ಕೊರೋನಾ ರೋಗಿಗಳ ಚಿಕಿತ್ಸೆಗೆ ಮಾಜಿ ಸಿಎಂ ಪುತ್ರ..! ವೈಟ್‌ಕೊಟ್ ಹಾಕ್ತಾರಾ ಯತೀಂದ್ರ ಸಿದ್ದರಾಮಯ್ಯ..?

By Kannadaprabha NewsFirst Published Apr 3, 2020, 8:01 AM IST
Highlights

ಕೊರೋನಾ ವೈರಾಣು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯಬಿದ್ದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯನಾಗಿ ಸೇವೆ ಸಲ್ಲಿಸಲು ನಾನು ಸಿದ್ಧನಿದ್ದೇನೆ ಎಂದು ಸ್ವತಃ ವೈದ್ಯರೂ ಆಗಿರುವ ಕಾಂಗ್ರೆಸ್‌ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರು(ಏ.03): ಕೊರೋನಾ ವೈರಾಣು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯಬಿದ್ದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯನಾಗಿ ಸೇವೆ ಸಲ್ಲಿಸಲು ನಾನು ಸಿದ್ಧನಿದ್ದೇನೆ ಎಂದು ಸ್ವತಃ ವೈದ್ಯರೂ ಆಗಿರುವ ಕಾಂಗ್ರೆಸ್‌ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಸಂಬಂಧ ಗುರುವಾರ ಟ್ವೀಟ್‌ ಮಾಡಿರುವ ಅವರು, ಕೊರೋನಾ ವೈರಾಣು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಕ್ಕೆ ವೈದರ ಅಗತ್ಯವಿದ್ದರೆ ನಾನು ಕೂಡ ಒಬ್ಬ ವೈದ್ಯನಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

ಕೊರೋನಾ ಭೀತಿ: ನಾವ್‌ ಶವ​ಸಂಸ್ಕಾ​ರ ಮಾಡಲ್ಲ ಎಂದ ಮನೆ​ಯ​ವರು!

ಬೆಂಗಳೂರು ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಎಂಬಿಬಿಎಸ್‌ ಮಾಡಿರುವ ಡಾ.ಯತೀಂದ್ರ ಸಿದ್ದರಾಮಯ್ಯ ಕೆಎಲ್‌ಇ ವಿಶ್ವವಿದ್ಯಾಲಯದಲ್ಲಿ ಎಂ.ಡಿ. ಮಾಡಿದ್ದಾರೆ. ಹಲವು ವರ್ಷಗಳ ಕಾಲ ಪೆಥಾಲಜಿಸ್ಟ್‌ ವೈದ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಮುಖ್ಯವಾಗಿ ರೋಗಿಗಳ ವೈದ್ಯಕೀಯ ಪರೀಕ್ಷೆ ನಡೆಸುವ ಕಾರ್ಯ ಮಾಡುತ್ತಿದ್ದ ಅವರು ಸ್ನೇಹಿತರ ಜೊತೆಗೂಡಿ ವಿಕ್ಟೋರಿಯಾ ಆವರಣದಲ್ಲಿರುವ ಪಿಎಂಎಸ್‌ಎಸ್‌ವೈ ಆಸ್ಪತ್ರೆಯಲ್ಲಿ ಈಗಾಗಲೇ ಕಡಿಮೆ ದರದಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಕೊಡುವ ಪ್ರಯೋಗಾಲಯ ಸ್ಥಾಪಿಸಿದ್ದಾರೆ.

ಬ್ಯಾನರ್ ಕಲಾವಿದನ ಸಂಕಷ್ಟಕ್ಕೆ ಸ್ಪಂದಿಸಿದ 'ರಾಜಕುಮಾರ'

ಇದೀಗ ಕೊರೋನಾ ಸೋಂಕು ಪರೀಕ್ಷೆಗೆ ರಾಜ್ಯದಲ್ಲಿ ಪ್ರಯೋಗಾಲಯಗಳ ಕೊರತೆ ಇದೆ. ಅಲ್ಲದೆ, ಇರುವ ಆರು ಸರ್ಕಾರಿ ಪ್ರಯೋಗಾಲಯಗಳಲ್ಲೂ ತಜ್ಞ ಪ್ರಯೋಗಾಲಯ ವೈದ್ಯರ ಕೊರತೆ ಇದೆ. ಮುಂದಿನ ದಿನಗಳಲ್ಲಿ ಕೊರೋನಾ ಹರಡುವ ಪ್ರಮಾಣ ಹೆಚ್ಚಾದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯನಾಗಿ ಚಿಕಿತ್ಸೆ ನೀಡುವುದಾಗಿ ಯತೀಂದ್ರ ಘೋಷಿಸಿದ್ದಾರೆ. ಹೀಗಾಗಿ ಒಂದು ವೇಳೆ ಯತೀಂದ್ರ ಸೇವೆಗೆ ಹಾಜರಾದರೆ ರೋಗಿಯ ತಪಾಸಣೆ ಹಾಗೂ ವೈದ್ಯಕೀಯ ಪರೀಕ್ಷೆಗಳಿಗೂ ನೆರವಾಗಬಹುದು.

click me!