ಲಾಕ್ ಡೌನ್ ಅವಧಿ ಬೇಗನೆ ಮುಗಿಯಲು ಇಷ್ಟು ಮಾಡಿದರೆ ಸಾಕು!

By Suvarna News  |  First Published Mar 30, 2020, 3:53 PM IST

ಲಾಕ್ ಡೌನ್ ಪಾಲನೆ ಪ್ರತಿಯೊಬ್ಬರ ಕರ್ತವ್ಯ/ ಮತ್ತೊಮ್ಮೆ ಮನವಿ ಮಾಡಿಕೊಂಡ ಸಿಎಂ ಯಡಿಯೂರಪ್ಪ/ ರಾಜ್ಯದ ಜನತೆಯಲ್ಲಿ ಸಿಎಂ ಕಳಕಳಿಯ ವಿನಂತಿ/ ಲಾಕ್ ಡೌನ್ ಅವಧಿ ಮುಗಿಯುವುದು ನಿಮ್ಮ ಮೇಲೆ ನಿರ್ಧರಿತವಾಗಿದೆ


ಬೆಂಗಳೂರು(ಮಾ. 30)  ಲಾಕ್ ಡೌನ್ ಸರಿಯಾಗಿ ಪಾಲಿಸಿ ಎಂದು ಜನರಿಗೆ ಬೇಡಿಕೊಂಡಿದ್ದು ಆಯಿತು, ಲಾಠಿ ಬೀಸಿದ್ದು ಆಯಿತು ಆದರೆ ಜನರು ಮಾತ್ರ ಇನ್ನು ಅಲ್ಲಲ್ಲಿ ತಿರುಗಾಡುತ್ತಲೇ ಇದ್ದಾರೆ. ಇದೆಲ್ಲದರ ನಡುವೆ ಸಿಎಂ ಬಿಎಸ್ ಯಡಿಯೂರಪ್ಪ ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ.

ಲಾಕ್‍ಡೌನ್ ಅವಧಿ ಕಟ್ಟುನಿಟ್ಟಿನ ಪಾಲನೆ ಸಿಎಂ ಮನವಿ ಮಾಡಿಕೊಂಡಿದ್ದಾರೆ.  ಕರೋನಾ ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿಯವರು ಕರೆ ಪಾಲಿಸಿ ಎಂದು ಕೇಳಿಕೊಂಡಿದ್ದಾರೆ. ನಾಗರಿಕರ ಪಾಲನೆ ಮೇಲೆ ಲಾಕ್‍ಡೌನ್‍ನ ಅವಧಿ ಅವಲಂಬಿಸಿದೆ.   ಲಾಕ್‍ಡೌನ್‍ಅನ್ನು ನಮ್ಮೆಲ್ಲರ ಒಳಿತಿಗಾಗಿ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಪರಿ ಪರಿಯಾಗಿ ಕೇಳಿಕೊಂಡಿದ್ದಾರೆ.

Tap to resize

Latest Videos

ಕರ್ನಾಟಕದ ಜನತೆ ಶಿಸ್ತಿಗೆ ಮತ್ತು ಕಾನೂನು ಪಾಲನೆಗೆ ಹೆಸರಾದವರು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಾವು ಹೆಚ್ಚು ಶಿಸ್ತು ಪಾಲನೆ ಮಾಡಬೇಕಾಗಿರುತ್ತದೆ. ಕರೋನಾ ವೈರಸ್ ನಮ್ಮ ತಾಳ್ಮೆಯನ್ನು ಪರೀಕ್ಷಿಸಲೆಂದೇ ಬಂದ ಒಂದು ವಿಪತ್ತು ಎಂದು ಭಾವಿಸಿದ್ದೇನೆ.  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ 21 ದಿನಗಳ ಕಾಲ ಲಾಕ್‍ಡೌನ್ ಅನಿವಾರ್ಯಕ್ಕೆ   ಇಡೀ ದೇಶದ ಜನತೆಯ ಕ್ಷಮೆಯನ್ನು ಕೇಳಿದ್ದಾರೆ. ಒಬ್ಬ ಪ್ರಧಾನಮಂತ್ರಿ ದೇಶದ ಜನತೆಯ ಕ್ಷಮೆ ಕೇಳುವ ಅನಿವಾರ್ಯತೆ ಇದೆಯೆಂದರೆ ಪರಿಸ್ಥಿತಿಯ ಗಂಭೀರತೆ ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದಿದ್ದಾರೆ

ಪೊಲೀಸರಿಗೆ 14 ಸೂಚನೆ ನೀಡಿದ ಕಮಿಷನರ್

ದೇಶಕ್ಕೆ ಯಾಕೆ ಜಗತ್ತಿನ ಇತಿಹಾಸದಲ್ಲಿಯೇ ಇಂತಹ ಪರಿಸ್ಥಿತಿ ಬಂದಿರಲಿಲ್ಲ.  ಈಗ ಇಂತಹ ಪರಿಸ್ಥಿತಿ ಬಂದಿದೆ ಎಂದರೆ ಅದನ್ನು ನಾವು ಎದುರಿಸಲೇಬೇಕಾಗಿದೆ. ದೇಶದ ಆರ್ಥಿಕ ಪರಿಸ್ಥಿತಿಯ ಮೇಲೆ ತೀವ್ರತರವಾದ ಪರಿಣಾಮ ಈ ವೈರಾಣು ಬೀರಲಿದೆ ಎಂದು ಗೊತ್ತಿದ್ದರೂ ದೇಶವನ್ನು ಲಾಕ್‍ಡೌನ್ ಮಾಡುವಂತಹ ಕಠಿಣ ನಿರ್ಧಾರ ತೆಗೆದುಕೊಂಡಿದ್ದು ದೇಶದ ಜನತೆಯ ಹಿತದೃಷ್ಟಿಯಿಂದಲೇ ಹೊರತು ಯಾವುದೇ ಸ್ವಹಿತಾಸಕ್ತಿಯಿಂದಲ್ಲ ಎಂಬುದನ್ನು ಮನಗಾಣಬೇಕಿದೆ ಎಂದಿದ್ದಾರೆ.

ಅಭಿವೃದ್ಧಿ ಹೊಂದಿದ ದೇಶಗಳ ಸಾಧನೆ ಕೋವಿಡ್-19 ನ್ನು ನಿಯಂತ್ರಿಸುವಲ್ಲಿ ಶೋಚನೀಯವಾಗಿರುವಾಗ  ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮುನ್ನೆಚ್ಚರಿಕೆ ಕ್ರಮಗಳು ಫಲಿತಾಂಶವನ್ನು ನೀಡುತ್ತಿವೆ.

ದೇಶವು ಅವರ ಮತ್ತು ಅವರ ದೂರದೃಷ್ಟಿಯ ಬಗ್ಗೆ ಹೆಮ್ಮೆ ಪಡುವಂತೆ ಮಾಡುತ್ತಿದೆ.ನ ನಾವು ಅವರ ಕೆಲಸದ ಬಗ್ಗೆ ಮೆಚ್ಚುಗೆ ಮತ್ತು ಹೆಮ್ಮೆ ಪಡುವುದು ಮಾತ್ರವಲ್ಲದೇ ಅವರ ಆಜ್ಞೆಯನ್ನು ಪಾಲಿಸುವಲ್ಲಿ ನಮ್ಮ ಗೌರವ ಅಡಗಿದೆ. ಜಾಗೃತ ನಾಗರಿಕರಾದ ನಾವೆಲ್ಲ ಪ್ರಧಾನಮಂತ್ರಿಯವರ ಈ ದಿಟ್ಟ ನಿಲುವನ್ನು ಮತ್ತು ನಿರ್ಧಾರವನ್ನು ಬೆಂಬಲಿಸಬೇಕಾಗಿದೆ ಎಂದು ಕೇಳಿಕೊಂಡಿದ್ದಾರೆ.

ಮಾಸ್ಕ್ ಧರಿಸಿಯೇ ಸಪ್ತಪದಿ ತುಳಿದ ಜೋಡಿ, ಹತ್ತೇ ಹತ್ತು ಮಂದಿ ಭಾಗಿ!

