ಭಾರತ್‌ ಲಾಕ್‌ಡೌನ್‌: 'ವಲಸೆ ಕಾರ್ಮಿಕರಿಗೆ ತಾತ್ಕಾಲಿಕ ವಸತಿ, ಊಟದ ವ್ಯವಸ್ಥೆ'

By Kannadaprabha News  |  First Published Apr 2, 2020, 7:46 AM IST

480 ಅಸಂಘಟಿತ ಹಾಗೂ ವಲಸೆ ಕಾರ್ಮಿಕರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸಿ ಊಟ, ಉಪಹಾರದ ವ್ಯವಸ್ಥೆ| ಹಾವೇರಿ ಉಪ ವಿಭಾಗದಲ್ಲಿ 366 ಜನರಿಗೆ ಹಾಗೂ ಸವಣೂರು ಉಪ ವಿಭಾಗದಲ್ಲಿ 68 ಜನರಿಗೆ ವ್ಯವಸ್ಥೆ| 


ಹಾವೇರಿ(ಏ.02): ಅಸಂಘಟಿತ ಕಾರ್ಮಿಕರು, ವಲಸೆ ಕಾರ್ಮಿಕರಿಗೆ ಊಟ ಮತ್ತು ವಸತಿ ಸಮಸ್ಯೆ ಉಂಟಾದಲ್ಲಿ ಜಿಲ್ಲಾಡಳಿತದ ಸಹಾಯವಾಣಿಗೆ ಸಂಪರ್ಕಿಸಿ ಮಾಹಿತಿ ನೀಡಿದರೆ ಅಗತ್ಯ ವ್ಯವಸ್ಥೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಯೋಗೇಶ್ವರ ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 480 ಅಸಂಘಟಿತ ಹಾಗೂ ವಲಸೆ ಕಾರ್ಮಿಕರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸಿ ಊಟ, ಉಪಹಾರದ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿಯನ್ನು ನೋಡಲ್‌ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ. ವಲಸೆ ಕಾರ್ಮಿಕರು ಹಾಗೂ ಸ್ಥಳೀಯವಾಗಿ ಹೋಟೆಲ್‌, ಪಾನ್‌ಶಾಪ್‌, ಸಣ್ಣ ಸಣ್ಣ ಗೂಡಂಗಡಿಗಳಲ್ಲಿ ಕೆಲಸ ಮಾಡಲು ಬೇರೆ ಜಿಲ್ಲೆ ಮತ್ತು ರಾಜ್ಯಗಳಿಂದ ವಲಸೆ ಬಂದು ಇಲ್ಲೆ ಉಳಿದಿರುವ ಕಾರ್ಮಿಕರಿಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Tap to resize

Latest Videos

ಕೊರೋನಾ ಭೀತಿ: ಗರ್ಭಿಣಿಯಾದ್ರೂ ಬಿಡದ ಕೆಲಸ, ವಾಹನ ಸವಾರರಿಗೆ ಬಿಸಿ ಮುಟ್ಟಿಸುತ್ತಿರುವ ಪಿಎಸ್‌ಐ

ಹಾವೇರಿ ಉಪ ವಿಭಾಗದಲ್ಲಿ 366 ಜನರಿಗೆ ಹಾಗೂ ಸವಣೂರು ಉಪ ವಿಭಾಗದಲ್ಲಿ 68 ಜನರಿಗೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಕೆಲಸಮಾಡುತ್ತಿದ್ದ ಮಹಾರಾಷ್ಟ್ರದ ಕಾರ್ಮಿಕರು ಹುಬ್ಬಳ್ಳಿಯಲ್ಲಿ ಸಿಲುಕಿ ಬೆಂಗಳೂರಿಗೆ ಹಿಂತಿರುಗುತ್ತಿರುವ ಸಂದರ್ಭದಲ್ಲಿ ಸವಣೂರಿನಲ್ಲಿ ಮಂಗಳವಾರ ಬೆಳಗ್ಗೆ ಪತ್ತೆಮಾಡಿ 44 ಜನರನ್ನು ಸವಣೂರಿನ ಸಮಾಜ ಕಲ್ಯಾಣ ಇಲಾಖೆಯ ಬಾಲಕಿಯರ ವಸತಿ ನಿಲಯದಲ್ಲಿ ಉಳಿಸಿ ಊಟದ ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಒಟ್ಟಾರೆ 480 ಕಾರ್ಮಿಕರಿಗೆ ಜಿಲ್ಲೆಯಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ವಲಸೆ ಕಾರ್ಮಿಕರಿಗೆ ಊಟ ಮತ್ತು ವಸತಿಯ ಸಮಸ್ಯೆ ಉಂಟಾದಲ್ಲಿ ಜಿಲ್ಲಾಡಳಿತದ ಸ್ಥಾಪಿಸಿರುವ ನಿಯಂತ್ರಣ ಕೊಠಡಿಗೆ ಸಂಪರ್ಕಿಸಿ ಉಚಿತ ಸಹಾಯವಾಣಿ ಸಂಖ್ಯೆ: 08375-249102, 249103/249104 ಮಾಹಿತಿ ನೀಡಲು ತಿಳಿಸಿದ್ದಾರೆ.
 

click me!