‘ವಲಸೆ ಕಾರ್ಮಿಕರಿಗೆ ಕಲ್ಯಾಣ ಮಂಟಪಗಳಲ್ಲಿ ವಸತಿ’

By Kannadaprabha NewsFirst Published Mar 31, 2020, 11:02 AM IST
Highlights

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ವಲಸೆ ಕಾರ್ಮಿಕರನ್ನು ಕಲ್ಯಾಣ ಮಂಟಪಗಳಲ್ಲಿ ಇರಿಸಿ ಊಟದ ವ್ಯವಸ್ಥೆ ಮಾಡಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು(ಮಾ.31): ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ವಲಸೆ ಕಾರ್ಮಿಕರನ್ನು ಕಲ್ಯಾಣ ಮಂಟಪಗಳಲ್ಲಿ ಇರಿಸಿ ಊಟದ ವ್ಯವಸ್ಥೆ ಮಾಡಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಾಗರಿಕರು ಸ್ಥಳೀಯವಾಗಿಯೇ ದಿನಸಿ ಹಾಗೂ ತರಕಾರಿ ಖರೀದಿಸಬೇಕು. ವಾಹನಗಳನ್ನು ಬಿಟ್ಟು ಕಾಲ್ನಡಿಗೆಯಲ್ಲಿ ಬಂದು ಖರೀದಿಸಬೇಕು. ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

1 ಲಕ್ಷ ತುರ್ತು ಪಾಸ್‌ ವಿತರಣೆ? ವೈಯಕ್ತಿಕ ಪಾಸ್‌ಗೆ ಅವಕಾಶವಿಲ್ಲ

ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿಯೂ ಸಾಕಷ್ಟುವಲಸೆ ಕಾರ್ಮಿಕರು ಇದ್ದಾರೆ. ಈ ವಲಸೆ ಕಾರ್ಮಿಕರು ಬೇರೆಡೆ ಹೋಗುವುದರಿಂದ ಸಮಸ್ಯೆಯಾಗುತ್ತದೆ. ಹೀಗಾಗಿ ಇವರು ಇರುವ ಸ್ಥಳಗಳಲ್ಲೇ ಇರಿಸಲು ಹೊಸ ಮಾರ್ಗಸೂಚಿ ರಚಿಸಲಾಗಿದೆ. ಬೆಂಗಳೂರಿನ ಕಲ್ಯಾಣ ಮಂಟಪಗಳಲ್ಲಿ ಈ ವಲಸೆ ಕಾರ್ಮಿಕರನ್ನು ಇರಿಸಲಾಗುತ್ತದೆ. ಜೊತೆಗೆ ಅವರಿಗೆ ಅಗತ್ಯ ಊಟ, ರೇಷನ್‌ ಒದಗಿಸಲು ತೀರ್ಮಾನಿಸಲಾಗಿದೆ. ಈ ವ್ಯವಸ್ಥೆ ಕಲ್ಪಿಸಲು ಬಿಬಿಎಂಪಿಗೆ ಜವಾಬ್ದಾರಿ ವಹಿಸಲಾಗಿದೆ. ಪೊಲೀಸರಿಗೆ ಕಾನೂನು ಮತ್ತು ಸುವ್ಯವಸ್ಥೆ ಜವಾಬ್ದಾರಿ ನೀಡಲಾಗಿದೆ ಎಂದರು.

ಸರ್ಕಾರಿ ನೌಕರರು, ಶಾಸಕರ ವೇತನ ಅರ್ಧಕ್ಕರ್ಧ ಕತ್ತರಿ!

ಇನ್ನು ಜಿಲ್ಲೆಗಳಲ್ಲಿ ವಲಸೆ ಕಾರ್ಮಿಕರಿಗೆ ಕಲ್ಯಾಣ ಮಂಟಪದಲ್ಲಿ ವಸತಿ ಹಾಗೂ ಊಟದ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಅದರಂತೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

click me!