ರಾಜ್ಯದಲ್ಲಿ ಕರ್ಫ್ಯೂ  ಜಾರಿಯಲ್ಲಿದೆ.  ಆದರೆ ಕೆಲವು ನಗರ ಪ್ರದೇಶಗಳಲ್ಲಿನ ಜನತೆ  ಆದೇಶ ಧಿಕ್ಕರಿಸಿ ರಸ್ತೆಗಳಲ್ಲಿ ಓಡಾಡುವುದು ಮಾಡುತ್ತಿದ್ದಾರೆ.   ಈ ಸಮಯದಲ್ಲಿ ನನ್ನ ಕಳಕಳಿಯ ಮನವಿ ಏನೆಂದರೆ, ಎಲ್ಲರೂ ಪ್ರಧಾನಿ ನರೇಂದ್ರ ಮೋದಿಯವರ ಕರೆಗೆ ಬೆಲೆ ಕೊಡಿ ಮತ್ತು ಲಾಕ್‍ಡೌನ್ ಪಾಲಿಸಿ.  ಪೊಲೀಸರು ಕೂಡ ನಿಮ್ಮ ಹಿತವನ್ನೇ ಬಯಸುವವರು. ಅವರೇನು ನಿಮ್ಮ ವೈರಿಗಳಲ್ಲ.  ಪೊಲೀಸರಿಗೆ ಅನಿವಾರ್ಯತೆಯನ್ನು ಸೃಷ್ಟಿಸಬೇಡಿ. ಇನ್ನೂ 16 ದಿನಗಳು ನಿಮ್ಮ ಮನೆಯಲ್ಲಿಯೇ ಇರಿ.   ಮನೆಯವರೊಂದಿಗೆ ಕಾಲ ಕಳೆಯಲು ನಿಮಗೆ ಒದಗಿ ಬಂದ ಒಂದು ಸದಾವಕಾಶ ಎಂದು ಭಾವಿಸಿ. ನೀವು ಎಷ್ಟು ಮನೆಯ ಒಳಗಡೆ ಇರುತ್ತೀರೋ ಅದರಿಂದ ನಿಮಗೆ ಮತ್ತು ದೇಶಕ್ಕೆ ಒಳ್ಳೆಯದಾಗುತ್ತದೆ ಎಂದು ತಿಳಿಸಿದ್ದಾರೆ

 ಪುಸ್ತಕಗಳನ್ನು ಓದಿರಿ ಬಡವರು ಕೂಡ ನೀವಿದ್ದ ಸ್ಥಳದಲ್ಲಿಯೇ ಸಕಾರಾತ್ಮಕ ಸದಾಕಾಲ ಚಟುವಟಿಕೆಗಳಲ್ಲಿ ಕಾಲ ಕಳೆಯಿರಿ. ಈ ಸಂದರ್ಭದಲ್ಲಿ ಕೊರೋನಾ ವೈರಸ್ ಪೀಡಿತ ನೂರಾರು ಜನರ ಪ್ರಾಣ ಉಳಿಸಲು ಸತತವಾಗಿ ಕೆಲಸದಲ್ಲಿ ತೊಡಗಿರುವ ವೈದ್ಯರು, ದಾದಿಯರು,  ಆರೋಗ್ಯ ಸಿಬ್ಬಂದಿ ಮತ್ತು ನಾಗರಿಕ ಸೇವೆಯಲ್ಲಿ ತೊಡಗಿರುವ ಸಾವಿರಾರು ಕಾರ್ಯಕರ್ತರಿಗೆ ನಾವುಗಳು ನೈತಿಕ ಬೆಂಬಲ ವ್ಯಕ್ತಪಡಿಸಿ ಅವರಿಗೆ ಮನೋಸ್ಥೈರ್ಯ ಕುಗ್ಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ.  ಲಾಕ್‍ಡೌನ್ ಬೇಗ ಮುಗಿಯಲು ಕಟ್ಟುನಿಟ್ಟಿನ ಪಾಲನೆ ಅಗತ್ಯ. ನಿಮ್ಮ ಆಹಾರ, ಊಟಕ್ಕೆ ತೊಂದೆರೆಯಾಗದಂತೆ ಸರಕಾರ ಎಚ್ಚರವಹಿಸಿದೆ.

ನೀವು ಎಷ್ಟು ಕಟ್ಟುನಿಟ್ಟಿನಿಂದ ಮನೆಯಲ್ಲಿ ಇರುವುದನ್ನು ಪಾಲಿಸುತ್ತೀರೋ ಅಷ್ಟು ಬೇಗ ಅಂದರೆ ಏಪ್ರಿಲ್-14 ಕ್ಕೆ ಲಾಕ್‍ಡೌನ್ ಮುಗಿಯುವುದು. ಲಾಕ್‍ಡೌನ್ ಪರಿಸ್ಥಿತಿ ನಿಮ್ಮ ಕರ್ಫ್ಯೂ  ಪಾಲನೆ ಮೇಲೆ ಅವಲಂಬಿತವಾಗಿದೆ. ಲಾಕ್ ಡೌನ್ ಸರಿಯಾಗಿ ಪಾಲನೆ ಮಾಡಿ ಎಂದು ಮತ್ತೊಮ್ಮೆ ಮನವಿ ಮಾಡಿಕೊಂಡಿದ್ದಾರೆ.

click me!