ಕೋವಿಡ್ ಬಗ್ಗೆ ಗಾಬರಿಯಾಗದೆ ಎಚ್ಚರಿಕೆಯಿಂದಿರುವುದು ಅಗತ್ಯ. ಕೋವಿಡ್ ಕುರಿತು ಕಂದಾಯ ಸಚಿವ ಆರ್.ಅಶೋಕ್ ಹಾಗೂ ಆರೋಗ್ಯ ಸಚಿವ ಡಾ.ಸುಧಾಕರ್ ಶೀಘ್ರದಲ್ಲೇ ಸಭೆ ನಡೆಸಲಿದ್ದಾರೆ. ಬಳಿಕ ಮಾರ್ಗಸೂಚಿ ಪ್ರಕಟಿಸಲಿದ್ದಾರೆ ಎಂದ ಸಿಎಂ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ/ಹಾವೇರಿ(ಡಿ25): ಚೀನಾ, ಜಪಾನ್ ಸೇರಿ ಹೊರದೇಶಗಳಲ್ಲಿ ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೊಸ ವರ್ಷಾಚರಣೆಗೆ ರಾಜ್ಯದಲ್ಲಿ ನೂತನ ಮಾರ್ಗಸೂಚಿ ಬಿಡುಗಡೆಯಾಗಲಿದೆ. ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ನೂತನ ಮಾರ್ಗಸೂಚಿ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಹುಬ್ಬಳ್ಳಿ ಮತ್ತು ಶಿಗ್ಗಾಂವಿಯಲ್ಲಿ ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಕೋವಿಡ್ ಬಗ್ಗೆ ಗಾಬರಿಯಾಗದೆ ಎಚ್ಚರಿಕೆಯಿಂದಿರುವುದು ಅಗತ್ಯ. ಕೋವಿಡ್ ಕುರಿತು ಕಂದಾಯ ಸಚಿವ ಆರ್.ಅಶೋಕ್ ಹಾಗೂ ಆರೋಗ್ಯ ಸಚಿವ ಡಾ.ಸುಧಾಕರ್ ಶೀಘ್ರದಲ್ಲೇ ಸಭೆ ನಡೆಸಲಿದ್ದಾರೆ. ಬಳಿಕ ಮಾರ್ಗಸೂಚಿ ಪ್ರಕಟಿಸಲಿದ್ದಾರೆ ಎಂದರು.
ಕೋವಿಡ್ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಭೆಯಲ್ಲಿ ಸೂಚಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಬೂಸ್ಟರ್ ಡೋಸ್ ನೀಡಲು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಶಿಬಿರ ಏರ್ಪಡಿಸುವುದು, ಪರೀಕ್ಷೆ ನಡೆಸುವುದು, ಪ್ರತಿಯೊಂದು ಐಎಲ್‌ಐ, ಸಾರಿ ಪ್ರಕರಣಗಳಿಗೆ ಕಡ್ಡಾಯವಾಗಿ ಪರೀಕ್ಷೆ ಕೈಗೊಳ್ಳುವುದು, ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು ಸೇರಿ ಮುಂತಾದ ಕ್ರಮ ಕೈಗೊಳ್ಳಲಾಗುವುದು ಎಂದರು.
undefined
ಭಾರತದಲ್ಲಿ ಹೆಚ್ಚಿದ ಕೋವಿಡ್ ಆತಂಕ, ದೆಹಲಿ ಮುಂಬೈ ಚರಂಡಿ ನೀರಿನಲ್ಲಿ COV-2 RNA ವೈರಸ್ ಪತ್ತೆ!
ಆರೋಗ್ಯ ಮೂಲಸೌಕರ್ಯಗಳಾದ ಔಷಧ, ಲಸಿಕೆ ದಾಸ್ತಾನು, ಆಮ್ಲಜನಕ ಘಟಕಗಳ ಡ್ರೈರನ್‌ಗೆ ಆರೋಗ್ಯ ಸಚಿವರಿಗೆ ಸೂಚಿಸಲಾಗಿದೆ. ವಿಮಾನ ನಿಲ್ದಾಣದಲ್ಲೂ ನಿರಂತರವಾಗಿ ನಿಗಾ ವಹಿಸಿ, ನಿರ್ಬಂಧಗಳನ್ನು ಹೇರಲಾಗಿದೆ. ವ್ಯಕ್ತಿ, ಸಂಘ, ಸರ್ಕಾರ, ಸಮಾಜ ಎಲ್ಲರೂ ಸೇರಿ ಇದನ್ನು ಎದುರಿಸಬೇಕಿದೆ ಎಂದರು.
ಆಸ್ಪತ್ರೆಗಳಲ್ಲಿ ಆಕ್ಸಿಜನ್, ಬೆಡ್‌ಗಳು ಸೇರಿ ಮೂಲ ಸೌಕರ್ಯ, ತಂತ್ರಜ್ಞಾನ ಅಳವಡಿಸಲಾಗುವುದು. ಮೊದಲು ಪಾಲಿಸುತ್ತಿದ್ದ ನಿಯಂತ್ರಣಾ ಕ್ರಮಗಳನ್ನು ಮತ್ತೆ ಜಾರಿಗೊಳಿಸಲಾಗುವುದು ಎಂದರು.
ಮುಂಜಾಗ್ರತಾ ಕ್ರಮ:
ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊರೋನಾತಂಕದ ಕುರಿತು ಪ್ರತಿಕ್ರಿಯೆ ನೀಡಿ, ಸಮ್ಮೇಳನ ಬಯಲು ಪ್ರದೇಶದಲ್ಲಿ ಆಗುವುದರಿಂದ ತೊಂದರೆಯ ಸಾಧ್ಯತೆ ಇಲ್ಲ. ಆದರೂ ಮುಂಜಾಗ್ರತಾ ಕ್ರಮಕ್ಕೆ ಸಂಬಂಧಿಸಿ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದರು.