ಜನರಿಗೆ ಸರ್ಕಾರದ ಮೇಲೆ ನಂಬಿಕೆ ಬರಬೇಕು. ಹೀಗಾಗಿ, ರಾಜ್ಯವ್ಯಾಪಿ ಮಾಕ್ ಡ್ರಿಲ್ ಮಾಡಲಾಗುತ್ತಿದೆ. ಜನಜಂಗುಳಿ ಪ್ರದೇಶದಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಗರ್ಭಿಣಿಯರು ಹಾಗೂ ಚಿಕ್ಕಮಕ್ಕಳು ಎಚ್ಚರದಿಂದ ಇರಬೇಕು ಎಂದ ಸಚಿವ ಸುಧಾಕರ
ಬೆಳಗಾವಿ(ಡಿ.28): ರೂಪಾಂತರಿ ಕೊರೋನಾ ತಳಿಯ ಬಗ್ಗೆ ರಾಜ್ಯ ಸರ್ಕಾರ ಎಚ್ಚರಿಕೆ ವಹಿಸಿದ್ದು, ರಾಜ್ಯಾದ್ಯಂತ ಜಿಲ್ಲಾ, ತಾಲೂಕು ಆಸ್ಪತ್ರೆ, ಆರೋಗ್ಯ ಇಲಾಖೆಗೆ ಒಳಪಡುವ ಎಲ್ಲ ಆಸ್ಪತ್ರೆಗಳಲ್ಲಿ ಪೂರ್ವ ತಯಾರಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯವ್ಯಾಪಿ ಮಾಕ್ ಡ್ರಿಲ್ ಮಾಡಲಾಗುವುದು. ಹುಬ್ಬಳ್ಳಿಯ ಕಿಮ್ಸ್ ಹಾಗೂ ಬೆಳಗಾವಿಯ ಜಿಲ್ಲೆಯ ಒಂದು ಆಸ್ಪತ್ರೆಗೆ ನಾನೇ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ. ಯಾವುದೇ ಕಠಿಣ ಸಂದರ್ಭ ಎದುರಾದರೂ ಆರೋಗ್ಯ ಇಲಾಖೆ ಸಿದ್ಧವಾಗಿದೆ. ಆಯಾ ವಿಭಾಗದ ಆರೋಗ್ಯ ಅಧಿಕಾರಿಗಳು ಅಲ್ಲಿರುವ ಸಂಸ್ಥೆಗಳನ್ನು ಪರಿಶೀಲನೆ ಮಾಡುತ್ತಾರೆ. ಎಲ್ಲ ಸಿದ್ಧತೆಗಳ ಬಗ್ಗೆ ಹಿರಿಯ ಅಧಿಕಾರಿಗಳು ನನಗೆ ವರದಿ ನೀಡುತ್ತಾರೆ. ಯಾರಾದರೂ ಸೋಂಕಿತರು ಬಂದರೆ ಅವರನ್ನು ಗುಣಪಡಿಸಲು ನಮ್ಮ ಸರ್ಕಾರ ಸಿದ್ಧವಾಗಿದೆ ಎಂದರು.
ವಿದೇಶದಿಂದ ಕರ್ನಾಟಕಕ್ಕೆ ಬಂದ 19 ಪ್ರಯಾಣಿಕರಿಗೆ ಕೋವಿಡ್..!
ಜನರಿಗೆ ಸರ್ಕಾರದ ಮೇಲೆ ನಂಬಿಕೆ ಬರಬೇಕು. ಹೀಗಾಗಿ, ರಾಜ್ಯವ್ಯಾಪಿ ಮಾಕ್ ಡ್ರಿಲ್ ಮಾಡಲಾಗುತ್ತಿದೆ. ಜನಜಂಗುಳಿ ಪ್ರದೇಶದಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಗರ್ಭಿಣಿಯರು ಹಾಗೂ ಚಿಕ್ಕಮಕ್ಕಳು ಎಚ್ಚರದಿಂದ ಇರಬೇಕು ಎಂದರು.