆತಂದ ದಂಪತಿ
ಕೊರೋನಾ ವೈರಸ್ ಹರಡುವುದನ್ನು ಹತೋಟಿಗೆ ತರಲು ಹಾಗೂ ಸೋಂಕಿತರ ಚಿಕಿತ್ಸೆ ಕುರಿತು ಸುದೀರ್ಘ ಚರ್ಚೆ ನಡೆಸಿ ಹಲವು ತೀರ್ಮಾನ ಕೈಗೊಳ್ಳಲಾಗಿದೆ. ಪ್ರತಿ ಜಿಲ್ಲೆಯ ಉಸ್ತುವಾರಿಯನ್ನು ಸಂಬಂಧಪಟ್ಟ ಸಚಿವರು ತೆಗೆದುಕೊಳ್ಳಲು ಸೂಚಿಸಲಾಗಿದೆ. ಇಷ್ಟೇ ಅಲ್ಲ ಕೊರೋನಾ ನಿಯಂತ್ರಣದ ಕುರಿತು ಜಿಲ್ಲಾ ಮಟ್ಟದ ಸಭೆ ನಡೆಸಲು ಸೂಚಿಸಲಾಗಿದೆ.
ಯುಗಾದಿ ನೆಪ ಮಾಡಿ ಬೆಂಗ್ಳೂರ್ ಬಿಟ್ಟವ್ರಿಗೆ ಹಳ್ಳೀಲಿ ತಪಾಸಣೆ
ಇಂದು(ಮಾ.27) ಪ್ರಧಾನಿ ನರೇಂದ್ರ ಮೋದಿ ಜೊತೆ ದೂರವಾಣಿಯಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ ಕೊರೋನಾ ನಿಯಂತ್ರಣ ಕುರಿತು ಚರ್ಚಿಸಿದರು. ವೇಳೆ ಕರ್ನಾಟಕದಲ್ಲಿ ಲಾಕ್‌ಡೌನ್ ಹಾಗೂ ಜನರ ಓಡಾಟದ ಕುರಿತು ಮೋದಿ, ಯಡಿಯೂರಪ್ಪನವರನ್ನು ಪ್ರಶ್ನಿಸಿದ್ದಾರೆ. ಇಷ್ಟೇ ಅಲ್ಲ ಜನರ ಓಡಾಟಕ್ಕೆ ಅವಕಾಶ ಮಾಡಿಕೊಡದಂತೆ ಎಚ್ಚರ ವಹಿಸುವಂತೆ ಸೂಚಿಸಿದ್ದಾರೆ ಎಂದು ಯಡಿಯೂರಪ್ಪ ಸಚಿವ ಸಂಪುಟ ಸಭೆ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸಂಚಿವ ಸಂಪುಟದಲ್ಲಿ ಇಂದಿರಾ ಕ್ಯಾಂಟೀನ್ ಮೂಲಕ ಬಡವರು, ನಿರ್ಗತಿಕರಿಗೆ ಉಚಿತ ಪ್ಯಾಕೆಟ್ ಫುಡ್ ವಿತರಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ರಾಜ್ಯದಲ್ಲಿ ಯಾರೂ ಕೂಡ ಹಸಿವಿನಿಂದ ಇರಬಾರದು ಎಂದಿದ್ದಾರೆ. ಮುಸ್ಲಿಂ ಮುಖಂಡರ ಜೊತೆ ಆರ್ ಅಶೋಕ್ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಇಷ್ಟೇ ಅಲ್ಲ ಮಸೀದಿ ಬದಲು ಮನೆಯಲ್ಲೇ ನಮಾಝ್ ಮಾಡಲು ಒಪ್ಪಿಕೊಂಡಿದ್ದಾರೆ. ಮತ್ತೊಮ್ಮೆ ಮಸ್ಲಿಂ ಮುಖಂಡರ ಜೊತೆ ಚರ್ಚೆ ನಡೆಸುತ್ತೇನೆ. ಇಷ್ಟೇ ಅಲ್ಲ ಸರ್ಕಾರದ ಪರವಾಗಿ ಅಲ್ಪಸಂಖ್ಯಾತರು ಹಾಗೂ ಮುಖಂಡರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಬಿಎಸ್‌ವೈ ಹೇಳಿದ್ದಾರೆ.
ಕೊರೋನಾ ವೈರಸ್ ಪಾಸಿಟಿವ್ ಇದ್ದರೂ ಕೂಡ ಶೇಕಡಾ 98.99 ರ,ಷ್ಟು ಗುಣಮುಖರಾಗುತ್ತಾರೆ. ಆದರೆ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಕೊರೋನಾ ತಗುಲಿದರೆ ಜೀವಕ್ಕೆ ಅಪಾಯ ಎಂದು ಭಾವಿಸಿದ್ದಾರೆ. ಕೊರೋನಾ ಸೋಂಕಿತರನ್ನು ಗುಣಪಡಿಸುವ ಎಲ್ಲಾ ಅವಕಾಶವಿದೆ. ಆದರೆ ವೈರಸ್ ಹರಡದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಬಿಎಸ್‌ವೈ ಹೇಳಿದರು.