ಬೆಂಗಳೂರು ನಗರದಲ್ಲಿ 18 ಮತ್ತು ಮೈಸೂರಿನಲ್ಲಿ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಉಳಿದ 29 ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿಲ್ಲ. ರಾಜ್ಯದಲ್ಲಿ ಈವರೆಗೆ 40.71 ಲಕ್ಷ ಮಂದಿಯಲ್ಲಿ ಸೋಂಕು ದಾಖಲಾಗಿದ್ದು, 40.29 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. 40,264 ಮಂದಿ ಮರಣವನ್ನಪ್ಪಿದ್ದಾರೆ. 1,499 ಮಂದಿಯಲ್ಲಿ ಸೋಂಕು ಸಕ್ರಿಯವಾಗಿದೆ.
ಬೆಂಗಳೂರು(ಡಿ.10): ರಾಜ್ಯದಲ್ಲಿ ಶುಕ್ರವಾರ 20 ಮಂದಿಯಲ್ಲಿ ಕೋವಿಡ್-19 ದೃಢಪಟ್ಟಿದೆ. ಸೋಂಕಿತರ ಮರಣ ವರದಿಯಾಗಿಲ್ಲ. 147 ಮಂದಿ ಚೇತರಿಸಿಕೊಂಡಿದ್ದಾರೆ. 3,972 ಮಂದಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ಶೇ.0.50 ಪಾಸಿಟಿವಿಟಿ ದರ ದಾಖಲಾಗಿದೆ.
ಬೆಂಗಳೂರು ನಗರದಲ್ಲಿ 18 ಮತ್ತು ಮೈಸೂರಿನಲ್ಲಿ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಉಳಿದ 29 ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿಲ್ಲ. ರಾಜ್ಯದಲ್ಲಿ ಈವರೆಗೆ 40.71 ಲಕ್ಷ ಮಂದಿಯಲ್ಲಿ ಸೋಂಕು ದಾಖಲಾಗಿದ್ದು, 40.29 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. 40,264 ಮಂದಿ ಮರಣವನ್ನಪ್ಪಿದ್ದಾರೆ. 1,499 ಮಂದಿಯಲ್ಲಿ ಸೋಂಕು ಸಕ್ರಿಯವಾಗಿದೆ.
undefined
ನವೆಂಬರಲ್ಲಿ ಕೇವಲ 4 ಕೋವಿಡ್ ಸಾವು: ಕರ್ನಾಟಕದಲ್ಲಿ ಅತೀ ಕನಿಷ್ಠ
ಲಸಿಕೆ ಅಭಿಯಾನ:
ರಾಜ್ಯದಲ್ಲಿ ಶುಕ್ರವಾರ 2,722 ಮಂದಿ ಕೋವಿಡ್ ವಿರುದ್ಧ ಲಸಿಕೆ ಪಡೆದಿದ್ದಾರೆ. 2,054 ಮಂದಿ ಮುನ್ನೆಚ್ಚರಿಕೆ ಲಸಿಕೆ, 615 ಮಂದಿ ಎರಡನೇ ಡೋಸ್ ಮತ್ತು 53 ಮಂದಿ ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ. ಈವರೆಗೆ ಒಟ್ಟು 12.07 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.