ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ಬಣಕಲ್ ಪೊಲೀಸರು ಕ್ರಮ ಕೈಗೊಂಡಿದ್ದು ಕೇರಳ, ಮಂಗಳೂರು ಕಡೆಯಿಂದ ಚಿಕ್ಕಮಗಳೂರು ಜಿಲ್ಲೆಗೆ ಬರುವ ವಾಹನಗಳನ್ನು ಕಡ್ಡಾಯವಾಗಿ ಸ್ವಚ್ಚಗೊಳಿಸಲು ವ್ಯವಸ್ಥೆ ಕಲ್ಪಿಸಿದ್ದು, ವಾಹನ ಸವಾರರು ವಾಹನ ಸ್ವಚ್ಚಗೊಳಿಸಿ ಜಿಲ್ಲೆಯನ್ನು ಪ್ರವೇಶಿಸುವಂತೆ ಪೊಲೀಸರು ಸೂಚಿಸಿದ್ದಾರೆ.
ಚಿಕ್ಕಮಗಳೂರು(ಏ.05): ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ಬಣಕಲ್ ಪೊಲೀಸರು ಕ್ರಮ ಕೈಗೊಂಡಿದ್ದು ಕೇರಳ, ಮಂಗಳೂರು ಕಡೆಯಿಂದ ಚಿಕ್ಕಮಗಳೂರು ಜಿಲ್ಲೆಗೆ ಬರುವ ವಾಹನಗಳನ್ನು ಕಡ್ಡಾಯವಾಗಿ ಸ್ವಚ್ಚಗೊಳಿಸಲು ವ್ಯವಸ್ಥೆ ಕಲ್ಪಿಸಿದ್ದು, ವಾಹನ ಸವಾರರು ವಾಹನ ಸ್ವಚ್ಚಗೊಳಿಸಿ ಜಿಲ್ಲೆಯನ್ನು ಪ್ರವೇಶಿಸುವಂತೆ ಪೊಲೀಸರು ಸೂಚಿಸಿದ್ದಾರೆ.
ಬಣಕಲ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಶ್ರೀನಾಥ್ ರೆಡ್ಡಿ ಮಾತನಾಡಿ, ಮಂಗಳೂರು, ಉಡುಪಿ, ಕೇರಳ ಭಾಗದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಆ ಭಾಗದಿಂದ ಚಿಕ್ಕಮಗಳೂರು ಕಡೆಗೆ ಬರುವ ಪ್ರಯಾಣಿಕರಿಂದ ಕೊರೋನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ.
ಮಾಜಿ ಸಚಿವ ರೇವಣ್ಣಗೆ ಕ್ಯಾಂಡಲ್ಸ್ ಕಳಿಸಿದ ಬಿಜೆಪಿ
ಇದರುವುದರಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ ಅವರ ಮಾರ್ಗರ್ಶನದಂತೆ ಮುಂಜಾಗೃತಾ ಕ್ರಮವಾಗಿ ಚಾರ್ಮಾಡಿ ಘಾಟ್ ಮಾರ್ಗವಾಗಿ ಚಿಕ್ಕಮಗಳೂರಿಗೆ ಬರುವ ಪ್ರಯಾಣಿಕರು ತಮ್ಮ ವಾಹನಗಳನ್ನು ತೊಳೆಯಲು ವ್ಯವಸ್ಥೆ ಕಲ್ಪಿಸಲಾಗಿದೆ. ಚಾರ್ಮಾಡಿ ಘಾಟ್‌ನ ಅಣ್ಣಪ್ಪಸ್ವಾಮಿ ದೇವಸ್ಥಾನದ ಬಳಿ ನೀರಿನ ವ್ಯವಸ್ಥೆ ಹಾಗೂ ಸ್ಯಾನಿಟೈಜರ್ ಹಾಗೂ ಸೋಪಿನ ವ್ಯವಸ್ಥೆ ಮಾಡಿದ್ದೇವೆ.
ರಾತ್ರಿವೇಳೆ ಏಕಲವ್ಯ ಶಾಲೆಯ ಬಳಿ ವಾಹನಗಳನ್ನು ತೊಳೆಯುವುದು ಮಾತ್ರವಲ್ಲದೇ ವಾಹನ ಸವಾರರು ಕೈ- ಕಾಲುಗಳನ್ನು ತೊಳೆದುಕೊಂಡು ಬರಲು ತಿಳಿಸಲಾಗಿದೆ. ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರನ್ನು ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.