ಕೊರೋನಾ ಆತಂಕ: ಸಂಸದರ ನಿಧಿ ಪಿಎಂ ಫಂಡ್‌ಗೆ ಸಿದ್ದರಾಮಯ್ಯ ಆಕ್ರೋಶ

By Kannadaprabha NewsFirst Published Apr 3, 2020, 11:04 AM IST
Highlights

ಸಂಸತ್‌ ಸದಸ್ಯರ ಸ್ವಕ್ಷೇತ್ರದ ಅಭಿವೃದ್ಧಿಗೆ ನೆರವಾಗುವ ಉದ್ದೇಶದಿಂದಲೇ ‘ಸಂಸದರ ಪ್ರದೇಶಾಭಿವೃದ್ಧಿ ನಿಧಿ’ ಸ್ಥಾಪಿಸಲಾಗಿದೆ| ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೀಡಿರುವ ಸೂಚನೆ ಬೇಜವಾಬ್ದಾರಿಯಿಂದ ಕೂಡಿದೆ|

ಬೆಂಗಳೂರು(ಏ.03): ಕೊರೋನಾ ವೈರಸ್‌ ನಿಯಂತ್ರಣಕ್ಕಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ದೇಣಿಗೆ ಕೊಡುವಂತೆ ಸಾರ್ವಜನಿಕರ ಬಳಿ ಬೇಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಬಿಜೆಪಿ ಸಂಸದರು ತಮ್ಮ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ಒಂದು ಕೋಟಿ ರು. ಹಾಗೂ ಒಂದು ಲಕ್ಷ ರು. ವೇತನವನ್ನು ‘ಪಿಎಂ ಕೇರ್‌ ಫಂಡ್‌’ಗೆ ನೀಡಬೇಕೆಂದು ಸೂಚನೆ ನೀಡಿರುವುದಕ್ಕೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಗುರುವಾರ ಸರಣಿ ಟ್ವೀಟ್‌ ಮಾಡಿರುವ ಅವರು, ಸಂಸತ್‌ ಸದಸ್ಯರ ಸ್ವಕ್ಷೇತ್ರದ ಅಭಿವೃದ್ಧಿಗೆ ನೆರವಾಗುವ ಉದ್ದೇಶದಿಂದಲೇ ‘ಸಂಸದರ ಪ್ರದೇಶಾಭಿವೃದ್ಧಿ ನಿಧಿ’ ಸ್ಥಾಪಿಸಲಾಗಿದೆ. ಹೀಗಿರುವಾಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನೀಡಿರುವ ಸೂಚನೆ ಬೇಜವಾಬ್ದಾರಿಯಿಂದ ಕೂಡಿದೆ. 

ಕೊರೋನಾ ವಿರುದ್ಧ ಹೋರಾಟ: ಸಿಎಂ ರಿಲೀಫ್‌ ಫಂಡ್‌ಗೆ ಶಾಸಕರ 600 ಕೋಟಿ ನಿಧಿ

ಬಿಜೆಪಿ ಶಾಸಕರು ಸಹ ತಮ್ಮ ಒಂದು ತಿಂಗಳ ವೇತನವನ್ನು ನೀಡಬೇಕು ಎಂದು ಸೂಚಿಸಿರುವುದು ನಿಯಮಬಾಹಿರ ಹಾಗೂ ಸಂಸದರು ಸ್ವಕ್ಷೇತ್ರದ ಮತದಾರರಿಗೆ ಮಾಡುವ ಅನ್ಯಾಯವಾಗಿದೆ ಎಂದಿದ್ದಾರೆ.
 

click me!