ಕರ್ನಾಟಕದಲ್ಲಿ ಇಂದು (ಬುಧವಾರ) ಮತ್ತೊಂದು ಕೊರೋನಾ ವೈರಸ್ ಪಾಸಿಟಿವ್ ಕೇಸ್ ಪತ್ತೆಯಾಗಿದೆ.ಈ ಮೂಲಕ ಸೋಂಕಿತರ ಸಮಖ್ಯೆ 42ಕ್ಕೆ ಏರಿಕೆಯಾಗಿದೆ.
ಉಡುಪಿ, (ಮಾ.25): ದೇಶದಲ್ಲಿ ಕೊರೋನಾ ವೈರಾಣು ಸೋಂಕಿತರ ಸಂಖ್ಯೆ ಈಜಾಗಲೇ 600 ನ್ನು ಸಮೀಪಿಸುತ್ತಿದೆ. ಮಹಾರಾಷ್ಟ್ರ, ಕೇರಳದಲ್ಲಿ ಅತಿ ಹೆಚ್ಚು ಪ್ರಕರಣಗಳು ಬೆಳಕಿಗೆ ಬರುತ್ತಿದ್ದಂತೆಯೇ ಇತ್ತ ಕರ್ನಾಟಕದಲ್ಲಿ ಕೊರೋನಾದಿಂದ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.
ಇಂದು (ಬುಧವಾರ) ಉಡುಪಿಯಲ್ಲಿ ಮೊದಲು ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 42 ಏರಿಕೆಯಾದತಾಯಿತು.
ಉಡುಪಿ: ಒಂದೇ ದಿನ 25 ಮಂದಿ ಕೊರೋನಾ ಶಂಕಿತರು ಆಸ್ಪತ್ರೆಗೆ
ಮಾರ್ಚ್ 18ರಂದು ದುಬೈನಿಂದ ಬಂದಿದ್ದ 34 ವರ್ಷದ ವ್ಯಕ್ತಿಗೆ ಕೊರೋನಾ ವೈರಸ್ ಸೋಂಕು ತಗುಲಿರುವು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ. DHO ಡಾ.ಸುಧೀರ್ ಚಂದ್ರಸೂಡ ಸ್ಪಷ್ಟಪಡಿಸಿದ್ದಾರೆ.
ಮಾ.23ರಂದು ಈ ವ್ಯಕ್ತಿಗೆ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಈತನನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಪರೀಕ್ಷೆಯ ವರದಿ ಬಂದಿದ್ದು ಕೊರೋನಾ ಇರುವುದು ದೃಢವಾಗಿದೆ ಎಂದು ಡಾ.ಸುಧೀರ್ ಚಂದ್ರಸೂಡ ಮಾಹಿತಿ ನೀಡಿದರು.