ಬುಧವಾರ ರಾಜ್ಯದಲ್ಲಿ ನಾಲ್ವರಲ್ಲಿ ಕೊರೋನಾ ಸೋಂಕು ಪ್ರಕರಣ ದೃಢಪಟ್ಟಿದೆ. ಸೋಂಕಿನಿಂದ ಮೂವರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 2,228 ಜನರಿಗೆ ಕೊರೋನಾ ಪರೀಕ್ಷೆ ನಡೆಸಿದ್ದು, 8 ಸಕ್ರಿಯ ಸೋಂಕಿತರು ಮನೆ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು(ಆ.31): ರಾಜ್ಯದಲ್ಲಿ ಐದು ತಿಂಗಳ ಬಳಿಕ ಮತ್ತೆ ಕೊರೋನಾ ಸೋಂಕಿನಿಂದ ಮೃತಪಟ್ಟವರದಿಯಾಗಿದೆ. ಕಳೆದ ಮಾ.9 ರಂದು ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟ ವರದಿಯಾಗಿತ್ತು. ಇದೀಗ ಬೆಂಗಳೂರಿನ 94 ವರ್ಷದ ವೃದ್ಧ ಮೃತಪಟ್ಟಿದ್ದಾರೆ.
ಕಳೆದ ಆ.26 ರಂದು ಜ್ವರದಿಂದ ಬಳಲುತ್ತಿದ್ದ ಸೋಂಕಿತ ವೃದ್ಧರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆ.29ರ ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
undefined
ಕೋವಿಡ್ ಉಪಕರಣ ಖರೀದಿ ಕುರಿತು ತನಿಖೆ: ಸಚಿವ ದಿನೇಶ್ ಗುಂಡೂರಾವ್
ಬುಧವಾರ ರಾಜ್ಯದಲ್ಲಿ ನಾಲ್ವರಲ್ಲಿ ಕೊರೋನಾ ಸೋಂಕು ಪ್ರಕರಣ ದೃಢಪಟ್ಟಿದೆ. ಸೋಂಕಿನಿಂದ ಮೂವರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 2,228 ಜನರಿಗೆ ಕೊರೋನಾ ಪರೀಕ್ಷೆ ನಡೆಸಿದ್ದು, 8 ಸಕ್ರಿಯ ಸೋಂಕಿತರು ಮನೆ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ನಾಲ್ಕು ಪ್ರಕರಣ ದಾಖಲಾಗಿದೆ. ಉಳಿದ ಜಿಲ್ಲೆಯಲ್ಲಿ ಯಾವುದೇ ಸೋಂಕು ಪ್ರಕರಣ ದಾಖಲಾಗಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.