ಸಾಮಾನ್ಯ ದಿನದಲ್ಲಿ ಮಾರುದ್ದ ಬಿಲ್ ಮಾಡುವ ಖಾಸಗಿ ಆಸ್ಪತ್ರೆಗೆ ಕೌರವ ವಾರ್ನಿಂಗ್

By Suvarna News  |  First Published Mar 30, 2020, 3:50 PM IST

ಸಾಮಾನ್ಯ ದಿನಗಳಲ್ಲಿ ರೋಗಿಗಳಿಂದ ಸಾವಿರಾರು ರೂಪಾಯಿ ದೋಚುವ ಖಾಸಗಿ ಆಸ್ಪತ್ರೆಗಳು ಇದೀಗ ಕೊರೋನಾ ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಕೆಲ ನಾಟಕಗಳು ಮಾಡುತ್ತಿವೆ. ಇದೀಗ ಇವುಗಳಿಗೆ ಕೃಷಿ ಸಚಿವ ಖಡಕ್ ವಾರ್ನಿಂಗ್ ರವಾನಿಸಿದ್ದಾರೆ. ಏನದು? ಮುಂದೆ ನೋಡಿ.


ಹಾವೇರಿ, (ಮಾ.30): ಮಾರಕ‌ ಕೊರೋನಾ ರೋಗ ಹರಡಿರುವ ಪ್ರಸಕ್ತ ಸಂದರ್ಭದಲ್ಲಿ ಮೆಡಿಕಲ್ ಶಾಪ್‌ಗಳಾಗಲೀ ಖಾಸಗಿ ವೈದ್ಯರು ಆಸ್ಪತ್ರೆಗಳನ್ನಾಗಲೀ ಯಾವುದೇ ಕಾರಣಕ್ಕೂ ಬಂದ್ ಮಾಡಬಾರದು ಎಂದು ಜಿಲ್ಲಾಧಿಕಾರಿಗಳ ಮೂಲಕ ಎಲ್ಲಾ ಖಾಸಗಿ ವೈದ್ಯರಿಗೆ ನೊಟೀಸ್ ನೀಡಲಾಗಿದೆ ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಒಂದು ವೇಳೆ ಸರ್ಕಾರದ ನೊಟೀಸ್‌ಗೂ ಬೆಲೆಕೊಡದೇ ಯಾರಾದರೂ ವೈದ್ಯರು ಆಸ್ಪತ್ರೆ ತೆರೆಯದೇ ಇದ್ದಲ್ಲಿ ಅಂತಹ ವೈದ್ಯರ ಪರವಾನಿಗೆ ರದ್ದುಪಡಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

Tap to resize

Latest Videos

ಕಲಬುರಗಿಯಲ್ಲಿ 11 ದಿನದಿಂದ ಇಲ್ಲ ಹೊಸ ಕೊರೋನಾ ಕೇಸ್‌

ಸೋಮವಾರ ಜಿಲ್ಲೆಯ ಹಾವೇರಿ ನಗರಸಭಾ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆಮಾತನಾಡಿದ ಸಚಿವರು,ಕೊರೋನಾ ಬಗ್ಗೆ ಜಾಗೃತಿ ಮೂಡಿಸುವುದು ಆರೋಗ್ಯದ ದೃಷ್ಟಿಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮಾಡುವುದು  ಆರೋಗ್ಯ,ವೈದ್ಯಕೀಯ, ಗೃಹ ಈ ಇಲಾಖೆಗಳದ್ದಷ್ಟೇ ಕೆಲಸ‌ ಎಂದು ಭಾವಿಸದೇ ಜನರು ಈ ಬಗ್ಗೆ ಸ್ವಯಂಪ್ರೇರಿತರಾಗಿ ಜಾಗೃತರಾಗುವುದು ಮುಖ್ಯ ಎಂದು ಕರೆ ನೀಡಿದರು.

ನಮ್ಮ-ನಮ್ಮ ಮನೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ವದಿಗ್ಬಂಧನ ಹಾಕಿಕೊಳ್ಳುವ ಮೂಲಕ ನಮ್ಮ ಹಾಗೂ ನಮ್ಮ ಕುಟುಂಬದ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಲಾಕ್‌ಡೌನ್‌ ವಿಸ್ತರಣೆ ವದಂತಿ ಅಲ್ಲಗೆಳೆದ ಭಾರತ ಸರ್ಕಾರ!

ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜನರ ಆರೋಗ್ಯ ಕಾಪಾಡಲು ಕಟಿಬದ್ಧರಾಗಿದ್ದು ಜನತೆ ಸಾಮಾಜಿಕ ಅಂತರ ಕಾಯ್ದುಕೊಂಡು ಸಹಕರಿಸಬೇಕು. ಅನಾವಶ್ಯಕ ಮನೆಯಿಂದ ಹೊರಬರದೇ ಅತಿ ಜರೂರು ಇದ್ದಲ್ಲಿ ಮಾತ್ರ‌ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಮನೆಯಿಂದ ಹೊರಬರಬೇಕು ಎಂದು ಮನವಿ ಮಾಡಿದರು.

ಈಗಾಗಲೇ ಅತಿಅವಶ್ಯಕ ವಸ್ತುಗಳಾದ ದಿನಸಿ, ತರಕಾರಿ, ಹಣ್ಣು ಹಂಪಲುಗಳನ್ನು ವಾರ್ಡ್‌ವಾರು ತಳ್ಳುವಗಾಡಿಯ ಮೂಲಕ ಮಾರಲು  ಅನುಕೂಲ ಮಾಡಿಕೊಡಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

click me!